ಬಂಟರ ಯಾನೆ ನಾಡವರ ಸಂಘದ ವಾರ್ಷಿಕ ಮಹಾಸಭೆ ಮತ್ತು ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
ಬಂಟರ ಯಾನೆ ನಾಡವರ ಸಂಘದ ವಾರ್ಷಿಕ ಮಹಾಸಭೆ ಮತ್ತು ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
ಬೆಳ್ತಂಗಡಿ: ಬಂಟರ ಯಾನೆ ನಾಡವರ ಸಂಘದ ವಾರ್ಷಿಕ ಮಹಾಸಭೆ ಮತ್ತು ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಸಂಘದ ಅಧ್ಯಕ್ಷ ಜಯಂತ ಶೆಟ್ಟಿ ಭಂಡಾರಿಗುಡ್ಡೆ ರವರ ಅಧ್ಯಕ್ಷತೆಯಲ್ಲಿ ಜು.12 ರಂದು ಗುರುವಾಯನಕೆರೆ ಬಂಟರ ಭವನದಲ್ಲಿ ನಡೆಯಿತು.
ಬಂಟರ ಯಾನೆ ನಾಡವರ ಸಂಘದ ಮಾಜಿ ಅಧ್ಯಕ್ಷ ಜಯರಾಮ ಶೆಟ್ಟಿ ದೀಪ ಪ್ರಜ್ವಲನೆ ಮಾಡಿದರು ಕಾರ್ಯಕ್ರಮದಲ್ಲಿ ವಿಜಯ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿಯ ಅಧ್ಯಕ್ಷ ಅಜಿತ್ ಶೆಟ್ಟಿ, ಬಂಟರ ಯಾನೆ ನಾಡವರ ಸಂಘದ ಉಪಾಧ್ಯಕ್ಷ ನವೀನ್ ಸಾಮಾನಿ ಕರಂಬಾರುಬೀಡು, ಉಮೇಶ್ ಶೆಟ್ಟಿ, ಜೊತೆ ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ, ಬಂಟರ ಯಾನೆ ನಾಡವರ ಸಂಘದ ಮಹಿಳಾ ವಿಭಾಗದ ಅಧ್ಯಕ್ಷೆ ಜಯಲಕ್ಷ್ಮಿ ಎನ್ ಸಾಮಾನಿ, ಯುವ ವಿಭಾಗದ ಅಧ್ಯಕ್ಷ ಪ್ರತೀಕ್ ಶೆಟ್ಟಿ ನೊಚ್ಚ, ಬಂಟರ ಯಾನೆ ನಾಡವರ ಸಂಘದ ನಿಯೋಜಿತ ಅಧ್ಯಕ್ಷ ಪಿ.ಹೆಚ್.ಪ್ರಕಾಶ್ ಶೆಟ್ಟಿ ನೊಚ್ಚ, ಉಪಾಧ್ಯಕ್ಷ ರಾಜು ಶೆಟ್ಟಿ ಬೆಂಗತ್ಯಾರು, ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಸುಲ್ಕೇರಿ, ನಿಯೋಜಿತ ಮಹಿಳಾ ವಿಭಾಗದ ಅಧ್ಯಕ್ಷೆ ವಸುಧ ಶೆಟ್ಟಿ ಮೂಡಾಯೂರು, ಮಾಜಿ ಅಧ್ಯಕ್ಷರಾದ ರಘುರಾಮ ಶೆಟ್ಟಿ, ಪುಷ್ಪರಾಜ್ ಶೆಟ್ಟಿ, ಜಯರಾಮ ಭಂಡಾರಿ ಧರ್ಮಸ್ಥಳ ಉಪಸ್ಥಿತರಿದ್ದರು.
ನೂತನ ಪದಾಧಿಕಾರಿಗಳನ್ನು ಶಾಲು ಹಾಕಿ ಸ್ವಾಗತಿಸಲಾಯಿತು.ಬಂಟರ ಯಾನೆ ನಾಡವರ ಸಂಘದ ಸ್ವಾಗತಿಸಿ, ಕಾರ್ಯದರ್ಶಿ ಸುರೇಶ್ ಶೆಟ್ಟಿ ವರದಿ ಮಂಡಿಸಿದರು. ಕೋಶಾಧಿಕಾರಿ ವಸಂತ ಶೆಟ್ಟಿ ಶ್ರದ್ದಾ ಲೆಕ್ಕ ಪತ್ರ ಮಂಡನೆ ಮಾಡಿದರು. ಜೊತೆ ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ ಧನ್ಯವಾದವಿತ್ತರು.
ಸುದ್ದಿ ಮತ್ತು ಜಾಹೀರಾತು ನೀಡಲು-7204641701
ಮೀನಿನಹೆಜ್ಜೆ ನ್ಯೂಸ್, ಸಾಗರ


Comments
Post a Comment