ಜುಲೈ 10 ರಂದು ಮದ್ಯದ ಸನ್ನದುಗಳ ಇ-ಹರಾಜು ಪ್ರಕ್ರಿಯೆ ಕುರಿತು ಬಿಡ್ಡುದಾರರಿಗೆ ತರಬೇತಿ

 

ಜುಲೈ 10 ರಂದು ಮದ್ಯದ ಸನ್ನದುಗಳ ಇ-ಹರಾಜು ಪ್ರಕ್ರಿಯೆ ಕುರಿತು ಬಿಡ್ಡುದಾರರಿಗೆ ತರಬೇತಿ



ಕರ್ನಾಟಕ ಸರ್ಕಾರದ ಅಧಿಸೂಚನೆ ಅನ್ವಯ ಅಬಕಾರಿ ಇಲಾಖೆಯ ಖಾಲಿ ಅಥವಾ ಲಭ್ಯವಿರುವ ಮದ್ಯದ ಸನ್ನದುಗಳನ್ನು (ಸಿಎಲ್-2ಎ ಚಿಲ್ಲರೆ ಮದ್ಯ ಮಾರಾಟ ಮತ್ತು ಸಿಎಲ್-9ಎ ರಿಫ್ರೆಶ್‌ಮೆಂಟ್ ರೂಂ ಬಾರ್) ಎಲೆಕ್ಟ್ರಾನಿಕ್ ಹರಾಜಿನ ಮೂಲಕ ಇ-ಹರಾಜು ಮಾಡಲು ಸರ್ಕಾರ ಉದ್ದೇಶಿಸಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಹರಾಜಾಗಲಿರುವ ಸನ್ನದುಗಳ ಇ-ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸುವ ಸಂಭಾವ್ಯ ಬಿಡ್ಡುದಾರರಿಗೆ ಜುಲೈ 10 ರಂದು ತರಬೇತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ ಎಂದು ಶಿವಮೊಗ್ಗ ಜಿಲ್ಲೆಯ ಅಬಕಾರಿ ಡೆಪ್ಯೂಟಿ ಕಮಿಷನರ್ ತಿಳಿಸಿದ್ದಾರೆ.


15 ಮದ್ಯದ ಸನ್ನದುಗಳ ಹಂಚಿಕೆ ವಿವರ:


ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದಂತೆ ಒಟ್ಟು 15 ಸನ್ನದುಗಳನ್ನು ಇ-ಹರಾಜು ಮಾಡಲು ಹಂಚಿಕೆ ಮಾಡಲಾಗಿದ್ದು, ವಲಯವಾರು ವಿವರ ಹೀಗಿದೆ:ಶಿವಮೊಗ್ಗ ವಲಯ-1: 01, ಶಿವಮೊಗ್ಗ ವಲಯ-2: 02ಭದ್ರಾವತಿ: 03, ಶಿಕಾರಿಪುರ: 01, ಸಾಗರ: 02, ಸೊರಬ: 02, ತೀರ್ಥಹಳ್ಳಿ: 02, ಹೊಸನಗರ: 02.
ಇ-ಹರಾಜು ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಆಸಕ್ತಿ ಹೊಂದಿರುವ ಬಿಡ್ಡುದಾರರಿಗೆ ಮಾರ್ಗದರ್ಶನ ನೀಡಲು
ದಿನಾಂಕ: 10-07-2026
ಬೆಳಿಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಜಿಲ್ಲಾ ಸರ್ಕಾರಿ ನೌಕರರ ಭವನ, ಆರ್.ಟಿ.ಒ. ಕಚೇರಿ ರಸ್ತೆ, ಡಿಸಿ ಕಾಂಪೌಂಡ್, ಶಿವಮೊಗ್ಗ ಇಲ್ಲಿ ತರಬೇತಿ ಆಯೋಜಿಸಲಾಗಿದೆ.

ಇ-ಹರಾಜು ಪ್ರಕ್ರಿಯೆಗೆ ಸಂಬಂಧಿಸಿದಂತೆ ಯಾವುದೇ ರೀತಿಯ ಸಂಶಯ ಅಥವಾ ಪ್ರಶ್ನೆಗಳಿದ್ದಲ್ಲಿ ಸಾರ್ವಜನಿಕರು ಹಾಗೂ ಆಸಕ್ತ ಬಿಡ್ಡುದಾರರು ಇಲಾಖೆಯ ಅಧಿಕೃತ ವೆಬ್‌ಸೈಟ್ https://stateexcise.karnataka.gov.in/en ಗೆ ಭೇಟಿ ನೀಡಿ ಪರಿಶೀಲಿಸಬಹುದು ಎಂದು ಪ್ರಕಟಣೆಯಲ್ಲಿ ಕೋರಲಾಗಿದೆ.

ಸುದ್ದಿ ಮತ್ತು ಜಾಹೀರಾತು ನೀಡಲು-7204641701

ಮೀನಿನಹೆಜ್ಜೆ ನ್ಯೂಸ್, ಸಾಗರ

Comments

Popular posts from this blog

ಸಾಗರದಲ್ಲಿ SIR ಪ್ರಕ್ರಿಯೆಯಲ್ಲಿ ಅಕ್ರಮ. ಬಿ ವೈ ವಿಜಯೇಂದ್ರ ಆರೋಪ...

ರಜಪೂತ ಸಮಾಜ ಅಭಿವೃದ್ಧಿ ಮಂಡಳಿ ರಚಿಸುವ ಬಗ್ಗೆ ಸಾಗರ ಉಪವಿಭಾಗಾಧಿಕಾರಿಗಳ ಮೂಲಕ ಸರಕಾರಕ್ಕೆ ಸಾಗರ ತಾಲ್ಲೂಕು ರಜಪೂತ ಸಮಾಜದಿಂದ ಮನವಿ

ವಿವೇಕ ಸೂರ್ಯ ಎಂಬ ಅವಿವೇಕಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ-ಚಾರೋಡಿ ಕೊಂಕಣಿ ಆಚಾರ್ ಸಮಾಜ