NEET ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ವಿದ್ಯಾರ್ಥಿಗಳ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಸಾಗರದ ಸಾಗರ ಹೋಟೇಲ್ ವೃತ್ತದಿಂದ ಮೆರವಣಿಗೆ ಮೂಲಕ ಸಾಗರ ಜೋಗ ಬಸ್ಟ್ಯಾಂಡ್'ನಲ್ಲಿ ಪ್ರತಿಭಟನೆ

ಸಾಗರ ; ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯವನ್ನು ನಿರ್ಧರಿಸುವ NEET ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಅತ್ಯಂತ ಗಂಭೀರ ಹಾಗೂ ಖಂಡನೀಯ ಘಟನೆಯಾಗಿದೆ. ಈ ರೀತಿಯ ಘಟನೆಗಳು ವಿದ್ಯಾರ್ಥಿಗಳ ಪರಿಶ್ರಮ, ಶಿಕ್ಷಣ ವ್ಯವಸ್ಥೆಯ ಪಾರದರ್ಶಕತೆ ಹಾಗೂ ಸಾರ್ವಜನಿಕರ ವಿಶ್ವಾಸಕ್ಕೆ ಧಕ್ಕೆ ಉಂಟುಮಾಡುತ್ತವೆ.
ಇದರ ಜೊತೆಗೆ, ತಮ್ಮ ನ್ಯಾಯಯುತ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಹಲ್ಲೆ ಮತ್ತು ದೌರ್ಜನ್ಯಗಳು ಸಹ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದ್ದು, ಅವುಗಳನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ.
ಆದ್ದರಿಂದ, ತಮ್ಮ ಮೂಲಕ ಸಂಬಂಧಿಸಿದ ಸರ್ಕಾರ ಹಾಗೂ ಅಧಿಕಾರಿಗಳಿಗೆ ಈ ಕೆಳಕಂಡ ಬೇಡಿಕೆಗಳನ್ನು ತಲುಪಿಸಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಆಗ್ರಹಿಸುತ್ತೇವೆ ಎಂದು ಸಿ.ಎಂ. ಚಿನ್ಮಯ್, ಅಧ್ಯಕ್ಷರು, ಎನ್‌ಎಸ್‌ಯುಐ ಸಾಗರ ವಿಧಾನಸಭಾ ಕ್ಷೇತ್ರ ಇವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.
ಸುದ್ದಿ ಮತ್ತು ಜಾಹೀರಾತು ನೀಡಲು-7204641701
ಮೀನಿನಹೆಜ್ಜೆ ನ್ಯೂಸ್, ಸಾಗರ

Comments
Post a Comment