ಬಿಎಲ್‌ಒ ಮೇಲೆ ಸಾಕು ನಾಯಿ ದಾಳಿ

ಬಿಎಲ್‌ಒ  ಮೇಲೆ ಸಾಕು ನಾಯಿ ದಾಳಿ

ಸಾಗರ : ಜಿಲ್ಲೆಯ ತಾಲೂಕಿನ ಆನಂದಪುರದಲ್ಲಿ ಎಸ್‌ಐಆರ್ ಪ್ರಕ್ರಿಯೆ ವೇಳೆ ಕರ್ತವ್ಯ ನಿರತ ಬಿಎಲ್‌ಒ ಲಕ್ಷ್ಮೀ ಸಿಂಗ್ ಅವರ ಮೇಲೆ ಸಾಕು ನಾಯಿಯೊಂದು ದಾಳಿ ನಡೆಸಿದ ಘಟನೆ ನಡೆದಿದೆ.

ದಾಳಿಯ ವೇಳೆ ನಾಯಿ ಲಕ್ಷ್ಮೀ ಸಿಂಗ್ ಅವರ ಕಾಲಿಗೆ ಬಲವಾಗಿ ಕಚ್ಚಿದ್ದು, ಅವರು ಗಾಯಗೊಂಡಿದ್ದಾರೆ. ನಾಯಿ ಕಚ್ಚಿದ ಪರಿಣಾಮ ಅವರು ತೀವ್ರ ನೋವಿನಿಂದ ನರಳಾಡಿದ್ದಾರೆ.

ಘಟನೆ ಗಮನಿಸಿದ ಸ್ಥಳೀಯರು ಹಾಗೂ ಅವರೊಂದಿಗೆ ಇದ್ದವರು ತಕ್ಷಣವೇ ಮಧ್ಯಪ್ರವೇಶಿಸಿ ನಾಯಿಯಿಂದ ಅವರನ್ನು ರಕ್ಷಿಸಿದ್ದಾರೆ. ಬಳಿಕ ಗಾಯಗೊಂಡ ಲಕ್ಷ್ಮೀ ಸಿಂಗ್ ಅವರನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.

ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

ಸುದ್ದಿ ಮತ್ತು ಜಾಹೀರಾತು ನೀಡಲು-7204641701

ಮೀನಿನಹೆಜ್ಜೆ ನ್ಯೂಸ್, ಸಾಗರ

Comments

Popular posts from this blog

ಸಾಗರದಲ್ಲಿ SIR ಪ್ರಕ್ರಿಯೆಯಲ್ಲಿ ಅಕ್ರಮ. ಬಿ ವೈ ವಿಜಯೇಂದ್ರ ಆರೋಪ...

ರಜಪೂತ ಸಮಾಜ ಅಭಿವೃದ್ಧಿ ಮಂಡಳಿ ರಚಿಸುವ ಬಗ್ಗೆ ಸಾಗರ ಉಪವಿಭಾಗಾಧಿಕಾರಿಗಳ ಮೂಲಕ ಸರಕಾರಕ್ಕೆ ಸಾಗರ ತಾಲ್ಲೂಕು ರಜಪೂತ ಸಮಾಜದಿಂದ ಮನವಿ

ವಿವೇಕ ಸೂರ್ಯ ಎಂಬ ಅವಿವೇಕಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ-ಚಾರೋಡಿ ಕೊಂಕಣಿ ಆಚಾರ್ ಸಮಾಜ