ಮತ್ತೊಮ್ಮೆ ಅಕ್ರಮ ಜಂಬಿಟ್ಟಿಗೆ ಸಾಗಾಟಕ್ಕೆ ಕಡಿವಾಣ ಹಾಕುತ್ತಿರುವ ತಹಶೀಲ್ದಾರ್ ಡಾ. ಪ್ರತಿಭಾ ಆರ್
ಮತ್ತೊಮ್ಮೆ ಅಕ್ರಮ ಜಂಬಿಟ್ಟಿಗೆ ಸಾಗಾಟಕ್ಕೆ ಕಡಿವಾಣ ಹಾಕುತ್ತಿರುವ ತಹಶೀಲ್ದಾರ್ ಡಾ. ಪ್ರತಿಭಾ ಆರ್.
ಮತ್ತೊಮ್ಮೆ ಅಬ್ಬರಿಸಿದ ತಹಶೀಲ್ದಾರ್ ಡಾ.ಪ್ರತಿಭಾ ಆರ್: ಅಕ್ರಮ ಗಣಿಗಾರಿಕೆಗೆ ಕಡಿವಾಣ
ಅಕ್ರಮ ಗಣಿಗಾರಿಕೆ ಮಾಡಿದ್ರೆ ಕೇಸ್ ಹಾಕ್ತೀನಿ ಹುಷಾರ್ :ತಹಶೀಲ್ದಾರ್ ಡಾ. ಪ್ರತಿಭಾ ಆರ್ ಖಡಕ್ ವಾರ್ನಿಂಗ್
ಸಾಗರದ ನೆಲ ಜಲ ಪರಿಸರದ ರಕ್ಷಣೆಗೆ ಟೊಂಕ ಕಟ್ಟಿ ನಿಂತ ತಹಶೀಲ್ದಾರ್ ಡಾ. ಪ್ರತಿಭಾ ಆರ್ ದಿಟ್ಟತನಕ್ಕೆ ಸಾಗರದ ಜನತೆಯ ಮೆಚ್ಚುಗೆ
ಯಾವುದೇ ಒತ್ತಡಕ್ಕೆ ಮಣಿಯದೆ ದಿಟ್ಟತನದಿಂದ ಅಕ್ರಮಗಳಿಗೆ ಕಡಿವಾಣ ಹಾಕುತ್ತಿರುವ ತಹಶೀಲ್ದಾರ್ ಡಾ. ಪ್ರತಿಭಾ ಆರ್.
ಅಕ್ರಮ ಒತ್ತುವರಿ, ಅಕ್ರಮ ಗಣಿಗಾರಿಕೆ ವಿರುದ್ಧ ಸಮರ ಸಾರಿರುವ ತಹಶೀಲ್ದಾರ್ ಡಾ. ಪ್ರತಿಭಾ ಆರ್.
ಇದ್ದರೆ ಇರಬೇಕು ಇಂತಹ ತಹಸಿಲ್ದಾರ್" ಎಂದು ಕೊಂಡಾಡಿದ ಸಾಗರದ ಜನತೆ
ಸಾಗರ ; ಈ ದಿನ ಸಾಗರ ತಾಲೂಕಿನ ಬೊಮ್ಮತ್ತಿ ಸಮೀಪದ ಬ್ರಾಹ್ಮಣ ಮಂಚಾಲೆ ಗ್ರಾಮದ ಸರ್ವೇ ನಂಬರ್ 107ರಲ್ಲಿ ಅನುಮತಿ ಇಲ್ಲದೆ ಅಕ್ರಮವಾಗಿ ಜಂಬಿಟ್ಟಿಗೆ ಗಣಿಗಾರಿಕೆ ಮಾಡಿ ಲಾರಿಯಲ್ಲಿ ತುಂಬಿಸಿ ಸಾಗಿಸುತ್ತಿದ್ದ ಸಂದರ್ಭದಲ್ಲಿ ತಹಶೀಲ್ದಾರ್ ಡಾ. ಪ್ರತಿಭಾ ಆರ್ ದಾಳಿ ನಡೆಸಿ ಜಂಬಿಟ್ಟಿಗೆ ಲಾರಿಯನ್ನು ಮುಟ್ಟುಗೋಲು ಹಾಕಿಕೊಂಡು ಸಾಗರದ ರೂರಲ್ ಪೊಲೀಸ್ ಸ್ಟೇಷನ್ ನಲ್ಲಿ FIR ಮಾಡಿ ಪ್ರಕರಣ ದಾಖಲಿಸಿದ್ದಾರೆ.
