ಗಾಂಜಾ ಅಡ್ಡೆಗಳ ಮೇಲೆ ಪೋಲೀಸರಿಂದ ದಾಳಿ ; ಆರು ಮಂದಿಯ ವಿರುದ್ಧ ಪ್ರಕರಣ ದಾಖಲು
ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆ ತಡೆಗಟ್ಟುವ ಉದ್ದೇಶದಿಂದ ಪೊಲೀಸ್ ಇಲಾಖೆ ವಿಶೇಷ ದಾಳಿ ನಡೆಸಿತು.
ಈ ಕಾರ್ಯಾಚರಣೆಯಲ್ಲಿ ಗಾಂಜಾ ಅಡ್ಡೆಗಳ ಮೇಲೆ ದಾಳಿ ನಡೆಸಿ, ಆರು ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಡಾ. ಬೆನಕ ಪ್ರಸಾದ್ ಐಪಿಎಸ್ ಮಾಧ್ಯಮಗಳಿಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, "ಗಾಂಜಾ ಗುಂಗಿನಿಂದ ಹೊರಬನ್ನಿ. ಇಲ್ಲವಾದರೆ ಅದರ ಪರಿಣಾಮ ಗಂಭೀರವಾಗಿರುತ್ತದೆ. ಕಾನೂನುಬಾಹಿರ ಕೃತ್ಯಗಳಲ್ಲಿ ತೊಡಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು" ಎಂದು ಎಚ್ಚರಿಕೆ ನೀಡಿದರು.
ದಅಳಿಯಲ್ಲಿ ವಶಪಡಿಸಿಕೊಂಡಿರುವ ವಸ್ತುಗಳ ಕುರಿತು ತನಿಖೆ ಮುಂದುವರಿದಿದ್ದು, ತನಿಖೆ ಪೂರ್ಣಗೊಂಡ ಬಳಿಕ ಆರೋಪಿಗಳ ಹೆಸರು ಹಾಗೂ ಹೆಚ್ಚಿನ ಮಾಹಿತಿಯನ್ನು ಬಹಿರಂಗಪಡಿಸಲಾಗುವುದು ಎಂದು ಎಎಸ್‌ಪಿ ತಿಳಿಸಿದ್ದಾರೆ.
ಮಾದಕ ವಸ್ತುಗಳ ಜಾಲವನ್ನು ಸಂಪೂರ್ಣ ನಿರ್ಮೂಲನೆ ಮಾಡುವ ಉದ್ದೇಶದಿಂದ ಇಂತಹ ಕಾರ್ಯಾಚರಣೆಗಳು ಮುಂದುವರಿಯಲಿವೆ ಎಂದು ಪೊಲೀಸ್ ಇಲಾಖೆ ಸ್ಪಷ್ಟಪಡಿಸಿದೆ.
ಸುದ್ದಿ ಮತ್ತು ಜಾಹೀರಾತು ನೀಡಲು-7204641701
ಮೀನಿನಹೆಜ್ಜೆ ನ್ಯೂಸ್, ಸಾಗರ


Comments
Post a Comment