ZP TP ಗ್ರಾಮ ಪಂಚಾಯತಿ ಚುನಾವಣೆ ಈ ವರ್ಷ ನಡೆಯಲ್ಲ; ಹೊಸ ಗಡುವು ಹೇಳಿದ ಡಿಕೆ ಶಿವಕುಮಾರ್; ಕಾರ್ಯಕರ್ತರಿಗೆ ಪ್ರಮುಖ ಸಂದೇಶ

ZP TP ಗ್ರಾಮ ಪಂಚಾಯತಿ ಚುನಾವಣೆ ಈ ವರ್ಷ ನಡೆಯಲ್ಲ; ಹೊಸ ಗಡುವು ಹೇಳಿದ ಡಿ. ಕೆ. ಶಿವಕುಮಾರ್; ಕಾರ್ಯಕರ್ತರಿಗೆ ಪ್ರಮುಖ ಸಂದೇಶ

ಬೆಂಗಳೂರು: ಕರ್ನಾಟಕ ಸ್ಥಳೀಯ ಸಂಸ್ಥೆಗಳ ಚುನಾವಣೆ 2026 ರಲ್ಲಿ ನಡೆಯುವುದು ಅನುಮಾನ. ಈ ಬಗ್ಗೆ ಸ್ವತಃ ಸಿಎಂ ಡಿಕೆ ಶಿವಕುಮಾರ್ ಮಾಹಿತಿ ನೀಡಿದ್ದು, ಮುಂದಿನ ವರ್ಷ (2027) ಜಿಲ್ಲಾ, ತಾಲ್ಲೂಕು ಹಾಗೂ ಗ್ರಾಮ ಪಂಚಾಯತಿ, ಮುನಿಸಿಪಾಲಿಟಿ ಚುನಾವಣೆ ಚುನಾವಣೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ಹೊಸದಿಲ್ಲಿ ಕಾಂಗ್ರೆಸ್ ಪಕ್ಷದ ಹಳೇ ಕಚೇರಿ ಬಳಿ ಶುಕ್ರವಾರ ಮಾಧ್ಯಮಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಈ ವೇಳೆ ಸ್ಥಳೀಯ ಸಂಸ್ಥೆಗಳ ಚುನಾವಣೆ, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮಾತನಾಡಿದ್ದಾರೆ.

*ಮಾರ್ಚ್ ಅಂತ್ಯದೊಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ*

"ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆಯಿಂದಾಗಿ ಜಿಬಿಎ ವ್ಯಾಪ್ತಿಯ ಐದು ಮಹಾನಗರ ಪಾಲಿಕೆಗಳಿಗೆ ಚುನಾವಣೆ ನಡೆಸಲು ಡಿಸೆಂಬರ್ 31 ರವರೆಗೆ ಕಾಲಾವಕಾಶವನ್ನು ಕೋರಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿತ್ತು. ಇಂದು ಸುಪ್ರೀಂ ಕೋರ್ಟ್ ಕಾಲಾವಕಾಶವನ್ನು ವಿಸ್ತರಿಸಿದೆ. ಜಿಬಿಎ ಚುನಾವಣೆಯಲ್ಲದೇ ಮಾರ್ಚ್ ಅಂತ್ಯದೊಳಗೆ ಜಿಲ್ಲಾ, ತಾಲ್ಲೂಕು ಹಾಗೂ ಗ್ರಾಮ ಪಂಚಾಯತಿ, ಮುನಿಸಿಪಾಲಿಟಿ ಚುನಾವಣೆಗಳನ್ನು ನಡೆಸಲಾಗುವುದು" ಎಂದು ತಿಳಿಸಿದರು.
ಚುನಾವಣೆಯಲ್ಲಿ ಯುವಕರಿಗೆ ಅವಕಾಶ

