ತಾಲ್ಲೂಕಿನಲ್ಲಿ ಸರ್ಕಾರಿ ಭೂಮಿ ಒತ್ತುವರಿ ಮಾಡಿದವರ ವಿರುದ್ದ ಸೂಕ್ತ ಕ್ರಮ - ತಹಶೀಲ್ದಾರ್ ಡಾ. ಪ್ರತಿಭಾ ಆರ್.
ತಾಲ್ಲೂಕಿನಲ್ಲಿ ಸರ್ಕಾರಿ ಭೂಮಿ ಒತ್ತುವರಿ ಮಾಡಿದವರ ವಿರುದ್ದ ಸೂಕ್ತ ಕ್ರಮ - ಸಾಗರ ತಾಲ್ಲೂಕು ಹಶೀಲ್ದಾರ್ ಡಾ. ಪ್ರತಿಭಾ ಆರ್.
ಸಾಗರ : ತಾಲ್ಲೂಕಿನಲ್ಲಿ ಸರ್ಕಾರಿ ಭೂಮಿ ಒತ್ತುವರಿ ಮಾಡಿದವರ ವಿರುದ್ದ ಸೂಕ್ತ ಕ್ರಮ ಜರುಗಿಸಲಾಗುತ್ತದೆ ಎಂದು ತಹಶೀಲ್ದಾರ್ ಡಾ. ಪ್ರತಿಭಾ ಆರ್. ತಿಳಿಸಿದ್ದಾರೆ.
ತಾಲ್ಲೂಕಿನ ತುಮರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಜಾಗ ಒತ್ತುವರಿ ದೂರಿನ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಸರ್ಕಾರಿ ಭೂಮಿ ಒತ್ತುವರಿ ಮಾಡಿದರೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.
ತುಮರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 1948ರಲ್ಲಿ 25/ಬಿ ಅಡಿ ನಾಲ್ಕು ಎಕರೆ ಜಾಗ ಮಂಜೂರಾಗಿತ್ತು. ಆದರೆ ಕೆಲವು ಪ್ರಭಾವಿಗಳು ಆಸ್ಪತ್ರೆ ಜಾಗ ಒತ್ತುವರಿ ಮಾಡಿದ್ದಾರೆ. ಎನ್ನುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಬಂದು ಸರ್ವೇ ನಡೆಸಲಾಗಿದೆ. ಇನ್ನು ಎರಡು ದಿನಗಳಲ್ಲಿ ಸರ್ವೇಕಾರ್ಯ ಮುಗಿಯಲಿದೆ ಎಂದು ಹೇಳಿದರು.
ಸರ್ವೇ ಕಾರ್ಯದ ಸಂಪೂರ್ಣ ವರದಿ ಬಂದ ನಂತರ ಒತ್ತುವರಿ ದೃಢಪಟ್ಟರೆ ಯಾವುದೇ ಮುಲಾಜಿಲ್ಲದೆ ತೆರವುಗೊಳಿಸಲಾಗುತ್ತದೆ. ಸಾಗರ ತಾಲ್ಲೂಕಿನಲ್ಲಿ ಎಲ್ಲೇ ಸರ್ಕಾರಿ ಭೂಮಿ ಒತ್ತುವರಿ ಮಾಡಿದರೂ ಕ್ರಮ ನಿಶ್ಚಿತ. ಈಗಾಗಲೆ ಒತ್ತುವರಿದಾರರ ವಿರುದ್ದ ಕೆಲವು ಪ್ರಕರಣಗಳಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದರು.
ಸರ್ವೇ ಇಲಾಖೆಯ ಹನುಮಂತಪ್ಪ, ಕಂದಾಯ ನಿರೀಕ್ಷಕ ಹುಸೇನಿ ಕಟ್ಟಿಮನಿ, ಪಿಡಿಓ ಸಂತೋಷ್, ವೈದ್ಯಾಧಿಕಾರಿ ಭರತ್, ಶ್ರೀಕಾಂತ್ ಇನ್ನಿತರರು ಹಾಜರಿದ್ದರು.
ಸುದ್ದಿ ಮತ್ತು ಜಾಹೀರಾತು ನೀಡಲು-7204641701
ಮೀನಿನಹೆಜ್ಜೆ ನ್ಯೂಸ್, ಸಾಗರ


Comments
Post a Comment