ಸ್ವಾತಂತ್ರ ದಿನಾಚರಣೆಯನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸೋಣ-ಉಪವಿಭಾಗಾಧಿಕಾರಿ ವಿರೇಶ್ ಕುಮಾರ್

ಸ್ವಾತಂತ್ರ ದಿನಾಚರಣೆಯನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸೋಣ-ಉಪವಿಭಾಗಾಧಿಕಾರಿ ವಿರೇಶ್ ಕುಮಾರ್

ಸಾಗರ : ಸ್ವಾತಂತ್ರ ದಿನಾಚರಣೆಯನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸೋಣ. ಎಲ್ಲರೂ ಒಟ್ಟಾಗಿ ದೇಶಕ್ಕೆ ಸ್ವಾತಂತ್ರ ಬಂದ ದಿನವನ್ನು ಸ್ಮರಣೀಯವಾಗಿಸುವ ನಿಟ್ಟಿನಲ್ಲಿ ಶ್ರಮಿಸೋಣ ಎಂದು ಉಪವಿಭಾಗಾಧಿಕಾರಿ ವಿರೇಶ್ ಕುಮಾರ್ ತಿಳಿಸಿದರು.

ಇಲ್ಲಿನ ಉಪವಿಭಾಗಾಧಿಕಾರಿಗಳ ಕಚೇರಿ ಆವರಣದಲ್ಲಿ ಗುರುವಾರ ರಾಷ್ಟಿಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಸ್ವಾತಂತ್ರೊತ್ಸವ ಅಂಗವಾಗಿ ಕರೆಯಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಸ್ವಾತಂತ್ರದ ಯಶಸ್ಸಿಗಾಗಿ ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು, ಬೆಳಿಗ್ಗೆ 9ಕ್ಕೆ ನೆಹರೂ ಮೈದಾನದಲ್ಲಿ ಉಪವಿಭಾಗಾಧಿಕಾರಿಗಳು ಧ್ವಜಾರೋಹಣ ನೆರವೇರಿಸಲಿದ್ದು, ಶಾಸಕ ಗೋಪಾಲಕೃಷ್ಣ ಬೇಳೂರು ಅಧ್ಯಕ್ಷತೆ ವಹಿಸಲಿದ್ದಾರೆ. ವಿವಿಧ ತುಕಡಿಗಳಿಂದ ಪಥ ಸಂಚಲನ ನಡೆಯಲಿದೆ ಎಂದರು. ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಪ್ಲಾಸ್ಟಿಕ್ ಧ್ವಜ ಬಳಕೆಯನ್ನು ಕಡ್ಡಾಯವಾಗಿ ನಿಷೇದಿಸಲಾಗಿದೆ. ಪ್ಲಾಸ್ಟಿಕ್ ಧ್ವಜ ಬಳಕೆ, ಮಾರಾಟದ ವಿರುದ್ದ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುತ್ತದೆ. ಸಾರ್ವಜನಿಕರು ಧ್ವಜಾರೋಹಣ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.

ತಹಶೀಲ್ದಾರ್ ಡಾ. ಪ್ರತಿಭಾ ಆರ್., ಪೌರಾಯುಕ್ತ ಎಚ್.ಕೆ.ನಾಗಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಸದಾನಂದ ಸ್ವಾಮಿ, ಮದನ್, ಶಿವಪ್ರಕಾಶ್, ಶಾಂತರಾಜ್ ಇನ್ನಿತರರು ಹಾಜರಿದ್ದರು.

ಸುದ್ದಿ ಮತ್ತು ಜಾಹೀರಾತು ನೀಡಲು-7204641701

ಮೀನಿನಹೆಜ್ಜೆ ನ್ಯೂಸ್, ಸಾಗರ

Comments

Popular posts from this blog

ಸಾಗರದಲ್ಲಿ SIR ಪ್ರಕ್ರಿಯೆಯಲ್ಲಿ ಅಕ್ರಮ. ಬಿ ವೈ ವಿಜಯೇಂದ್ರ ಆರೋಪ...

ರಜಪೂತ ಸಮಾಜ ಅಭಿವೃದ್ಧಿ ಮಂಡಳಿ ರಚಿಸುವ ಬಗ್ಗೆ ಸಾಗರ ಉಪವಿಭಾಗಾಧಿಕಾರಿಗಳ ಮೂಲಕ ಸರಕಾರಕ್ಕೆ ಸಾಗರ ತಾಲ್ಲೂಕು ರಜಪೂತ ಸಮಾಜದಿಂದ ಮನವಿ

ವಿವೇಕ ಸೂರ್ಯ ಎಂಬ ಅವಿವೇಕಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ-ಚಾರೋಡಿ ಕೊಂಕಣಿ ಆಚಾರ್ ಸಮಾಜ