ಕರ್ನಾಟಕದ ಹವಾಮಾನ ಮುನ್ಸೂಚನೆ

 ಕರ್ನಾಟಕದ ಹವಾಮಾನ ಮುನ್ಸೂಚನೆ

ಬೆಂಗಳೂರು : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ ಇದೆ. ಗಾಳಿಯೂ ಮುಂದುವರಿಯುವ ಲಕ್ಷಣಗಳಿವೆ.

ಈಗಿನಂತೆ ಜುಲೈ 9ರಿಂದ ಮಳೆಯ ಪ್ರಮಾಣ ಕಡಿಮೆಯಾಗಿ ಜುಲೈ 11ರಿಂದ ಬಿಸಿಲು ಹಾಗೂ ಮೋಡದ ವಾತಾವರಣದ ಸಾಧ್ಯತೆಗಳಿವೆ.

ಜುಲೈ 11ರಿಂದ ರಾಜ್ಯದಾದ್ಯಂತ ಮಳೆಯ ಪ್ರಮಾಣ ತೀವ್ರ ಕಡಿಮೆಯಾಗುವ ಸೂಚನೆಗಳಿವೆ. 

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಹೆಚ್ಚಿರಬಹುದು.

ಈಗಿನಂತೆ ಜುಲೈ 9ರಿಂದ ಮಳೆಯ ಪ್ರಮಾಣ ಕಡಿಮೆಯಾಗಿ 10ರಿಂದ ಬಿಸಿಲು ಹಾಗೂ ಮೋಡದ ವಾತಾವರಣದ ಲಕ್ಷಣಗಳಿವೆ. 

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಉತ್ತಮ ಮಳೆ ಮುಂದುವರಿಯಲಿದ್ದು, ಗದಗ, ಬಾಗಲಕೋಟೆ ಹಾಗೂ ಕಲಬುರ್ಗಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಉಳಿದ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಗಳಿವೆ. 

ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಜುಲೈ 10ರಿಂದ ಹೆಚ್ಚಿನ ಅವಧಿಯೂ ಬಿಸಿಲಿನ ವಾತಾವರಣದ ಲಕ್ಷಣಗಳಿವೆ.

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ದಾವಣಗೆರೆ, ವಿಜಯನಗರ ಹಾಗೂ ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ತುಂತುರು ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಜುಲೈ 11ರಿಂದ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಅರಬ್ಬಿ ಸಮುದ್ರದ ಮಹಾರಾಷ್ಟ್ರ ಕರಾವಳಿಯಲ್ಲಿ ಮಧ್ಯಮ ಹಾಗೂ ಕೆಳಸ್ತರದ ತಿರುವಿಕೆಯು ಮುಂದುವರಿದಿದ್ದು, ಮುಂಬೈ ಇವತ್ತು ಸಹ ಭಾರಿ ಮಳೆಯ‌ ಮುನ್ಸೂಚನೆ ಇದೆ.

ಜುಲೈ 11ರಿಂದ ರಾಜ್ಯದಾದ್ಯಂತ ಮಳೆ ತೀವ್ರವಾಗಿ ಕಡಿಮೆಯಾಗುವ ಲಕ್ಷಣಗಳಿವೆ.

ಸುದ್ದಿ ಮತ್ತು ಜಾಹೀರಾತು ನೀಡಲು-7204641701ಮೀನಿನಹೆಜ್ಜೆ ನ್ಯೂಸ್, ಸಾಗರ

Comments

Popular posts from this blog

ಸಾಗರದಲ್ಲಿ SIR ಪ್ರಕ್ರಿಯೆಯಲ್ಲಿ ಅಕ್ರಮ. ಬಿ ವೈ ವಿಜಯೇಂದ್ರ ಆರೋಪ...

ರಜಪೂತ ಸಮಾಜ ಅಭಿವೃದ್ಧಿ ಮಂಡಳಿ ರಚಿಸುವ ಬಗ್ಗೆ ಸಾಗರ ಉಪವಿಭಾಗಾಧಿಕಾರಿಗಳ ಮೂಲಕ ಸರಕಾರಕ್ಕೆ ಸಾಗರ ತಾಲ್ಲೂಕು ರಜಪೂತ ಸಮಾಜದಿಂದ ಮನವಿ

ವಿವೇಕ ಸೂರ್ಯ ಎಂಬ ಅವಿವೇಕಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ-ಚಾರೋಡಿ ಕೊಂಕಣಿ ಆಚಾರ್ ಸಮಾಜ