"ಗ್ರಾಮ ಪಂಚಾಯತಿಯಿಂದ ಕಾರ್ಪೊರೇಷನ್ ವರೆಗೆ ಈ ಬಾರಿಯ ಚುನಾವಣೆಯಲ್ಲಿ ಯುವಕರಿಗೆ ಹಾಗೂ ಹೊಸ ಮುಖಗಳಿಗೆ ಅವಕಾಶ ನೀಡಲಾಗುವುದು. ಸ್ಥಳೀಯ ಸಂಸ್ಥೆಗಳನ್ನು ಬಲಪಡಿಸಲು ಮತ್ತು ಅಧಿಕಾರ ವಿಕೇಂದ್ರೀಕರಣವನ್ನು ತರಲು ಸಂವಿಧಾನಕ್ಕೆ ಮಾಡಲಾದ 73 ನೇ ಮತ್ತು 74 ನೇ ತಿದ್ದುಪಡಿಯನ್ನು ಅನುಷ್ಠಾನಕ್ಕೆ ತರಲಾಗುವುದು ಎಂದರು.


ಎಐಸಿಸಿ ಕಚೇರಿ ನಮ್ಮ ದೇವಾಲಯ

"ಎಐಸಿಸಿ ಕಚೇರಿ ನಮಗೆ ಹಾಗೂ ಕಾಂಗ್ರೆಸ್ ಕಾರ್ಯಕರ್ತರಿಗೆ ದೇವಾಲಯವಿದ್ದಂತೆ. ನಾವು ಅದರೊಂದಿಗೆ ಬೆಳೆದಿದ್ದೇವೆ. ನಮ್ಮ ಪಕ್ಷದ ಕಾರ್ಯದರ್ಶಿಯನ್ನು ದೇವಾಲಯದಲ್ಲಿಯೇ ಭೇಟಿಯಾಗುವುದು ನಮ್ಮ ಕರ್ತವ್ಯವಾಗಿದೆ" ಎಂದರು.
ಸಚಿವ ಸಂಪುಟ ವಿಸ್ತರಣೆಗೆ ಸಿದ್ಧತೆ

ಸಚಿವ ಸಂಪುಟದ ವಿಸ್ತರಣೆಯ ಬಗ್ಗೆ ದೆಹಲಿಯಲ್ಲಿ ಪಕ್ಷದ ವರಿಷ್ಠರೊಂದಿಗೆ ಚರ್ಚೆ ನಡೆಸಲಾಗಿದೆ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಭೇಟಿ ಸಾಧ್ಯವಾಗದ ಕಾರಣ, ಅವರನ್ನು ಶನಿವಾರ ಭೇಟಿ ಮಾಡಲಾಗುವುದು. ವರಿಷ್ಠರಿಂದ ಮಾರ್ಗದರ್ಶನ ಪಡೆದು ಸಚಿವ ಸಂಪುಟ ವಿಸ್ತರಣೆಗೆ ಸಿದ್ಧತೆ ಮಾಡಲಾಗುವುದು ಎಂದು ಸಿಎಂ ಡಿಕೆ ಶಿವಕುಮಾರ್ ತಿಳಿಸಿದರು 

ಸುದ್ದಿ ಮತ್ತು ಜಾಹೀರಾತು ನೀಡಲು-7204641701

ಮೀನಿನಹೆಜ್ಜೆ ನ್ಯೂಸ್, ಸಾಗರ

Comments

Popular posts from this blog

ಸಾಗರದಲ್ಲಿ SIR ಪ್ರಕ್ರಿಯೆಯಲ್ಲಿ ಅಕ್ರಮ. ಬಿ ವೈ ವಿಜಯೇಂದ್ರ ಆರೋಪ...

ರಜಪೂತ ಸಮಾಜ ಅಭಿವೃದ್ಧಿ ಮಂಡಳಿ ರಚಿಸುವ ಬಗ್ಗೆ ಸಾಗರ ಉಪವಿಭಾಗಾಧಿಕಾರಿಗಳ ಮೂಲಕ ಸರಕಾರಕ್ಕೆ ಸಾಗರ ತಾಲ್ಲೂಕು ರಜಪೂತ ಸಮಾಜದಿಂದ ಮನವಿ

ವಿವೇಕ ಸೂರ್ಯ ಎಂಬ ಅವಿವೇಕಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ-ಚಾರೋಡಿ ಕೊಂಕಣಿ ಆಚಾರ್ ಸಮಾಜ