ಸಂಪುಟ ವಿಸ್ತರಣೆ, ಮಾಧ್ಯಮಗಳು ಆತುರದಲ್ಲಿವೆ-ಸಿಎಂ ಡಿಕೆಶಿ
ಬೆಂಗಳೂರು ; ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆಗಳು ಈ ವಾರದೊಳಗೆ ಪೂರ್ಣಗೊಳ್ಳಲಿವೆ ಎಂದು ಮುಖ್ಯಮಂತ್ರಿಡಿ.ಕೆ. ಶಿವಕುಮಾರ್ ಹೇಳಿದರು.
ದೆಹಲಿಗೆ ಪ್ರಯಾಣ ನಡೆಸುವ ಮೊದಲು ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ವಿಚಾರದಲ್ಲಿ ಮಾಧ್ಯಮಗಳೇ ಹೆಚ್ಚು ಆತುರದಲ್ಲಿದ್ದೀರಿ ಎಂದರು.
ಇಂದು ದೆಹಲಿಗೆ ತೆರಳುತ್ತಿದ್ದೇನೆ. ಸಂಪುಟ ವಿಸ್ತರಣೆ ಬಗ್ಗೆ ವರಿಷ್ಠರ ಜತೆ ಚರ್ಚೆಗಳು ನಡೆಯಲಿದ್ದು, ಈ ವಾರದೊಳಗೆ ಸಂಪುಟ ವಿಸ್ತರಣೆ ಪ್ರಕ್ರಿಯಗಳು ಪೂರ್ಣಗೊಳ್ಳಲಿವೆ ಎಂದರು.
ದೆಹಲಿಯಲ್ಲಿಂದು ರಾಜ್ಯದ ಸಂಸತ್ ಸದಸ್ಯರ ಸಭೆ ಕರೆದಿದ್ದೇನೆ. ನಾನು ಮುಖ್ಯಮಂತ್ರಿ ಆದ ಬಳಿಕ ಮೊದಲ ಬಾರಿಗೆ ರಾಜ್ಯದ ಎಲ್ಲ ಸಂಸದರನ್ನು ಭೇಟಿ ಮಾಡುತ್ತಿದ್ದೇನೆ. ರಾಜ್ಯಕ್ಕೆ ಸಂಬಂಧಿಸಿದ ವಿಚಾರದಲ್ಲಿ ಎಲ್ಲರನ್ನೂ ಒಟ್ಟಾಗಿ ತೆಗೆದುಕೊಂಡು ಹೋಗಬೇಕು ಎಂದು ಸಂಸದರಿಗೆ ಮನವಿ ಮಾಡುತ್ತೇನೆ ಎಂದು ಹೇಳಿದರು.
ರಾಜ್ಯದ ಬರ ಪರಿಸ್ಥಿತಿ, ಕಾವೇರಿ, ಮಹದಾಯಿ, ಮೇಕೆದಾಟು ಸೇರಿದಂತೆ ನೀರಾವರಿ ಯೋಜನೆಗಳ ಬಗ್ಗೆ ಸಂಸದರಿಗೆ ಮನವರಿಕೆ ಮಾಡಿಕೊಡಲಾಗುವುದು ಎಂದರು.
ಸರ್ವಪಕ್ಷ ಸಭೆ
ದೆಹಲಿಯಿಂದ ವಾಪಸ್ಸಾದ ನಂತರ ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚಿಸಲು ಸರ್ವ ಪಕ್ಷ ಸಭೆಯನ್ನು ಕರೆಯುವುದಾಗಿ ಅವರು ಹೇಳಿದರು. ರಾಜ್ಯದ ವಿಪಕ್ಷ ನಾಯಕರು, ಮಾಜಿ ಮುಖ್ಯಮಂತ್ರಿಗಳು ಹಲವು ಪ್ರಮುಖ ಮುಖಂಡರನ್ನು ಭೇಟಿ ಮಾಡಿ ರಾಜ್ಯಕ್ಕೆ ಸಂಬಂಧಿಸಿದ ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು
ಸುದ್ದಿ ಮತ್ತು ಜಾಹೀರಾತು ನೀಡಲು-7204641701
ಮೀನಿನಹೆಜ್ಜೆ ನ್ಯೂಸ್, ಸಾಗರ


Comments
Post a Comment