ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಮೊದಲ ಸಾಧನೆ ; ಹರತಾಳು ಬೂತ್‌ನಲ್ಲಿ ಶೇ.100 ಮತದಾರರ ಪಟ್ಟಿ ಪರಿಷ್ಕರಣೆ ಯಶಸ್ವಿ
ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಮೊದಲ ಸಾಧನೆ ; ಹರತಾಳು ಬೂತ್‌ನಲ್ಲಿ ಶೇ.100 ಮತದಾರರ ಪಟ್ಟಿ ಪರಿಷ್ಕರಣೆ ಯಶಸ್ವಿ
ಬೂತ್'ನ ಬಿಎಲ್‌ಎ-2 ಆಗಿ ಕಾರ್ಯನಿರ್ವಹಿಸಿದ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹೆಚ್. ಹರತಾಳು ಹಾಲಪ್ಪ ಅವರ ಸಲಹೆ ಮತ್ತು ಸಹಕಾರವೂ ಪ್ರಮುಖಸಾಗರ : ಜಿಲ್ಲೆಯ ಸಾಗರ–ಹೊಸನಗರ ವಿಧಾನಸಭಾ ಕ್ಷೇತ್ರದಲ್ಲಿ ಶೇ.100ರಷ್ಟು ಮತದಾರರ ಪಟ್ಟಿ ಪರಿಷ್ಕರಣೆ ಪೂರ್ಣಗೊಳಿಸಿದ ಮೊದಲ ಬೂತ್ ಎಂಬ ಹೆಗ್ಗಳಿಕೆಗೆ ಹರತಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೂತ್ ಸಂಖ್ಯೆ 195 ಪಾತ್ರವಾಗಿದೆ.ಈ ಸಾಧನೆಯ ಹಿಂದೆ ಬಿಎಲ್‌ಒ ಕಾವ್ಯಾ, ಗ್ರಾಮ ಲೆಕ್ಕಾಧಿಕಾರಿ ಶೋಭಾ, ಪಿಡಿಒ ಪರಮೇಶ್ವರ್ ಬಿ.ಬಿ. ಸೇರಿದಂತೆ ಅಧಿಕಾರಿಗಳು, ಸಿಬ್ಬಂದಿ ಹಾಗೂ ಕಾರ್ಯಕರ್ತರ ಪರಿಶ್ರಮವಿದೆ.
ಜೊತೆಗೆ ಇದೇ ಬೂತ್‌ನ ಬಿಎಲ್‌ಎ-2 ಆಗಿ ಕಾರ್ಯನಿರ್ವಹಿಸಿದ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹೆಚ್. ಹರತಾಳು ಹಾಲಪ್ಪ ಅವರ ಸಲಹೆ ಮತ್ತು ಸಹಕಾರವೂ ಪ್ರಮುಖ ಪಾತ್ರ ವಹಿಸಿದೆ.ಶೇ.100ರಷ್ಟು ಮತದಾರರ ಪಟ್ಟಿ ಪರಿಷ್ಕರಣೆ ಯಶಸ್ವಿಯಾಗಿ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಹಾಲಪ್ಪ ಅವರು ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಹಾರ ಹಾಕಿ, ಶಾಲು ಹೊದಿಸಿ ಸನ್ಮಾನಿಸಿ ಅಭಿನಂದಿಸಿದರು.ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಮತದಾರರ ಪಟ್ಟಿ ಪರಿಷ್ಕರಣೆ ಪ್ರಜಾಪ್ರಭುತ್ವದ ಅತ್ಯಂತ ಮಹತ್ವದ ಪ್ರಕ್ರಿಯೆಯಾಗಿದ್ದು, ಇದನ್ನು ಯಶಸ್ವಿಗೊಳಿಸಿದ ಪ್ರತಿಯೊಬ್ಬ ಅಧಿಕಾರಿ, ಸಿಬ್ಬಂದಿ ಹಾಗೂ ಕಾರ್ಯಕರ್ತರ ಸೇವೆ ಶ್ಲಾಘನೀಯವಾಗಿದೆ ಎಂದು ಹೇಳಿದರು.
ಇದೇ ರೀತಿಯ ಜನಪರ ಕಾರ್ಯಗಳು ಮುಂದಿನ ದಿನಗಳಲ್ಲಿಯೂ ಯಶಸ್ವಿಯಾಗಿ ಮುಂದುವರಿಯಲಿ ಎಂದು ಆಶಯ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಪಕ್ಷದ ಹಿರಿಯ ಮುಖಂಡ ಆರ್.ಟಿ. ಗೋಪಾಲ್, ಹೊಸನಗರ ತಾಲೂಕು ಬಿಜೆಪಿ ಉಪಾಧ್ಯಕ್ಷ ಮೆಣಸೆ ಆನಂದ್, ಕೆರೆಹಳ್ಳಿ ಹೋಬಳಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಸುಂದರೇಶ್, ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ್, ಸ್ಥಳೀಯ ಮುಖಂಡರಾದ ಕಲ್ಲಿ ಯೋಗೇಂದ್ರಪ್ಪ, ಸುರೇಶ್, ಲೋಕೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಸುದ್ದಿ ಮತ್ತು ಜಾಹೀರಾತು ನೀಡಲು-7204641701
ಮೀನಿನಹೆಜ್ಜೆ ನ್ಯೂಸ್, ಸಾಗರ


Comments
Post a Comment