ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಗೆ ಅರ್ಜಿ ಆಹ್ವಾನ

 

ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಗೆ ಅರ್ಜಿ ಆಹ್ವಾನ

ಭದ್ರಾವತಿ: ತಾಲ್ಲೂಕಿನ ತೋಟಗಾರಿಕೆ ಇಲಾಖೆಯು 2026-27ನೇ ಸಾಲಿನ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ನೋಂದಣಿಗೆ ಅವಕಾಶ ಕಲ್ಪಿಸಿದೆ ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.

ಫಸಲು ನೀಡುತ್ತಿರುವ ಅಡಿಕೆ, ಮಾವು, ಕಾಳುಮೆಣಸು ಮತ್ತು ನಾಟಿ ಮಾಡಿರುವ ಶುಂಠಿ ಬೆಳೆಗಳಿಗೆ ರೈತರು ವಿಮೆ ಮಾಡಿಸಬಹುದಾಗಿದೆ. ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ರೈತ ಸಂಪರ್ಕ ಕೇಂದ್ರ ಅಥವಾ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯಿಂದ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯೊಂದಿಗೆ ಪ್ರಸಕ್ತ ಸಾಲಿನ ಪಹಣಿ, ಬ್ಯಾಂಕ್ ಪಾಸ್‌ಬುಕ್ ಪ್ರತಿ, ಆಧಾರ್ ಕಾರ್ಡ್ ಹಾಗೂ ಸ್ವಯಂ ಘೋಷಿತ ಬೆಳೆ ವಿವರಗಳನ್ನು ಲಗತ್ತಿಸಿ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ, ಗ್ರಾಮ ಒನ್ ಅಥವಾ ಬ್ಯಾಂಕುಗಳಲ್ಲಿ ಜುಲೈ 31ರ ಒಳಗೆ ವಿಮೆ ಕಂತು ಪಾವತಿಸಬೇಕಾಗಿದೆ.

ಸುದ್ದಿ ಮತ್ತು ಜಾಹೀರಾತು ನೀಡಲು-7204641701
ಮೀನಿನಹೆಜ್ಜೆ ನ್ಯೂಸ್, ಸಾಗರ

Comments

Popular posts from this blog

ಸಾಗರದಲ್ಲಿ SIR ಪ್ರಕ್ರಿಯೆಯಲ್ಲಿ ಅಕ್ರಮ. ಬಿ ವೈ ವಿಜಯೇಂದ್ರ ಆರೋಪ...

ರಜಪೂತ ಸಮಾಜ ಅಭಿವೃದ್ಧಿ ಮಂಡಳಿ ರಚಿಸುವ ಬಗ್ಗೆ ಸಾಗರ ಉಪವಿಭಾಗಾಧಿಕಾರಿಗಳ ಮೂಲಕ ಸರಕಾರಕ್ಕೆ ಸಾಗರ ತಾಲ್ಲೂಕು ರಜಪೂತ ಸಮಾಜದಿಂದ ಮನವಿ

ವಿವೇಕ ಸೂರ್ಯ ಎಂಬ ಅವಿವೇಕಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ-ಚಾರೋಡಿ ಕೊಂಕಣಿ ಆಚಾರ್ ಸಮಾಜ