ಈ ಸಂದರ್ಭದಲ್ಲಿ ರೆವಿನ್ಯೂ ಇನ್ಸ್ಪೆಕ್ಟರ್ ಗುರುರಾಜ್, ಗ್ರಾಮ ಆಡಳಿತಾಧಿಕಾರಿ ನಂದೀಶ್ ಹಾಜರಿದ್ದರು.
ಈ ತ್ಯಾಗರ್ತಿ ಭಾಗದ ಬೊಮ್ಮತ್ತಿಯ ಸಮೀಪ ಬ್ರಾಹ್ಮಣ ಮಂಚಾಲೆಯಲ್ಲಿ ಬಹಳ ಹಿಂದಿನಿಂದಲೂ ಅಕ್ರಮವಾಗಿ ಗಣಿಗಾರಿಕೆ ಮಾಡಿ ಜಂಬಿಟ್ಟಿಗೆ ಸಾಗಿಸುತ್ತಿದ್ದಾರೆ ಎಂಬ ದೂರು ಕೇಳಿ ಬರುತ್ತಿತ್ತು.
ಇಂದು ತಹಶೀಲ್ದಾರ್ ಡಾ. ಪ್ರತಿಭಾ ಆರ್ ದಿಢೀರ್ ದಾಳಿ ನಡೆಸಿ ಲಾರಿಯನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ.
*ತಹಶೀಲ್ದಾರ್ ಡಾ ಪ್ರತಿಭಾ ಆರ್ ಹೇಳಿಕೆ*
*"ಸಾಗರ ತಾಲೂಕಿನಲ್ಲಿ ಅವ್ಯಾಹತವಾಗಿ ಯಾವುದೇ ಎಗ್ಗಿಲ್ಲದೆ ರಾಜಾರೋಷವಾಗಿ ಅಕ್ರಮವಾಗಿ ಜಂಬಿಟ್ಟಿಗೆ ಸಾಗಾಟ, ಮರಳು ಸಾಗಾಟ ಬಹಳ ಕಾಲದಿಂದ ನಡೆಯುತ್ತಾ ಬರುತ್ತಿದೆ. ಈ ಅಕ್ರಮ ಚಟುವಟಿಕೆಗಳನ್ನು ಖಂಡಿತಾ ಸಹಿಸುವುದಿಲ್ಲ. ಇಂದು ಈ ಬೊಮ್ಮತ್ತಿ ಭಾಗದಲ್ಲಿ ಬ್ರಾಹ್ಮಣ ಮಂಚಾಲೆ ಗ್ರಾಮದ ಸರ್ವೇ ನಂಬರ್ 107ರಲ್ಲಿ ದಿಢೀರ್ ದಾಳಿ ಮಾಡಿ ಅಕ್ರಮ ಗಣಿಗಾರಿಕೆ ಮತ್ತು ಸಾಗಾಟವನ್ನು ತಡೆದು ಲಾರಿಯನ್ನು ಮುಟ್ಟುಗೋಲು ಹಾಕಿಕೊಂಡಿದ್ದೇವೆ. ಮುಂದೆ ಎಲ್ಲಿಯೂ ಸಹ ಅಕ್ರಮ ಗಣಿಗಾರಿಕೆ ನಡೆಯಲು ಬಿಡುವುದಿಲ್ಲ. ಈ ಅಕ್ರಮ ಸಾಗಾಟಗಳಿಗೆ ಖಂಡಿತ ಕಡಿವಾಣ ಹಾಕುತ್ತೇವೆ. ಇಂದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಗರದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ಮಾಡಿ ದೂರು ದಾಖಲಿಸಿದ್ದೇವೆ. ಇದು ಎಲ್ಲರಿಗೂ ಎಚ್ಚರಿಕೆಯ ಗಂಟೆಯಾಗಬೇಕು. ಸಾಗರ ತಾಲೂಕಿನಲ್ಲಿ ಎಲ್ಲಿಯೇ ಅಕ್ರಮ ಗಣಿಗಾರಿಕೆ ಕಂಡುಬಂದರೂ ನಿರ್ದಾಕ್ಷಿಣ್ಯವಾಗಿ*
ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸುತ್ತೇವೆ ಎಂದು* ತಹಶೀಲ್ದಾರ್ ಡಾಕ್ಟರ್ ಪ್ರತಿಭಾ ಆರ್ ತಿಳಿಸಿದ್ದಾರೆ.
