ಸಾಗರದ ಜಮಾಅತುಲ್ ಉಲಮಾ, ಸಾಲಿಡಾರಿಟಿ ಯೂತ್ ಫ್ರಂಟ್ ವತಿಯಿಂದ ನೀಟ್ ಪರೀಕ್ಷಾ ಅಕ್ರಮ ಮತ್ತು ವಿದ್ಯಾರ್ಥಿಗಳ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ, ಸಾಗರ ಉಪವಿಭಾಗಾಧಿಕಾರಿಗಳ ಕಚೇರಿಗೆ ಮನವಿ ಸಲ್ಲಿಕೆ
ಸಾಗರದ ಜಮಾಅತುಲ್ ಉಲಮಾ, ಸಾಲಿಡಾರಿಟಿ ಯೂತ್ ಫ್ರಂಟ್ ವತಿಯಿಂದ ನೀಟ್ ಪರೀಕ್ಷಾ ಅಕ್ರಮ ಮತ್ತು ವಿದ್ಯಾರ್ಥಿಗಳ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ, ಸಾಗರ ಉಪವಿಭಾಗಾಧಿಕಾರಿಗಳ ಕಚೇರಿಗೆ ಮನವಿ ಸಲ್ಲಿಕೆ
ಸಾಗರ: ದೇಶಾದ್ಯಂತ ಸದ್ದು ಮಾಡುತ್ತಿರುವ ನೀಟ್ (NEET) ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಅಕ್ರಮಗಳನ್ನು ಖಂಡಿಸಿ ಹಾಗೂ ಸಂಕಷ್ಟಕ್ಕೆ ಸಿಲುಕಿರುವ ಲಕ್ಷಾಂತರ ವಿದ್ಯಾರ್ಥಿಗಳಿಗೆ ಸೂಕ್ತ ನ್ಯಾಯ ಒದಗಿಸುವಂತೆ ಒತ್ತಾಯಿಸಿ ಜಮೆಅತುಲ್ ಉಲಮಾ, ಸಾಲಿಡಾರಿಟಿ ಯೂತ್ ಫ್ರಂಟ್ ಹಾಗೂ ವಿವಿಧ ಮುಖಂಡರ ನಿಯೋಗವು ಗುರುವಾರ ಉಪವಿಭಾಗಾಧಿಕಾರಿಗಳ ಕಚೇರಿಯ ಮುಂಭಾಗ ಸಾಂಕೇತಿಕ ಪ್ರತಿಭಟನೆ ನಡೆಸಿ ಮನವಿ ಪತ್ರ ಸಲ್ಲಿಸಿತು.
ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡ ಅಬ್ದುಲ್ ನವೀದ್, ದೇಶದಲ್ಲಿ ಸಾಲು ಸಾಲು ಪರೀಕ್ಷಾ ಅಕ್ರಮಗಳು ನಡೆಯುತ್ತಿದ್ದು, ಇದರಿಂದ ಲಕ್ಷಾಂತರ ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡಲಾಗುತ್ತಿದೆ.ದೆಹಲಿಯ ಜಂತರ್ ಮಂತರ್‌ನಲ್ಲಿ ಧರಣಿ ನಡೆಸುತ್ತಿರುವ ವಿದ್ಯಾರ್ಥಿಗಳ ಮೇಲೆ ನಡೆಯುತ್ತಿರುವ ದಬ್ಬಾಳಿಕೆ ಯನ್ನು ತೀವ್ರವಾಗಿ ಖಂಡಿಸಿದ ಅವರು, "ಕೇಂದ್ರ ಸರ್ಕಾರ ಹಾಗೂ ಪ್ರಧಾನ ಮಂತ್ರಿಗಳು ತಮ್ಮ ಮೌನ ಮುರಿದು, ವಿದ್ಯಾರ್ಥಿಗಳಿಗೆ ನ್ಯಾಯ ಸಿಗುವಂತೆ ತಕ್ಷಣ ಸೂಕ್ತ ಕ್ರಮ ಕೈಗೊಳ್ಳಬೇಕು" ಎಂದು ಆಗ್ರಹಿಸಿದರು.
