ಸಾಗರದಲ್ಲಿ SIR ಪ್ರಕ್ರಿಯೆಯಲ್ಲಿ ಅಕ್ರಮ. ಬಿ ವೈ ವಿಜಯೇಂದ್ರ ಆರೋಪ...

ಸಾಗರದಲ್ಲಿ SIR ಪ್ರಕ್ರಿಯೆಯಲ್ಲಿ ಅಕ್ರಮ. ಶಾಸಕರು BLO, BLA ಗಳನ್ನು ದುರುಪಯೋಗ ಮಾಡಿಕೊಳ್ಳುವ ಕೆಲಸ ಮಾಡುತ್ತಿದ್ದಾರೆ. ಬಿ ವೈ ವಿಜಯೇಂದ್ರ ಆರೋಪ




ಬೆಂಗಳೂರು : ಸಾಗರದಲ್ಲಿ SIR ಪ್ರಕ್ರಿಯೆಯಲ್ಲಿ ಅಕ್ರಮ ನಡೆಯುತ್ತಿದೆ.ಶಾಸಕರು BLA ಗಳನ್ನು ದುರುಪಯೋಗ ಮಾಡಿಕೆಕೊಳ್ಳುವ ಕೆಲಸ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ. ಶಾಸಕರು ಬೇಳೂರು ಅವ್ರ ನಡೆಸುತ್ತಿರುವ SIR ನಲ್ಲಿ ನಡೆಸುತ್ತಿರುವ ಅಕ್ರಮದ ಬಗ್ಗೆ ಸುದ್ದಿ ಘೋಷ್ಠಿಯಲ್ಲಿ ಪೋಸ್ಟರ್ ಬಿಡುಗಡೆ ಮಾಡಿದ ಮಾತನಾಡಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ . ಬಿಎಲ್ಓ, ಬಿಎಲ್ಎ(BLS&BLO) ಗಳೇ ಸಾಗರದಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ಪ್ರಚಾರಕ್ಕೆ ಬಳಸಿಕೊಳ್ತಿದ್ದಾರೆ. ಚುನಾವಣಾ ಆಯೋಗದ ಸದುದ್ದೇಶ ಹಾಳು ಮಾಡುವ ಕೆಲಸವನ್ನು ಸರ್ಕಾರ ಮಾಡುತ್ತಿದೆ


ಎಸ್‌ಐಆರ್‌ನಲ್ಲಿ ಅಕ್ರಮ ಆರೋಪ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಬೂತ್ ಮಟ್ಟದ ಏಜೆಂಟರನ್ನು (BLA)ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ವಿಜಯೇಂದ್ರ ಆರೋಪಿಸಿದರು. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಕೂಡ ಹಲವು ಕಡೆಗಳಲ್ಲಿ ನಡೆಯುತ್ತಿರುವ ಅಕ್ರಮಗಳ ಬಗ್ಗೆ ಬಹಿರಂಗವಾಗಿ ಮಾತನಾಡಿದ್ದಾರೆ. ಅಲ್ಪಸಂಖ್ಯಾತರನ್ನು ಬಳಸಿಕೊಂಡು ಹಾಗೂ ಅಧಿಕಾರಿಗಳ ಸಹಕಾರದೊಂದಿಗೆ ಹಿಂದೂ ಮತದಾರರಿಗೆ ಅನ್ಯಾಯ ಮಾಡುವ ಸಂಚು ನಡೆಯುತ್ತಿದೆ ಎಂದು ಆರೋಪಿಸಿದರು.


ಬಿಎಲ್‌ಒಗಳನ್ನು ಕಾಂಗ್ರೆಸ್ ಪರ ಪ್ರಚಾರಕ್ಕಾಗಿ ಬಳಸಿ ಕೊಳ್ಳಲಾಗುತ್ತಿದೆ. ಇದು ಚುನಾವಣಾ ಆಯೋಗದ ಸದುದ್ದೇಶಕ್ಕೆ ಧಕ್ಕೆ ತರುವ ಕೆಲಸವಾಗಿದೆ. ಕಾಂಗ್ರೆಸ್ ಎರಡು ಬಿಎಲ್‌ಎಗಳನ್ನು ನೇಮಿಸಿ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ. ಈ ಬಗ್ಗೆ ಈಗಾಗಲೇ ಹಲವು ಕಡೆ ದೂರು ಸಲ್ಲಿಸಲಾಗಿದ್ದು, ರಾಜ್ಯ ಚುನಾವಣಾ ಆಯೋಗ ಕೂಡಲೇ ಮಧ್ಯಪ್ರವೇಶಿಸಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು..


ಮೀನಿನ ಹೆಜ್ಜೆ ನ್ಯೂಸ್, ಸಾಗರ

ಸುದ್ದಿ ಮತ್ತು ಜಾಗೀರಾತಿಗಾಗಿ ಸಂಪರ್ಕಿಸಿ ; 7204621701

Comments

Popular posts from this blog

ರಜಪೂತ ಸಮಾಜ ಅಭಿವೃದ್ಧಿ ಮಂಡಳಿ ರಚಿಸುವ ಬಗ್ಗೆ ಸಾಗರ ಉಪವಿಭಾಗಾಧಿಕಾರಿಗಳ ಮೂಲಕ ಸರಕಾರಕ್ಕೆ ಸಾಗರ ತಾಲ್ಲೂಕು ರಜಪೂತ ಸಮಾಜದಿಂದ ಮನವಿ

ವಿವೇಕ ಸೂರ್ಯ ಎಂಬ ಅವಿವೇಕಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ-ಚಾರೋಡಿ ಕೊಂಕಣಿ ಆಚಾರ್ ಸಮಾಜ