ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ತಾತ್ಕಾಲಿಕ ಬ್ರೇಕ್; ಆಕಾಂಕ್ಷಿಗಳಿಗೆ ಮತ್ತೆ ನಿರಾಸೆ
ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ತಾತ್ಕಾಲಿಕ ಬ್ರೇಕ್; ಆಕಾಂಕ್ಷಿಗಳಿಗೆ ಮತ್ತೆ ನಿರಾಸೆ
ನವದೆಹಲಿ: ರಾಜ್ಯ ಕಾಂಗ್ರೆಸ್ ಸಚಿವ ಸಂಪುಟ ವಿಸ್ತರಣೆಗಾಗಿ ಕಾಯುತ್ತಿದ್ದ ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಮತ್ತೆ ನಿರಾಸೆಯಾಗಿದೆ. ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದ್ದು, ಇನ್ನೂ ಕೇಲವು ದಿನಗಳ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
ರಾಹುಲ್ ಗಾಂಧಿ ನಿವಾಸದಲ್ಲಿ ನಡೆದ ಸಭೆಯಲ್ಲಿ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೇವಾಲಾ ಭಾಗವಹಿಸಿ ರಾಜ್ಯದ ರಾಜಕೀಯ ಬೆಳವಣಿಗೆಗಳು ಹಾಗೂ ಸಚಿವ ಸಂಪುಟ ವಿಸ್ತರಣೆ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ದೆಹಲಿಯಲ್ಲಿ ಕಾಂಗ್ರೆಸ್ ನಾಯಕತ್ವದೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ.
ಸಭೆಯ ಬಳಿಕ ಮಾತನಾಡಿದ ಬಿ.ಕೆ. ಹರಿಪ್ರಸಾದ್, ಸಚಿವ ಸಂಪುಟ ವಿಸ್ತರಣೆ ಕುರಿತು ಸಮಗ್ರ ಚರ್ಚೆ ನಡೆದಿದ್ದು, ಸದ್ಯಕ್ಕೆ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ.ರಾಹುಲ್ ಗಾಂಧಿ, ಸುರ್ಜೇವಾಲಾ ಹಾಗೂ ವೇಣುಗೋಪಾಲ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದೇವೆ. ಎಲ್ಲ ವಿಷಯಗಳನ್ನೂ ನಾಯಕತ್ವದ ಮುಂದೆ ಮಂಡಿಸಲಾಗಿದೆ. ಸದ್ಯಕ್ಕೆ ತಾತ್ಕಾಲಿಕ ಮುಂದೂಡಿಕೆಯಾಗಿದೆ. ಇನ್ನೂ ಕೆಲವು ದಿನಗಳಲ್ಲಿ ಪ್ರಕ್ರಿಯೆ ಪೂರ್ಣಗೊಳ್ಳುವುತ್ತದೆ.
ಎಐಸಿಸಿ ಅಧ್ಯಕ್ಷರು ದೆಹಲಿಯಿಂದ ಬೆಂಗಳೂರಿಗೆ ಮರಳಿರುವ ಹಿನ್ನೆಲೆಯಲ್ಲಿ ಸಚಿವ ಸಂಪುಟ ವಿಸ್ತರಣೆ ಕುರಿತ ಅಂತಿಮ ನಿರ್ಧಾರವನ್ನು ಸದ್ಯ ಕೈಗೊಂಡಿಲ್ಲ. ಮುಂದಿನ ದಿನಗಳಲ್ಲಿ ಮತ್ತೆ ಸಭೆ ಕರೆದು ಚರ್ಚೆ ನಡೆಸಲಾಗುವುದು. ಆ ವೇಳೆ ದಿನಾಂಕ ನಿಗದಿಯಾದ ಬಳಿಕ ಮುಂದಿನ ಕ್ರಮ ಪ್ರಕಟಿಸಲಾಗುವುದು ಎಂದು ಹರಿಪ್ರಸಾದ್ ಸ್ಪಷ್ಟಪಡಿಸಿದರು.ಸಚಿವ ಸಂಪುಟ ವಿಸ್ತರಣೆ ಕುರಿತ ನಿರೀಕ್ಷೆ ಮತ್ತೊಮ್ಮೆ ಮುಂದೂಡಲ್ಪಟ್ಟಿರುವುದರಿಂದ ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್ ಶಾಸಕರಿಗೆ ಮತ್ತೆ ನಿರಾಸೆಯಾಗಿದೆ. ಈಗ ಪಕ್ಷದ ಹೈಕಮಾಂಡ್ ಮುಂದಿನ ಸಭೆಯ ದಿನಾಂಕ ಘೋಷಿಸಿದ ಬಳಿಕವೇ ವಿಸ್ತರಣೆಯ ಬಗ್ಗೆ ಸ್ಪಷ್ಟ ಚಿತ್ರಣ ಸಿಗುವ ಸಾಧ್ಯತೆಯಿದೆ.
ಸುದ್ದಿ ಮತ್ತು ಜಾಹೀರಾತು ನೀಡಲು-7204641701
ಮೀನಿನಹೆಜ್ಜೆ ನ್ಯೂಸ್, ಸಾಗರ

Comments
Post a Comment