ಭಾರಿ ಮಳೆ: ಸಾಗರ ಮತ್ತು ಹೊಸನಗರ ತಾಲ್ಲೂಕಿನ ಶಾಲೆ, ಅಂಗನವಾಡಿಗಳಿಗೆ ಇಂದು (ಜುಲೈ 7) ರಜೆ ಘೋಷಣೆ


ಭಾರಿ ಮಳೆ: ಸಾಗರ ಮತ್ತು ಹೊಸನಗರ ತಾಲ್ಲೂಕಿನ ಶಾಲೆ, ಅಂಗನವಾಡಿಗಳಿಗೆ ಇಂದು (ಜುಲೈ 7) ರಜೆ ಘೋಷಣೆ

ಸಾಗರ: ತಾಲ್ಲೂಕಿನಾದ್ಯಂತ ನಿರಂತರವಾಗಿ ಬೀಸುತ್ತಿರುವ ಭಾರಿ ಗಾಳಿ ಮತ್ತು ಮಳೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸಾಗರ ತಾಲ್ಲೂಕಿನ ಎಲ್ಲಾ ಅಂಗನವಾಡಿಗಳು, ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ಜುಲೈ 7ರ ಮಂಗಳವಾರವಾದ ಇಂದು ರಜೆ ಘೋಷಿಸಿ ತಹಶೀಲ್ದಾರ್ ಡಾ. ಪ್ರತಿಭಾ ಅವರು ಆದೇಶ ಹೊರಡಿಸಿದ್ದಾರೆ.

ತಾಲ್ಲೂಕಿನಲ್ಲಿ ಮಳೆಯ ತೀವ್ರತೆ ಹೆಚ್ಚಾಗಿರುವುದರಿಂದ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಆದರೆ, ಈ ರಜೆಯು ಪಿಯುಸಿ, ಪದವಿ ಹಾಗೂ ಡಿಪ್ಲೊಮಾ ಕಾಲೇಜುಗಳಿಗೆ ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದ್ದು, ಎಂದಿನಂತೆ ಕಾಲೇಜುಗಳು ಕಾರ್ಯನಿರ್ವಹಿಸಲಿವೆ ಎಂದು ತಿಳಿಸಲಾಗಿದೆ.


ಭಾರಿ ಮಳೆ: ಹೊಸನಗರ ತಾಲ್ಲೂಕಿನ ಶಾಲೆ, ಅಂಗನವಾಡಿಗಳಿಗೆ ಇಂದು (ಜುಲೈ 7) ರಜೆ ಘೋಷಣೆ

ಹೊಸನಗರ : ತಾಲ್ಲೂಕಿನಾದ್ಯಂತ ನಿರಂತರವಾಗಿ ಬೀಸುತ್ತಿರುವ ಭಾರಿ ಗಾಳಿ ಮತ್ತು ಮಳೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹೊಸನಗರ ತಾಲ್ಲೂಕಿನ ಎಲ್ಲಾ ಅಂಗನವಾಡಿಗಳು, ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ಜುಲೈ 7ರ ಮಂಗಳವಾರದಂದು ರಜೆ ಘೋಷಿಸಿ ತಹಶೀಲ್ದಾರ್ ಭರತ್'ರಾಜ್ ಅವರು ಆದೇಶ ಹೊರಡಿಸಿದ್ದಾರೆ.

ಮೀನಿನಹೆಜ್ಜೆ ನ್ಯೂಸ್, ಸಾಗರ
ಸುದ್ದಿ ಮತ್ತು ಜಾಹೀರಾತು ನೀಡಲು-7204641701

Comments

Popular posts from this blog

ಸಾಗರದಲ್ಲಿ SIR ಪ್ರಕ್ರಿಯೆಯಲ್ಲಿ ಅಕ್ರಮ. ಬಿ ವೈ ವಿಜಯೇಂದ್ರ ಆರೋಪ...

ರಜಪೂತ ಸಮಾಜ ಅಭಿವೃದ್ಧಿ ಮಂಡಳಿ ರಚಿಸುವ ಬಗ್ಗೆ ಸಾಗರ ಉಪವಿಭಾಗಾಧಿಕಾರಿಗಳ ಮೂಲಕ ಸರಕಾರಕ್ಕೆ ಸಾಗರ ತಾಲ್ಲೂಕು ರಜಪೂತ ಸಮಾಜದಿಂದ ಮನವಿ

ವಿವೇಕ ಸೂರ್ಯ ಎಂಬ ಅವಿವೇಕಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ-ಚಾರೋಡಿ ಕೊಂಕಣಿ ಆಚಾರ್ ಸಮಾಜ