ನಂತರ ಮುಖಂಡರುಗಳಾದ ಸದ್ದಾಂ ದೊಡ್ಮನೆ ಮತ್ತು ಅನೀಸ್ ಖಾನ್ (MIK) ಮಾತನಾಡಿ, ದೇಶದ ರಾಜಧಾನಿಯಲ್ಲಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಯುವಜನ ರು ಹಾಗೂ ವಿದ್ಯಾರ್ಥಿಗಳ ಮೇಲಾಗುತ್ತಿರುವ ಬೇಜವಾಬ್ದಾರಿ ನಡೆ ದೇಶದ ಪ್ರಜಾಸತ್ತಾತ್ಮಕ ಮೌಲ್ಯಗಳಿಗೆ ಧಕ್ಕೆ ತಂದಿದೆ. 'ಬೇಟಿ ಬಚಾವೋ, ಬೇಟಿ ಪಢಾವೋ' ಎಂಬ ಘೋಷಣೆಗಳ ನಡುವೆಯೇ ಪರೀಕ್ಷೆ ಬರೆದು ನ್ಯಾಯ ಕೇಳಲು ಹೊರಟ ವಿದ್ಯಾರ್ಥಿಗಳು ಬೀದಿಯಲ್ಲಿ ಅನುಭವಿಸುತ್ತಿರುವ ಕಷ್ಟಗಳನ್ನು ಕಂಡು ಕಳವಳ ವ್ಯಕ್ತಪಡಿಸಿದ ಅವರು, ಅಕ್ರಮದಲ್ಲಿ ಭಾಗಿಯಾದ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಪಾರದರ್ಶಕ ತನಿಖೆಯಾಗಬೇಕು ಎಂದು ಆಗ್ರಹಿಸಿದರು.
ಮೌಲಾನಾ ಸಯ್ಯದ್ ತೌಫಿಕ್ ರವರು,ಮಾತನಾಡಿ ಕೇಂದ್ರ ಶಿಕ್ಷಣ ಸಚಿವರು ವಿದ್ಯಾರ್ಥಿಗಳ ಭವಿಷ್ಯವನ್ನು ಹಾಳುಮಾಡಿದ ನೈತಿಕ ಹೊಣೆ ಹೊತ್ತು ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು."ದೇಶದ ಯುವಜನರು ಹಾಗೂ ರೈತರ ಹೋರಾಟಗಳನ್ನು ನಿರ್ಲಕ್ಷಿಸುತ್ತಿರುವ ಕೇಂದ್ರ ಸರ್ಕಾರದ ಧೋರಣೆ ಸರಿಯಲ್ಲ. ವಿದ್ಯಾರ್ಥಿಗಳಿಗೆ ನ್ಯಾಯ ಸಿಗುವವರೆಗೂ ಹಾಗೂ ಅಕ್ರಮಕ್ಕೆ ಕಾರಣರಾದವರನ್ನು ಶಿಕ್ಷಿಸುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ" ಎಂದು ಎಚ್ಚರಿಸಿದರು. ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಸ್ಥಳೀಯರು ಉಪವಿಭಾಗಾಧಿಕಾರಿಗಳ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಸಯ್ಯದ್ ಸುಹೇಲ್, ಅಬ್ದುಲ್ ಶಕೀಬ್, ಆರಿಫ್ ಅಲಿಖಾನ್, ನಯಾಜ್, ಅನ್ಸರ್ ಇಕ್ಬಾಲ್,ಮುಷಾಹಿದ್. ಇಲಿಯಾಸ್ (ಇಲ್ಲೂ) ಇಸ್ಮಾಯಿಲ್(ಮಾಲು) ಇಮ್ರಾನ್.ವಸೀಂ ದೊಡ್ಮನೆ ಅಮ್ಜದ್.ಮೊದಲಾದವರು ಹಾಜರಿದ್ದರು.
ಸುದ್ದಿ ಮತ್ತು ಜಾಹೀರಾತು ನೀಡಲು-7204641701
ಮೀನಿನಹೆಜ್ಜೆ ನ್ಯೂಸ್, ಸಾಗರ



Comments
Post a Comment