ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ
ಖ್ಯಾತ ಹಿನ್ನೆಲೆ ಗಾಯಕಿ, ದಕ್ಷಿಣ ಭಾರತದ ಕೋಗಿಲೆ ಎಂದೇ ಖ್ಯಾತರಾಗಿದ್ದ ಎಸ್. ಜಾನಕಿ ಅವರು 88ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದ ಹಿನ್ನೆಲೆಯಲ್ಲಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.
ಕನ್ನಡ, ತಮಿಳು, ತೆಲುಗು, ಮಲಯಾಳಂ, ಹಿಂದಿ ಸೇರಿದಂತೆ ಹಲವು ಭಾರತೀಯ ಭಾಷೆಗಳಲ್ಲಿ ಸಾವಿರಾರು ಹಾಡುಗಳನ್ನು ಹಾಡಿದ ಎಸ್. ಜಾನಕಿ ಅವರು ತಮ್ಮ ವಿಶಿಷ್ಟ ಕಂಠಸಿರಿಯಿಂದ ಕೋಟ್ಯಂತರ ಸಂಗೀತಾಭಿಮಾನಿಗಳ ಮನ ಗೆದ್ದಿದ್ದರು. ಹಲವು ದಶಕಗಳ ಕಾಲ ಭಾರತೀಯ ಚಿತ್ರರಂಗಕ್ಕೆ ನೀಡಿದ ಅವರ ಅಪಾರ ಕೊಡುಗೆ ಸದಾ ಸ್ಮರಣೀಯವಾಗಿರಲಿದೆ.
ಎಸ್. ಜಾನಕಿ ಅವರ ನಿಧನದಿಂದ ಭಾರತೀಯ ಸಂಗೀತ ಕ್ಷೇತ್ರವು ತನ್ನ ಶ್ರೇಷ್ಠ ಗಾನ ದಿಗ್ಗಜರಲ್ಲಿ ಒಬ್ಬರನ್ನು ಕಳೆದುಕೊಂಡಿದೆ. ಅವರ ಅಗಲಿಕೆಗೆ ಚಿತ್ರರಂಗದ ಗಣ್ಯರು, ಸಂಗೀತ ಕಲಾವಿದರು ಹಾಗೂ ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.
ದಕ್ಷಿಣ ಭಾರತದ ಗಾನಕೋಗಿಲೆ ಎಸ್ ಜಾನಕಿ ನಿಧನ. ಗಣ್ಯರ ಸಂತಾಪ.
ಸುದ್ದಿ ಮತ್ತು ಜಾಹೀರಾತು ನೀಡಲು-7204641701
ಮೀನಿನಹೆಜ್ಜೆ ನ್ಯೂಸ್, ಸಾಗರ




Comments
Post a Comment