ಡಿಕೆ ಶಿವಕುಮಾರ್ ಸಂಪುಟದ ನೂತನ ಸಚಿವರ ಪಟ್ಟಿ ಫೈನಲ್?, ಅಂತಿಮ ಪಟ್ಟಿಯಲ್ಲಿ ಗೋಪಾಲಕೃಷ್ಣ ಬೇಳೂರು, ಗುರುವಾರದಂದು ಪ್ರಮಾಣ ವಚನ ಸ್ವೀಕಾರ
ಡಿಕೆ ಶಿವಕುಮಾರ್ ಸಂಪುಟದ ನೂತನ ಸಚಿವರ ಪಟ್ಟಿ ಫೈನಲ್?, ಅಂತಿಮ ಪಟ್ಟಿಯಲ್ಲಿ ಗೋಪಾಲಕೃಷ್ಣ ಬೇಳೂರು, ಗುರುವಾರದಂದು ಪ್ರಮಾಣ ವಚನ ಸ್ವೀಕಾರ
ನವದೆಹಲಿ: ರಾಜ್ಯ ಕಾಂಗ್ರೆಸ್‌ನಲ್ಲಿ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆಯ ಕಸರತ್ತು ಈಗ ಅಂತಿಮ ಘಟ್ಟಕ್ಕೆ ಬಂದು ತಲುಪಿದೆ. ರಾಜ್ಯ ನಾಯಕರಾದ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರು ಸಚಿವರ ಆಯ್ಕೆಗಾಗಿ ದೆಹಲಿ ಅಂಗಳದಲ್ಲಿ ಭಾರಿ ರಾಜಕೀಯ ತಂತ್ರಗಾರಿಕೆ ನಡೆಸುತ್ತಿದ್ದಾರೆ.
ಸಂಪುಟ ರಚನೆಯಲ್ಲಿ ಯಾವುದೇ ಅಸಮಾಧಾನ ಮೂಡದಂತೆ ತಡೆಯಲು ಹಾಗೂ ಮುಂಬರುವ ಚುನಾವಣೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಜಾತಿವಾರು ಮತ್ತು ಪ್ರಾದೇಶಿಕ ಸಮತೋಲನಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ.
ಲಿಂಗಾಯತ ಸಮುದಾಯಕ್ಕೆ ಬಲ ನೀಡುವ ನಿಟ್ಟಿನಲ್ಲಿ ಪ್ರಭಾವಿ ನಾಯಕರಾದ ಲಕ್ಷ್ಮಣ ಸವದಿ, ಲಕ್ಷ್ಮಿ ಹೆಬ್ಬಾಳ್ಕರ್, ಶಿವಾನಂದ ಪಾಟೀಲ್, ಯಶವಂತ ರಾಯಗೌಡ ಪಾಟೀಲ್, ಅಪ್ಪಾಜಿ ನಾಡಗೌಡ, ಜಿ.ಎಸ್. ಪಾಟೀಲ್ ಹಾಗೂ ಎಸ್.ಎಸ್. ಮಲ್ಲಿಕಾರ್ಜುನ ಅವರಿಗೆ ಸಂಪುಟದಲ್ಲಿ ಸ್ಥಾನ ನೀಡಲು ನಿರ್ಧರಿಸಲಾಗಿದೆ.
ಇನ್ನು ಪ್ರಮುಖ ರಾಜಕೀಯ ಶಕ್ತಿಯಾಗಿರುವ ಒಕ್ಕಲಿಗ ಸಮುದಾಯವನ್ನು ಪರಿಣಾಮಕಾರಿಯಾಗಿ ಪ್ರತಿನಿಧಿಸಲು ಯುವ ನಾಯಕ ಶರತ್ ಬಚ್ಚೇಗೌಡ, ಹಿರಿಯರಾದ ಹೆಚ್.ಸಿ. ಬಾಲಕೃಷ್ಣ, ಎನ್. ಚಲುವರಾಯಸ್ವಾಮಿ ಹಾಗೂ ಕೆ.ಎಂ. ಶಿವಲಿಂಗೇಗೌಡ ಅವರ ಹೆಸರುಗಳನ್ನು ಅಂತಿಮ ಪಟ್ಟಿಯಲ್ಲಿ ಸೇರಿಸಲಾಗಿದೆ.
