ಹಲಸು ಮತ್ತು ಮಾವು ಮೇಳಕ್ಕೆ ಸಾಗರ ಸಜ್ಜು – ಜುಲೈ 17ರಿಂದ ಮೂರು ದಿನಗಳ ವೈವಿಧ್ಯಮಯ ಮೇಳ

ಹಲಸು ಮತ್ತು ಮಾವು ಮೇಳಕ್ಕೆ ಸಾಗರ ಸಜ್ಜು – ಜುಲೈ 17ರಿಂದ ಮೂರು ದಿನಗಳ ವೈವಿಧ್ಯಮಯ ಮೇಳ

ಸಾಗರ: ರೋಟರಿ ಕ್ಲಬ್ ಸಾಗರ, ರೋಟರಿ ಇನ್ನರ್ ವೀಲ್ ಕ್ಲಬ್ ಸಾಗರ ಯುನಿಕ್ ಹಾಗೂ ರೈತರ ಸಂಘ ಸಾಗರ ಇವರ ಸಹಯೋಗದೊಂದಿಗೆ, ಬೆನಕ ಇವೆಂಟ್ಸ್ ಕುಂದಾಪುರ ವತಿಯಿಂದ ಎರಡನೇ ವರ್ಷದ ಹಲಸು ಮತ್ತು ಮಾವು ಮೇಳವನ್ನು ಜುಲೈ 17, 18 ಮತ್ತು 19ರಂದು ಸಾಗರದ ಗಾಂಧಿ ಮೈದಾನದಲ್ಲಿ ಆಯೋಜಿಸಲಾಗಿದೆ.

ಪ್ರತಿದಿನ ಬೆಳಗ್ಗೆ 10 ಗಂಟೆಯಿಂದ ರಾತ್ರಿ 9.30 ಗಂಟೆಯವರೆಗೆ ನಡೆಯಲಿರುವ ಈ ಮೇಳದಲ್ಲಿ ವಿವಿಧ ತಳಿಯ ಹಲಸು ಮತ್ತು ಮಾವಿನ ಹಣ್ಣುಗಳು, ಮೌಲ್ಯವರ್ಧಿತ ಆಹಾರ ಉತ್ಪನ್ನಗಳು, ಕೃಷಿ ಸಂಬಂಧಿತ ವಸ್ತುಗಳು ಹಾಗೂ ಸ್ಥಳೀಯ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ.

ರೈತರು ತಮ್ಮ ಉತ್ಪನ್ನಗಳನ್ನು ನೇರವಾಗಿ ಗ್ರಾಹಕರಿಗೆ ತಲುಪಿಸುವ ಉದ್ದೇಶದಿಂದ ಆಯೋಜಿಸಿರುವ ಈ ಮೇಳದಲ್ಲಿ ಜಿಲ್ಲೆಯ ವಿವಿಧ ಭಾಗಗಳ ರೈತರು ಹಾಗೂ ಉದ್ಯಮಿಗಳು ಭಾಗವಹಿಸಲಿದ್ದಾರೆ. ಸಾರ್ವಜನಿಕರು ಕುಟುಂಬ ಸಮೇತರಾಗಿ ಆಗಮಿಸಿ ಮೇಳದ ಸದುಪಯೋಗ ಪಡೆದುಕೊಳ್ಳುವಂತೆ ಆಯೋಜಕರು ಮನವಿ ಮಾಡಿದ್ದಾರೆ.

ಸುದ್ದಿ ಮತ್ತು ಜಾಹೀರಾತು ನೀಡಲು-7204641701

ಮೀನಿನಹೆಜ್ಜೆ ನ್ಯೂಸ್, ಸಾಗರ

Comments

Popular posts from this blog

ಸಾಗರದಲ್ಲಿ SIR ಪ್ರಕ್ರಿಯೆಯಲ್ಲಿ ಅಕ್ರಮ. ಬಿ ವೈ ವಿಜಯೇಂದ್ರ ಆರೋಪ...

ರಜಪೂತ ಸಮಾಜ ಅಭಿವೃದ್ಧಿ ಮಂಡಳಿ ರಚಿಸುವ ಬಗ್ಗೆ ಸಾಗರ ಉಪವಿಭಾಗಾಧಿಕಾರಿಗಳ ಮೂಲಕ ಸರಕಾರಕ್ಕೆ ಸಾಗರ ತಾಲ್ಲೂಕು ರಜಪೂತ ಸಮಾಜದಿಂದ ಮನವಿ

ವಿವೇಕ ಸೂರ್ಯ ಎಂಬ ಅವಿವೇಕಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ-ಚಾರೋಡಿ ಕೊಂಕಣಿ ಆಚಾರ್ ಸಮಾಜ