ಅರ್ಹತಾ ಪತ್ರ (ಎಫ್ ಸಿ) ನವೀಕರಿಸದೆ ನಿಯಮಬಾಹಿರವಾಗಿ ಸಂಚರಿಸುತ್ತಿರುವ ಆಟೋರಿಕ್ಷಾಗಳ ವಿರುದ್ಧ ಕಾನೂನು ರೀತ್ಯಾ ಕಠಿಣ ಕ್ರಮ

ಅರ್ಹತಾ ಪತ್ರ (ಎಫ್ ಸಿ) ನವೀಕರಿಸದೆ ನಿಯಮಬಾಹಿರವಾಗಿ ಸಂಚರಿಸುತ್ತಿರುವ ಆಟೋರಿಕ್ಷಾಗಳ ವಿರುದ್ಧ ಕಾನೂನು ರೀತ್ಯಾ ಕಠಿಣ ಕ್ರಮ

ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ಅರ್ಹತಾ ಪತ್ರ (ಎಫ್ ಸಿ) ನವೀಕರಿಸದೆ ನಿಯಮಬಾಹಿರವಾಗಿ ಸಂಚರಿಸುತ್ತಿರುವ ಆಟೋರಿಕ್ಷಾಗಳ ವಿರುದ್ಧ ಕಾನೂನು ರೀತ್ಯಾ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ (ಆರ್’ಟಿಓ) ಎಚ್ಚರಿಕೆ ನೀಡಿದ್ದಾರೆ.ದಿನಾಂಕ 15-07-2026 ರಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜರುಗಿದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ಈ ಕುರಿತು ಚರ್ಚೆ ನಡೆದಿದ್ದು, ನಿಯಮ ಉಲ್ಲಂಘಿಸುವ ವಾಹನಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಲು ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಅರ್ಹತಾ ಪತ್ರದ ಅವಧಿ ಮುಕ್ತಾಯಗೊಂಡಿರುವ ಆಟೋರಿಕ್ಷಾಗಳ ಚಾಲಕರು ಅಥವಾ ಮಾಲೀಕರು ತಕ್ಷಣವೇ ಸಂಬಂಧಪಟ್ಟ ಸಾರಿಗೆ ಕಛೇರಿಯಲ್ಲಿ ನಿಗದಿತ ಶುಲ್ಕವನ್ನು ಪಾವತಿಸಬೇಕಾಗಿ ವಿನಂತಿಸಲಾಗಿದೆ. ತದನಂತರ, ತಮ್ಮ ವಾಹನಗಳನ್ನು ಮಲವಗೊಪ್ಪದ ಡ್ರೈವಿಂಗ್ ಟ್ರ್ಯಾಕ್‌ನಲ್ಲಿ ಹಾಜರುಪಡಿಸಿ, ಅರ್ಹತಾ ಪತ್ರವನ್ನು ನವೀಕರಿಸಿಕೊಳ್ಳಲು ಸೂಚಿಸಲಾಗಿದೆ.

ತಪ್ಪಿದಲ್ಲಿ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಜುಲೈ 16 ರಂದು ಬಿಡುಗಡೆ ಮಾಡಲಾಗಿರುವ ಪ್ರಕಟಣೆಯಲ್ಲಿ ಆರ್’ಟಿಓ ಅವರು ಮಾಹಿತಿ ನೀಡಿದ್ದಾರೆ.

ಸುದ್ದಿ ಮತ್ತು ಜಾಹೀರಾತು ನೀಡಲು-7204641701

ಮೀನಿನಹೆಜ್ಜೆ ನ್ಯೂಸ್, ಸಾಗರ

Comments

Popular posts from this blog

ಸಾಗರದಲ್ಲಿ SIR ಪ್ರಕ್ರಿಯೆಯಲ್ಲಿ ಅಕ್ರಮ. ಬಿ ವೈ ವಿಜಯೇಂದ್ರ ಆರೋಪ...

ರಜಪೂತ ಸಮಾಜ ಅಭಿವೃದ್ಧಿ ಮಂಡಳಿ ರಚಿಸುವ ಬಗ್ಗೆ ಸಾಗರ ಉಪವಿಭಾಗಾಧಿಕಾರಿಗಳ ಮೂಲಕ ಸರಕಾರಕ್ಕೆ ಸಾಗರ ತಾಲ್ಲೂಕು ರಜಪೂತ ಸಮಾಜದಿಂದ ಮನವಿ

ವಿವೇಕ ಸೂರ್ಯ ಎಂಬ ಅವಿವೇಕಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ-ಚಾರೋಡಿ ಕೊಂಕಣಿ ಆಚಾರ್ ಸಮಾಜ