ಮಲೆನಾಡಿನಲ್ಲಿ ಮುಂಗಾರು ಮಳೆ ದುರ್ಬಲ : ಲಿಂಗನಮಕ್ಕಿ, ತುಂಗಾ, ಭದ್ರಾ ಡ್ಯಾಂಗಳ ಒಳಹರಿವಿನಲ್ಲಿ ಗಣನೀಯ ಕುಸಿತ
ಮಲೆನಾಡಿನಲ್ಲಿ ಮುಂಗಾರು ಮಳೆ ದುರ್ಬಲ : ಲಿಂಗನಮಕ್ಕಿ, ತುಂಗಾ, ಭದ್ರಾ ಡ್ಯಾಂಗಳ ಒಳಹರಿವಿನಲ್ಲಿ ಗಣನೀಯ ಕುಸಿತ
ಶಿವಮೊಗ್ಗ ; ಕಳೆದೊಂದು ವಾರದ ಹಿಂದೆ ಧಾರಾಕಾರ ಮಳೆಗೆ ಸಾಕ್ಷಿಯಾಗಿದ್ದ ಮಲೆನಾಡು ಭಾಗದಲ್ಲಿ, ಕಳೆದ ಮೂರ್ನಾಲ್ಕು ದಿನಗಳಿಂದ ಮುಂಗಾರು ಮಳೆಯ ಪ್ರಮಾಣ ಸಂಪೂರ್ಣ ಇಳಿಮುಖವಾಗಿದೆ. ಇದರಿಂದ ಪ್ರಮುಖ ಜಲಾಶಯಗಳ ಒಳಹರಿವಿನಲ್ಲಿ ಗಣನೀಯ ಕುಸಿತ ಕಂಡುಬಂದಿದೆ.
13/07/2026 ರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಜಿಲ್ಲೆಯ ವಿವಿಧೆಡೆ ಬಿದ್ದ ಮಳೆ ವಿವರ ಮುಂದಿನಂತಿದೆ. ಪಶ್ಚಿಮಘಟ್ಟ ವ್ಯಾಪ್ತಿಯ ಪ್ರದೇಶಗಳಾದ ಮಾಣಿಯಲ್ಲಿ 7 ಮಿಲಿ ಮೀಟರ್ (ಮಿ.ಮೀ.), ಯಡೂರು 10 ಮಿ.ಮೀ., ಹುಲಿಕಲ್ 5 ಮಿ.ಮೀ., ಮಾಸ್ತಿಕಟ್ಟೆ 8 ಮಿ.ಮೀ., ಚಕ್ರಾ 10 ಮಿ.ಮೀ. ಹಾಗೂ ಸಾವೇಹಕ್ಲುವಿನಲ್ಲಿ 6 ಮಿ.ಮೀ ಮಳೆಯಾಗಿದೆ.
ಉಳಿದಂತೆ ಶಿವಮೊಗ್ಗದಲ್ಲಿ 0.00 ಮಿ.ಮೀ., ಭದ್ರಾವತಿ 0.30 ಮಿ.ಮೀ., ತೀರ್ಥಹಳ್ಳಿ 0.60 ಮಿ.ಮೀ., ಸಾಗರ 0.60 ಮಿ.ಮೀ., ಶಿಕಾರಿಪುರ 0.30 ಮಿ.ಮೀ., ಸೊರಬ 0.00 ಮಿ.ಮೀ. ಹಾಗೂ ಹೊಸನಗರದಲ್ಲಿ 0.70 ಮಿ.ಮೀ. ಮಳೆಯಾಗಿದೆ.
ಡ್ಯಾಂಗಳ ವಿವರ : ಸೋಮವಾರ ಬೆಳಿಗ್ಗೆ 8 ಗಂಟೆಯ ಮಾಹಿತಿಯಂತೆ ಲಿಂಗನಮಕ್ಕಿ ಡ್ಯಾಂನ ಒಳಹರಿವು 4999 ಕ್ಯೂಸೆಕ್ ಇದ್ದು, ಹೊರಹರಿವನ್ನು ಸ್ಥಗಿತಗೊಳಿಸಲಾಗಿದೆ. ಡ್ಯಾಂ ನೀರಿನ ಮಟ್ಟ 1762.90 (ಗರಿಷ್ಠ ಮಟ್ಟ : 1819) ಅಡಿಯಿದೆ.
ಭದ್ರಾ ಜಲಾಶಯದ ಒಳಹರಿವು 1713 ಕ್ಯೂಸೆಕ್ ಇದ್ದು, 220 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ಡ್ಯಾಂ ನೀರಿನ ಮಟ್ಟ 147 ಅಡಿ 4 ಇಂಚು (ಗರಿಷ್ಠ ಮಟ್ಟ : 186) ಅಡಿಯಿದೆ. ತುಂಗಾ ಜಲಾಶಯ ಈಗಾಗಲೇ ಗರಿಷ್ಠ ಮಟ್ಟ ತಲುಪಿದೆ. 5182 ಕ್ಯೂಸೆಕ್ ಒಳಹರಿವಿದ್ದು, 5506 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ.
ಸುದ್ದಿ ಮತ್ತು ಜಾಹೀರಾತು ನೀಡಲು-7204641701
ಮೀನಿನಹೆಜ್ಜೆ ನ್ಯೂಸ್, ಸಾಗರ


Comments
Post a Comment