ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ಸ್ಥಳವನ್ನು ಶುದ್ದೀಕರಿಸಿದ ಘಟನೆ ದೇಶದಲ್ಲಿ ಇನ್ನೂ ಅಸ್ಪಶ್ಯತೆ ಜೀವಂತವಾಗಿದೆ ಎನ್ನುವುದಕ್ಕೆ ಸಾಕ್ಷಿ-ದಲಿತ ಸಂಘರ್ಷ ಸಮಿತಿ ತಾಲ್ಲೂಕು ಸಂಚಾಲಕ ಲಕ್ಷ್ಮಣ್ ಸಾಗರ್

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ಸ್ಥಳವನ್ನು ಶುದ್ದೀಕರಿಸಿದ ಘಟನೆ ದೇಶದಲ್ಲಿ ಇನ್ನೂ ಅಸ್ಪಶ್ಯತೆ ಜೀವಂತವಾಗಿದೆ ಎನ್ನುವುದಕ್ಕೆ ಸಾಕ್ಷಿ-ದಲಿತ ಸಂಘರ್ಷ ಸಮಿತಿ ತಾಲ್ಲೂಕು ಸಂಚಾಲಕ ಲಕ್ಷ್ಮಣ್ ಸಾಗರ್


ಸಾಗರ : ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಸ್ಥಳವನ್ನು ಶುದ್ದೀಕರಿಸಿದ ಘಟನೆ ದೇಶದಲ್ಲಿ ಇನ್ನೂ ಅಸ್ಪಶ್ಯತೆ ಜೀವಂತವಾಗಿದೆ ಎನ್ನುವುದಕ್ಕೆ ಸಾಕ್ಷಿಯಾಗಿದೆ. ದಲಿತ ಸಂಘರ್ಷ ಸಮಿತಿ ಈ ಘಟನೆಯನ್ನು ತೀವೃವಾಗಿ ಖಂಡಿಸುತ್ತದೆ ಎಂದು ದಲಿತ ಸಂಘರ್ಷ ಸಮಿತಿ ತಾಲ್ಲೂಕು ಸಂಚಾಲಕ ಲಕ್ಷ್ಮಣ್ ಸಾಗರ್ ತಿಳಿಸಿದ್ದಾರೆ.


ಆಗಸ್ಟ್ 8ರಂದು ಉತ್ತರ ಖಂಡದಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ನಿಂತು ಭಾಷಣ ಮಾಡಿದ ಸ್ಥಳವನ್ನು ಶುದ್ದೀಕರಿಸಿರುವುದು ನಾಗರೀಕ ಸಮಾಜ ತಲೆತಗ್ಗಿಸುವಂತಹ ಕೃತ್ಯವಾಗಿದೆ. ಸ್ವಾತಂತ್ರ್ಯ ಬಂದು ಹಲವು ದಶಕಗಳು ಕಳೆದರೂ ಜಾತಿ ವ್ಯವಸ್ಥೆ, ಅಸ್ಪಶ್ಯತಾ ಮನಸ್ಥಿತಿ ಇನ್ನೂ ಮುಂದುವರೆದಿರುವುದು ಆತಂಕಕಾರಿ ಸಂಗತಿ. ಪ್ರತಿಯೊಬ್ಬ ನಾಗರೀಕನಿಗೂ ದೇಶದ ಸಂವಿಧಾನ ಸಮಾನತೆ, ಸಹೋದರತ್ವ ಹಾಗೂ ಆತ್ಮಗೌರವದ ಹಕ್ಕು ನೀಡಿದೆ. ಇಂತಹ ಘಟನೆಗಳು
ಸಂವಿಧಾನದ ಆಶಯಗಳಿಗೆ ಅವಮಾನ ಮಾಡುವಂತದ್ದಾಗಿದೆ.
ದಲಿತ ಸಮುದಾಯವನ್ನು ಸಮಾನವಾಗಿ ಕಾಣದ ದಲಿತ ಮನುವಾದಿ ಮನಸ್ಥಿತಿಯ ಇಂತಹ ಧೋರಣೆಗಳು ಪ್ರಜಾಪ್ರಭುತ್ವ ವಿರೋಧಿಯಾಗಿದೆ. ಈ ಘಟನೆಗೆ ಉತ್ತರಖಂಡ ಸರ್ಕಾರ ನೇರ ಹೊಣೆಹೊತ್ತು ಸಂಬಂಧಪಟ್ಟ ವಿರುದ್ದ ಪರಿಶಿಷ್ಟ ಜಾತಿ ಮತ್ತು
ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು.


ಕೋವು ಹಾಗೂ ಜಾತಿ ದ್ವೇಷಕ್ಕೆ ಕಾರಣವಾದ ಸಂಘಟನೆಗಳ ವಿರುದ್ದ ಸೂಕ್ರ ಕ್ರಮ ಕೈಗೊಳ್ಳಬೇಕು. ಉತ್ತರಾಖಂಡ ಮುಖ್ಯಮಂತ್ರಿ ನೈತಿಕ ಹೊಣೆಹೊತ್ತುಕೂಡಲೇ ರಾಜಿನಾಮೆ ನೀಡಬೇಕು ಎಂದು ಲಕ್ಷಣ್ ಸಾಗರ್ ಪತ್ರಿಕಾ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

ಸುದ್ದಿ ಮತ್ತು ಜಾಹೀರಾತು ನೀಡಲು-7204641701

ಮೀನಿನಹೆಜ್ಜೆ ನ್ಯೂಸ್, ಸಾಗರ

Comments

Popular posts from this blog

ಸಾಗರದಲ್ಲಿ SIR ಪ್ರಕ್ರಿಯೆಯಲ್ಲಿ ಅಕ್ರಮ. ಬಿ ವೈ ವಿಜಯೇಂದ್ರ ಆರೋಪ...

ರಜಪೂತ ಸಮಾಜ ಅಭಿವೃದ್ಧಿ ಮಂಡಳಿ ರಚಿಸುವ ಬಗ್ಗೆ ಸಾಗರ ಉಪವಿಭಾಗಾಧಿಕಾರಿಗಳ ಮೂಲಕ ಸರಕಾರಕ್ಕೆ ಸಾಗರ ತಾಲ್ಲೂಕು ರಜಪೂತ ಸಮಾಜದಿಂದ ಮನವಿ

ವಿವೇಕ ಸೂರ್ಯ ಎಂಬ ಅವಿವೇಕಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ-ಚಾರೋಡಿ ಕೊಂಕಣಿ ಆಚಾರ್ ಸಮಾಜ