ಕಸ್ತೂರಿ ರಂಗನ್ ವರದಿ ಜಾರಿಗೆ ಖಂಡಿಸಿ ಆ. 27ರಂದು ಜಿಲ್ಲಾ ರೈತ ಸಂಘ ಮತ್ತು ಹಸಿರುಸೇನೆ ವತಿಯಿಂದ ಬೃಹತ್ ಪ್ರತಿಭಟನೆ-ದಿನೇಶ್ ಶಿರವಾಳ
ಕಸ್ತೂರಿ ರಂಗನ್ ವರದಿ ಜಾರಿಗೆ ಖಂಡಿಸಿ ಆ. 27ರಂದು ಜಿಲ್ಲಾ ರೈತ ಸಂಘ ಮತ್ತು ಹಸಿರುಸೇನೆ ವತಿಯಿಂದ ಬೃಹತ್ ಪ್ರತಿಭಟನೆ-ದಿನೇಶ್ ಶಿರವಾಳ
ಸಾಗರ : ಕಸ್ತೂರಿ ರಂಗನ್ ವರದಿ ಜಾರಿಗೆ ಖಂಡಿಸಿ ಆ. 27ರಂದು ಜಿಲ್ಲಾ ರೈತ ಸಂಘ ಮತ್ತು ಹಸಿರುಸೇನೆ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಬೆಳಿಗ್ಗೆ 10ಕ್ಕೆ ಮಹಾಗಣಪತಿ ದೇವಸ್ಥಾನದಿಂದ ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಯುಲಿದ್ದು, ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗಿ ಉಪವಿಭಾಗಾಧಿಕಾರಿಗಳ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಜಿಲ್ಲಾ ರೈತ ಸಂಘದ ಅಧ್ಯಕ್ಷ ದಿನೇಶ್ ಶಿರವಾಳ ತಿಳಿಸಿದರು.
ಇಲ್ಲಿನ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಶನಿವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮಲೆನಾಡು ರೈತರ ಬಗ್ಗೆ ಕಾಳಜಿ ಇದ್ದರೆ ಪ್ರತಿಭಟನೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರು ಪಾಲ್ಗೊಳ್ಳಬೇಕುವಎಂದು ಮನವಿ ಮಾಡಿದರು.
ಕಸ್ತೂರಿ ರಂಗನ್ ವರದಿ ಕುರಿತು ಪದೇಪದೇ ಅಧಿಸೂಚನೆ ಹೊರಡಿಸಲಾಗುತ್ತಿದ್ದುವಇದು ಮಲೆನಾಡು ರೈತರ ನೆತ್ತಿಯ ಮೇಲಿನ ತೂಗುಕತ್ತಿಯಾಗಿದೆ. ಇದರಿಂದ ರೈತರು ಶಾಶ್ವತವಾಗಿ ಹೊರಗೆ ಬರಬೇಕು. ರಾಜ್ಯ ಸರ್ಕಾರ ಕರಡು ಅಧಿಸೂಚನೆ ಪ್ರಕಟಿಸಿದ ನಂತರ ತಿರಸ್ಕರಿಸುವುದು ಮಾಮೂಲಿ. ಆದರೆ ಮತೆ ಯಾವಾಗಬಅಧಿಸೂಚನೆ ಬರುತ್ತದೆ ಎಂದು ಹೇಳಲು ಬರುವುದಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸರ್ವಪಕ್ಷಗಳ ಸಭೆ ಕರೆದು ದೈಹಿಕ ಸರ್ವೇ ನಡೆಸಲು ಮನವಿ ಮಾಡಬೇಕು. ಸೆಟಲೈಟ್ ಸರ್ವೇ ಮೂಲಕ ಕಸ್ತೂರಿ ರಂಗನ್ ಅವರು ತಯಾರಿಸಿದ ವರದಿಯಲ್ಲಿ ಜನವಸತಿ ಪ್ರದೇಶ ಹೆಚ್ಚಿದೆ. ಇದು ಜಾರಿಗೆ ಬಂದರೆ ದೊಡ್ಡಪ್ರಮಾಣದಲ್ಲಿ ರೈತರು ಗುಳೆ ಹೋಗ ಬೇಕಾಗುತ್ತದೆ. ಆದರೆ ರಜ್ಯ ಸರ್ಕಾರ ಸರ್ವಪಕ್ಷ ನಿಯೋಗದ ಮೂಲಕ ಕೇಂದ್ರಕ್ಕೆ ವರದಿ ಪುನರ್ ಸರ್ವೇಗೆ ಮನವಿ ಮಾಡಬೇಕು ಎಂದು ಹೇಳಿದರು.
