ಬಿಜೆಪಿಯ ಹಿರಿಯ ನಾಯಕ ರಾಮಚಂದ್ರೇಗೌಡ ವಿಧಿವಶ

 

ಬಿಜೆಪಿಯ ಹಿರಿಯ ನಾಯಕ ರಾಮಚಂದ್ರೇಗೌಡ ವಿಧಿವಶ

ಬೆಂಗಳೂರು: ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಸಚಿವರಾದ ರಾಮಚಂದ್ರೇಗೌಡ (88) ಅವರು ವಯೋಸಹಜ ಕಾಯಿಲೆಯಿಂದಾಗಿ ಇಂದು ಮುಂಜಾನೆ ರಾಜಾಜಿನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಕಳೆದ ಒಂದು ತಿಂಗಳಿನಿಂದ ತೀವ್ರ ಅನಾರೋಗ್ಯ ಮತ್ತು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ರಾಮಚಂದ್ರೇಗೌಡ ರಾಜಾಜಿನಗರದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಅವರು ನಿಧನರಾಗಿದ್ದಾರೆ.

ಕರ್ನಾಟಕದಲ್ಲಿ ಬಿಜೆಪಿ ಪಕ್ಷವನ್ನು ತಳಮಟ್ಟದಿಂದ ಕಟ್ಟಿ ಬೆಳೆಸುವಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಹೆಗಲಿಗೆ ಹೆಗಲು ಕೊಟ್ಟು ಸಾತ್ ನೀಡಿದ್ದ ಪ್ರಮುಖ ನಾಯಕರಲ್ಲಿ ರಾಮಚಂದ್ರೇಗೌಡರು ಒಬ್ಬರಾಗಿದ್ದರು.

ಪಕ್ಷದ ಆರಂಭದ ದಿನಗಳಿಂದಲೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಅವರು, ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಆರ್‌ಎಸ್‌ಎಸ್‌ ಹಿನ್ನೆಲೆ ಹೊಂದಿದ್ದ ರಾಮಚಂದ್ರೇಗೌಡರು, 1953ರಲ್ಲೇ ಸಂಘವನ್ನು ಸೇರುವ ಮೂಲಕ ತಮ್ಮ ಸಾರ್ವಜನಿಕ ಜೀವನ ಆರಂಭಿಸಿದರು. ತದನಂತರ 1970 ರಲ್ಲಿ ಅಧಿಕೃತವಾಗಿ ರಾಜಕೀಯಕ್ಕೆ ಪ್ರವೇಶ ಮಾಡಿದರು.

ಸತತವಾಗಿ ಐದು ಬಾರಿ ವಿಧಾನ ಪರಿಷತ್ (MLC) ಸದಸ್ಯರಾಗಿ ಆಯ್ಕೆಯಾಗಿ ದಾಖಲೆ ಬರೆದಿದ್ದರು. ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರದಲ್ಲಿ ಇವರು ವೈದ್ಯಕೀಯ ಶಿಕ್ಷಣ ಸಚಿವರಾಗಿ ಮಹತ್ವದ ಜವಾಬ್ದಾರಿ ನಿಭಾಯಿಸಿದ್ದರು.

2010 ರಲ್ಲಿ ವೈದ್ಯಕೀಯ ಕಾಲೇಜುಗಳ ನೇಮಕಾತಿ ಹಗರಣದಲ್ಲಿ ಇವರ ಹೆಸರು ಕೇಳಿಬಂದ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಯಿತು. ಆದರೆ ಸುದೀರ್ಘ ಕಾನೂನು ಹೋರಾಟದ ನಂತರ ಹೈಕೋರ್ಟ್ ಈ ಪ್ರಕರಣದಲ್ಲಿ ಅವರಿಗೆ ಸಂಪೂರ್ಣ ಕ್ಲೀನ್ ಚಿಟ್ ನೀಡಿತ್ತು.

ಇಂದು ಸಂಜೆ 4:00 ಗಂಟೆಗೆ ಅವರ ಅಂತ್ಯಸಂಸ್ಕಾರ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಸುದ್ದಿ ಮತ್ತು ಜಾಹೀರಾತು ನೀಡಲು-7204641701

ಮೀನಿನಹೆಜ್ಜೆ ನ್ಯೂಸ್, ಸಾಗರ

Comments

Popular posts from this blog

ಸಾಗರದಲ್ಲಿ SIR ಪ್ರಕ್ರಿಯೆಯಲ್ಲಿ ಅಕ್ರಮ. ಬಿ ವೈ ವಿಜಯೇಂದ್ರ ಆರೋಪ...

ರಜಪೂತ ಸಮಾಜ ಅಭಿವೃದ್ಧಿ ಮಂಡಳಿ ರಚಿಸುವ ಬಗ್ಗೆ ಸಾಗರ ಉಪವಿಭಾಗಾಧಿಕಾರಿಗಳ ಮೂಲಕ ಸರಕಾರಕ್ಕೆ ಸಾಗರ ತಾಲ್ಲೂಕು ರಜಪೂತ ಸಮಾಜದಿಂದ ಮನವಿ

ವಿವೇಕ ಸೂರ್ಯ ಎಂಬ ಅವಿವೇಕಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ-ಚಾರೋಡಿ ಕೊಂಕಣಿ ಆಚಾರ್ ಸಮಾಜ