ತಹಶೀಲ್ದಾರ್ ರವರ ದಿಟ್ಟತನಕ್ಕೆ ಸಾಗರದ ಜನತೆ ಮೆಚ್ಚುಗೆ ಸೂಚಿಸಿದ್ದಾರೆ.
ಬಹಳ ಹಿಂದಿನಿಂದಲೂ ಸಾಗರದಲ್ಲಿ ಅವ್ಯಾಹತವಾಗಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದು ಜಂಬಿಟ್ಟಿಗೆ ಮರಳು ಸಾಗಾಟ ಎಗ್ಗಿಲ್ಲದೆ ರಾಜಾರೋಷವಾಗಿ ನಡೆಯುತ್ತಿದೆ. ತಹಶೀಲ್ದಾರ್ ಡಾ. ಪ್ರತಿಭಾ ಆರ್ ಅಧಿಕಾರ ಸ್ವೀಕರಿಸಿದ ಮೇಲೆ ಈ ಎಲ್ಲಾ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುತ್ತಿದ್ದಾರೆ ಈ ಮೂಲಕ "ಸಾಗರದ ನೆಲ ಜಲ ಪರಿಸರದ ರಕ್ಷಣೆಗೆ ಟೊಂಕ ಕಟ್ಟಿ ನಿಂತಿದ್ದಾರೆ" ಎಂದು* *ಸಾಗರದ ಜನತೆ ತಹಶೀಲ್ದಾರ್ ದಿಟ್ಟತನಕ್ಕೆ ಹ್ಯಾಟ್ಸಾಫ್ ಹೇಳಿದ್ದಾರೆ
ಬಹಳ ಹಿಂದಿನಿಂದಲೂ ಸಾಗರದ ಭಾಗದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದು, ಹಿಂದಿನ ಅಧಿಕಾರಿಗಳು ಕಂಡು ಕಾಣದಂತೆ ಇರುತ್ತಿದ್ದರು. ಈಗ ಅಧಿಕಾರ ವಹಿಸಿಕೊಂಡಿರುವ ತಹಶೀಲ್ದಾರ್ ಪ್ರತಿಭಾ ಆರ್ ರವರು ಬಹಳ ಧೈರ್ಯದಿಂದ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುವ ದಿಟ್ಟತನ ಪ್ರದರ್ಶಿಸಿದ್ದಾರೆ.
ಅಕ್ರಮ ಒತ್ತುವರಿ, ಅಕ್ರಮ ಗಣಿಗಾರಿಕೆ ವಿರುದ್ಧ ಸಮರ ಸಾರಿರುವ ತಹಶೀಲ್ದಾರ್ ಡಾ. ಪ್ರತಿಭಾ ಆರ್ ರವರ ಬಗ್ಗೆ ಸಾರ್ವಜನಿಕ ವಲಯದಲ್ಲಿ ಬಹಳ ಮೆಚ್ಚುಗೆ ವ್ಯಕ್ತವಾಗಿದೆ.
ಸುದ್ದಿ ಮತ್ತು ಜಾಹೀರಾತು ನೀಡಲು-7204641701
ಮೀನಿನಹೆಜ್ಜೆ ನ್ಯೂಸ್, ಸಾಗರ




Comments
Post a Comment