ರಾಜ್ಯದಲ್ಲಿ 1996 ಗ್ರಾಮಗಳು ಕಸ್ತೂರಿ ರಂಗನ್ ವರದಿಯಡಿ ಪರಿಸರ ಸೂಕ್ಷ್:ಪಟ್ಟಿಯಲ್ಲಿ ಸೇರಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ೪೪೬ ಗ್ರಾಮಗಳಿದ್ದು ಸಾಗರ ತಾಲ್ಲೂಕಿನಲ್ಲಿ 115 ಗ್ರಾಮಗಳಿವೆ. ಇದರ ಜೊತೆಗೆ ಮಜಿರೆ ಗ್ರಾಮಗಳು ಸೇರಿದರೆ 200 ಕ್ಕೂ ಹೆಚ್ಚು ಗ್ರಾಮಗಳು ಪರಿಸರಸೂಕ್ಷö್ಮ ಪಟ್ಟಿಗೆ ಸೇರಬಹುದು. ಸಾಗರ ಸಮೀಪದ ಸಂಗಳ, ಚಿಪ್ಪಳಿ, ಮತ್ತಿಕೊಪ್ಪದಂತಹ ಗ್ರಾಮಗಳು ಪರಿಸರ ಸೂಕ್ಷ್ ಪಟ್ಟಿಯಲ್ಲಿದೆ. ಆದ್ದರಿಂದ ರಾಜ್ಯ ಸರ್ಕಾರ ಕಸ್ತೂರಿ ರಂಗನ್ ವರದಿ ಕರಡು ಅಧಿಸೂಚನೆ ತಿರಸ್ಕರಿಸಿದ ಮಾತ್ರಕ್ಕೆ ಎಲ್ಲವೂ ಮುಗಿದು ಹೋಗುವುದಿಲ್ಲ. ಈ ಬಗ್ಗೆ ಕಟ್ಟುನಿಟ್ಟಿನ ನಿಲುವು ತೆಗೆದುಕೊಳ್ಳಬೇಕು. ಈ ಹಿನ್ನೆಲೆಯಲ್ಲಿ ರೈತ ಸಂಘ ಹಮ್ಮಿಕೊಂಡ ಹೋರಾಟಕ್ಕೆ ಎಲ್ಲರೂ ಬೆಂಬಲ ನೀಡಬೇಕು ಎಂದು ಮನವಿ ಮಾಡಿದರು.
ಗೋಷ್ಟಿಯಲ್ಲಿ ರಮೇಶ್ ಕೆಳದಿ, ಡಾ. ರಾಮಚಂದ್ರಪ್ಪ ಮನೆಘಟ್ಟ, ಚಂದ್ರಪ್ಪ ಆಲಳ್ಳಿ, ಹರೀಶ್ ಪಡವಗೋಡು, ರಮೇಶ್ ಪಡವಗೋಡು ಹಾಜರಿದ್ದರು.
ಸುದ್ದಿ ಮತ್ತು ಜಾಹೀರಾತು ನೀಡಲು-7204641701
ಮೀನಿನಹೆಜ್ಜೆ ನ್ಯೂಸ್, ಸಾಗರ


Comments
Post a Comment