ರಾಹುಲ್ ಸಭೆ ಅಂತ್ಯ, ಬೆಂಗಳೂರಿನತ್ತ ಡಿಕೆಶಿ : ಸಂಪುಟ ವಿಸ್ತರಣೆ ಕಥೆ ಏನಾಯ್ತು, ಆಗಸ್ಟ್ 3ಕ್ಕೆ ಮುಂದೂಡಿಕೆ?
ರಾಹುಲ್ ಸಭೆ ಅಂತ್ಯ, ಬೆಂಗಳೂರಿನತ್ತ ಡಿಕೆಶಿ : ಸಂಪುಟ ವಿಸ್ತರಣೆ ಕಥೆ ಏನಾಯ್ತು, ಆಗಸ್ಟ್ 3ಕ್ಕೆ ಮುಂದೂಡಿಕೆ?
ನವದೆಹಲಿ : ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಅಂತಿಮ ಘಟ್ಟ ತಲುಪಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಇಂದು ರಾಹುಲ್ ಗಾಂಧಿ ರಾಜ್ಯ ನಾಯಕರ ಜೊತೆ ಸಭೆ ಮಾಡಿದರು.
ಡಿಕೆ ಶಿವಕುಮಾರ್, ಸಿದ್ದರಾಮಯ್ಯ, ಬಿಕೆ ಹರಿಪ್ರಸಾದ್, ಕೆಸಿ ವೇಣುಗೋಪಾಲ್, ಸುರ್ಜೆವಾಲ ಹಾಗೂ ಮಲ್ಲಿಕಾರ್ಜುನ ಖರ್ಗೆ ಸಭೆಯಲ್ಲಿ ಭಾಗಿಯಾಗಿದ್ದು, ನೂತನ ಸಚಿವರ ಪಟ್ಟಿ ಬಗ್ಗೆ ಮಾತುಕತೆ ನಡೆಸಿದ್ದಾರೆ.
ಇದೀಗ ಸಭೆ ಅಂತ್ಯವಾಗಿದ್ದು, ಡಿಕೆ ಶಿವಕುಮಾರ್ ನಾಲ್ಕು ದಿನಗಳ ಬಳಿಕ ಇವತ್ತು ರಾತ್ರಿಯೇ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ. ಆದ್ರೆ, ನೂತನ ಸಚಿವ ಪಟ್ಟಿ ಮಾತ್ರ ಇನ್ನೂ ನಿಗೂಢವಾಗಿದೆ.
ಯಾಕಂದ್ರೆ ರಾಹುಲ್ ಗಾಂಧಿ ಅವರು ರಾಜ್ಯ ನಾಯಕರೊಂದಿಗಿನ ಸಭೆ ಬಳಿಕ ಖರ್ಗೆ, ಸುರ್ಜೆವಾಲ, ವೇಣುಗೋಪಾಲ್ ಜೊತೆ ಚರ್ಚೆ ಮುಂದುವರೆಸಿದ್ದು, ಪಟ್ಟಿ ಫೈನಲ್ ಮಾಡಿ ಭಾನುವಾರ ರಾತ್ರಿ ರವಾನಿಸುವ ಸಾಧ್ಯತೆಗಳಿವೆ.
ಹೀಗಾಗಿ ಸಂಪುಟ ವಿಸ್ತರಣೆ ಸಂಬಂಧ ಕಳೆದ ನಾಲ್ಕು ದಿನಗಳಿಂದ ದೆಹಲಿಯಲ್ಲೇ ಬೀಡು ಬಿಟ್ಟಿದ್ದ ಸಿಎಂ ಡಿಕೆ ಶಿವಕುಮಾರ್ ಇಂದು ರಾತ್ರಿಯೇ ಬೆಂಗಳೂರಿಗೆ ವಾಪಸ್ ಆಗಲಿದ್ದು, ಆಗಸ್ಟ್ 3ರಂದು ಸೋಮವಾರ ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮ ನಡೆಯುವ ಸಾಧ್ಯತೆಗಳಿವೆ.
ಸುದ್ದಿ ಮತ್ತು ಜಾಹೀರಾತು ನೀಡಲು-7204641701
ಮೀನಿನಹೆಜ್ಜೆ ನ್ಯೂಸ್, ಸಾಗರ


Comments
Post a Comment