ಯೋಜನೆ ಕೈಬಿಟ್ಟಿರುವ ಬಗ್ಗೆ ಯಾವುದೇ ಅಧಿಕೃತ ಆದೇಶವಿಲ್ಲ - ಬೇಸೂರು ಅಣು ಸ್ಥಾವರ ವಿಚಾರದಲ್ಲಿ ತಪ್ಪು ಮಾಹಿತಿ ನೀಡಿದ್ರಾ ಶಾಸಕರು?
ಯೋಜನೆ ಕೈಬಿಟ್ಟಿರುವ ಬಗ್ಗೆ ಯಾವುದೇ ಅಧಿಕೃತ ಆದೇಶವಿಲ್ಲ - ಬೇಸೂರು ಅಣು ಸ್ಥಾವರ ವಿಚಾರದಲ್ಲಿ ತಪ್ಪು ಮಾಹಿತಿ ನೀಡಿದ್ರಾ ಶಾಸಕರು?
ಯಾವುದ ಕಾರಣಕ್ಕೂ ಬೇಸೂರು ಅಣು ವಿದ್ಯುತ್ ಸ್ಥಾವರ ಯೋಜನೆ ಜಾರಿಯಾಗಲು ನಾವು ಬಿಡುವುದಿಲ್ಲ. ಆದರೆ ಈ ಗಂಭೀರ ವಿಚಾರದಲ್ಲಿ ಸಾಗರ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣ ಅವರು ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿದ್ದಾರೆ.
ಯೋಜನೆಯನ್ನು ಸರ್ಕಾರ ಕೈಬಿಟ್ಟಿದೆ" ಎಂದು ಶಾಸಕರು ಹೇಳಿದ್ದಾರೆ. ಆದರೆ, ಯಾವುದೇ ಯೋಜನೆ ರದ್ದಾಗಬೇಕಾದರೆ ಕ್ಯಾಬಿನೆಟ್‌ನಲ್ಲಿ ತೀರ್ಮಾನವಾಗಿ, ಅಧಿಕೃತ ನೋಟಿಫಿಕೇಷನ್ ಹೊರಬೀಳಬೇಕು. ಬೆಂಗಳೂರಿನಲ್ಲಿ ಈ ಬಗ್ಗೆ ವಿಚಾರಿಸಿದಾಗ, ಯೋಜನೆ ಕೈಬಿಟ್ಟಿರುವ ಕುರಿತು ಯಾವುದೇ ಅಧಿಕೃತ ಆದೇಶ ಅಥವಾ ಪ್ರಕಟಣೆ ಹೊರಬಂದಿಲ್ಲ ಎಂಬುದು ಸ್ಪಷ್ಟವಾಗಿದೆ.
ಈ ಸೂಕ್ಷ್ಮ ವಿಚಾರದ ಬಗ್ಗೆ ಸಂಬಂಧಪಟ್ಟ ಸಚಿವರು, ಮುಖ್ಯಮಂತ್ರಿಗಳು ಅಥವಾ ಜಿಲ್ಲಾ ಉಸ್ತುವಾರಿ ಸಚಿವರೇ ಅಧಿಕೃತವಾಗಿ ಸ್ಪಷ್ಟನೆ ನೀಡಬೇಕು. ಆದರೆ ಸರ್ಕಾರ ರಚನೆಯಾಗಿ ತಿಂಗಳಾಗುತ್ತಾ ಬಂದರೂ ಜಿಲ್ಲೆಗೆ ಉಸ್ತುವಾರಿ ಸಚಿವರೇ ಇಲ್ಲದಿರುವುದು ದುರಾದೃಷ್ಟಕರ. ರಾಜ್ಯ ಸರ್ಕಾರ ತಕ್ಷಣವೇ ಈ ಯೋಜನೆಯನ್ನು ಅಧಿಕೃತವಾಗಿ ರದ್ದುಗೊಳಿಸಿ ಆದೇಶ ಹೊರಡಿಸಬೇಕೆಂದು ಒತ್ತಾಯಿಸುತ್ತೇನೆ.
ಸುದ್ದಿ ಮತ್ತು ಜಾಹೀರಾತು ನೀಡಲು-7204641701
ಮೀನಿನಹೆಜ್ಜೆ ನ್ಯೂಸ್, ಸಾಗರ


Comments
Post a Comment