ಹಿಂದುಳಿದ ವರ್ಗಗಳ ವಿಭಾಗದಲ್ಲಿ ಬೇಳೂರು ಗೋಪಾಲಕೃಷ್ಣ, ರಾಘವೇಂದ್ರ ಹಿಟ್ನಾಳ್, ಶ್ರೀನಿವಾಸ್ ಮಾನೆ, ಎನ್.ಎಸ್. ಬೋಸರಾಜು ಹಾಗೂ ಮಂಕಾಳು ವೈದ್ಯ ಅವರಿಗೆ ಅವಕಾಶ ಕಲ್ಪಿಸುವ ಮೂಲಕ ಸಾಮಾಜಿಕ ನ್ಯಾಯದ ಸೂತ್ರವನ್ನು ಕಾಯ್ದುಕೊಳ್ಳಲು ನಾಯಕರು ಮುಂದಾಗಿದ್ದಾರೆ.
ಸಾಮಾಜಿಕವಾಗಿ ಹಿಂದುಳಿದ ಹಾಗೂ ಶೋಷಿತ ವರ್ಗಗಳಿಗೆ ಸೂಕ್ತ ಪ್ರಾತಿನಿಧ್ಯ ನೀಡುವ ಉದ್ದೇಶದಿಂದ ಪರಿಶಿಷ್ಟ ಜಾತಿ (SC) ಯಿಂದ ರೂಪಕಲಾ ಶಶಿಧರ್, ರುದ್ರಪ್ಪ ಲಮಾಣಿ, ಬಸಂತಪ್ಪ (ಬಸವರಾಜ್), ಆನೇಕಲ್ ಶಿವಣ್ಣ ಹಾಗೂ ಶಿವರಾಜ್ ತಂಗಡಗಿ ಅವರ ಹೆಸರುಗಳನ್ನು ಆರಿಸಲಾಗಿದೆ.
ಹಾಗೆಯೇ ಪರಿಶಿಷ್ಟ ಪಂಗಡ (ST) ಕ್ಕೆ ಸೇರಿದ ಟಿ. ರಘುಮೂರ್ತಿ, ಬಿ. ನಾಗೇಂದ್ರ ಹಾಗೂ ಜೆ.ಎನ್. ಗಣೇಶ್ ಅವರಿಗೆ ಸಂಪುಟದಲ್ಲಿ ಸ್ಥಾನ ಸಿಗುವ ಸಾಧ್ಯತೆಗಳು ನಿಚ್ಚಳವಾಗಿವೆ.
ಅಲ್ಪಸಂಖ್ಯಾತ ಸಮುದಾಯದ ಪ್ರಬಲ ಧ್ವನಿಯಾಗಿ ಸಂಪುಟ ಸೇರಲು ಮುಸ್ಲಿಂ ಸಮುದಾಯದ ಪ್ರಮುಖ ನಾಯಕರಾದ ರಿಜ್ವಾನ್ ಅರ್ಷದ್, ಎನ್.ಎ. ಹ್ಯಾರಿಸ್, ಜಮೀರ್ ಅಹಮ್ಮದ್, ತನ್ವೀರ್ ಸೇಟ್ ಹಾಗೂ ಖನೀಜ್ ಫಾತಿಮಾ ಅವರ ಹೆಸರುಗಳು ಅಂತಿಮ ಹಂತದ ಪರಿಶೀಲನೆಯಲ್ಲಿವೆ.
ಒಟ್ಟಾರೆಯಾಗಿ, ಹೈಕಮಾಂಡ್‌ನ ಗ್ರೀನ್ ಸಿಗ್ನಲ್ ಸಿಗುತ್ತಿದ್ದಂತೆಯೇ ಮುಹೂರ್ತ ನಿಗದಿಯಾಗಿ ಹೊಸ ಸಚಿವರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ.
ಸುದ್ದಿ ಮತ್ತು ಜಾಹೀರಾತು ನೀಡಲು-7204641701
ಮೀನಿನಹೆಜ್ಜೆ ನ್ಯೂಸ್, ಸಾಗರ



Comments
Post a Comment