ಪತ್ರಕರ್ತ ಅಭಿಷೇಕ್ ಉಪಾಧ್ಯಾಯ ಅವರನ್ನು ಬಂಧಿಸದಂತೆ ಸುಪ್ರೀಂ ಕೋರ್ಟ್ ತಡೆ

ಪತ್ರಕರ್ತ ಅಭಿಷೇಕ್ ಉಪಾಧ್ಯಾಯ ಅವರನ್ನು ಬಂಧಿಸದಂತೆ ಸುಪ್ರೀಂ ಕೋರ್ಟ್ ತಡೆ

ಹೊಸದಿಲ್ಲಿ: ರಾಮ ಮಂದಿರದ ದೇಣಿಗೆ ಕಳ್ಳತನವನ್ನು ಬಹಿರಂಗಪಡಿಸಿದ ಪತ್ರಕರ್ತ ಅಭಿಷೇಕ್ ಉಪಾಧ್ಯಾಯ ವಿರುದ್ಧ ಉತ್ತರ ಪ್ರದೇಶ ಪೊಲೀಸರು ದಾಖಲಿಸಿರುವ ಪ್ರಕರಣದಲ್ಲಿ ಯಾವುದೇ ಬಲವಂತದ ಕ್ರಮವನ್ನು ಕೈಗೊಳ್ಳದಂತೆ ಸುಪ್ರೀಂ ಕೋರ್ಟ್ ಮಧ್ಯಂತರ ಆದೇಶವನ್ನು ನೀಡಿದೆ.

ಸಿಜೆಐ ಸೂರ್ಯ ಕಾಂತ್, ನ್ಯಾಯಮೂರ್ತಿ ಜಾಯ್ಮಲ್ಯ ಬಾಗ್ಚಿ ಮತ್ತು ನ್ಯಾಯಮೂರ್ತಿ ವಿ ಮೋಹನ ಅವರ ಪೀಠವು ಎಫ್ಐಆರ್ ಅನ್ನು ಪ್ರಶ್ನಿಸಿ ಅಭಿಷೇಕ್ ಉಪಾಧ್ಯಾಯ ಸಲ್ಲಿಸಿದ ರಿಟ್ ಅರ್ಜಿಯನ್ನು ವಿಚಾರಣೆ ನಡೆಸಿದೆ.

ಅಭಿಷೇಕ್ ಉಪಾಧ್ಯಾಯ ಅವರ ವಿರುದ್ಧ ದಾಖಲಾದ ಎಫ್‌ಐಆರ್‌ನ ಪ್ರತಿಯನ್ನು ಅವರಿಗೆ ನೀಡುವಂತೆ ನ್ಯಾಯಾಲಯ ಪೊಲೀಸರಿಗೆ ಸೂಚಿಸಿದೆ. ಎಫ್‌ಐಆರ್ ಪ್ರತಿಯನ್ನು ಅವರಿಗೆ ನೀಡಿದ ನಂತರ ಅವರು ಸೂಕ್ತ ಪರಿಹಾರಕ್ಕಾಗಿ ಅಲಹಾಬಾದ್ ಹೈಕೋರ್ಟ್ ಅನ್ನು ಸಂಪರ್ಕಿಸಬಹುದು ಎಂದು ನ್ಯಾಯಾಲಯ ಹೇಳಿದೆ.

ಮುಂದಿನ ವಿಚಾರಣೆಯ ದಿನಾಂಕದೊಳಗೆ ಎಫ್‌ಐಆರ್ ಪ್ರತಿಯನ್ನು ಒದಗಿಸಿರುವ ಕುರಿತು ಅನುಸರಣೆ ವರದಿಯನ್ನು ಸಲ್ಲಿಸುವಂತೆ ಘಾಜಿಯಾಬಾದ್ ಪೊಲೀಸ್ ಆಯುಕ್ತರಿಗೆ ನ್ಯಾಯಾಲಯ ಸೂಚಿಸಿದೆ.

ಶಿಪ್ರಾ ಮಾಲ್ ಬಳಿ ಬೈಕ್‌ಗೆ ಬಲೆನೊ ಕಾರು ಢಿಕ್ಕಿ ಹೊಡೆದಿದೆ ಎಂದು ಗಾಝಿಯಾಬಾದ್‌ನ ಇಂದಿರಾಪುರಂ ಪೊಲೀಸ್ ಠಾಣೆಗೆ ದೂರು ನೀಡಿದ್ದ. ಘಟನೆಯ ಬಳಿಕ ಕಾರಿನ ಚಾಲಕ ತನ್ನನ್ನು ನಿಂದಿಸಿ ಬೆದರಿಕೆ ಹಾಕಿದ್ದಾನೆ. ಕಾರು ಉಪಾಧ್ಯಾಯ ಅವರಿಗೆ ಸೇರಿದ್ದು ಎಂದು ದೂರುದಾರ ಆರೋಪಿಸಿದ್ದ.

ಪತ್ರಕರ್ತ ಅಭಿಷೇಕ್ ಉಪಾಧ್ಯಾಯ ಅವರನ್ನು ಬಂಧಿಸದಂತೆ ಸುಪ್ರೀಂ ಕೋರ್ಟ್ ತಡೆ

ಸುದ್ದಿ ಮತ್ತು ಜಾಹೀರಾತು ನೀಡಲು-7204641701

ಮೀನಿನಹೆಜ್ಜೆ ನ್ಯೂಸ್, ಸಾಗರ

Comments

Popular posts from this blog

ಸಾಗರದಲ್ಲಿ SIR ಪ್ರಕ್ರಿಯೆಯಲ್ಲಿ ಅಕ್ರಮ. ಬಿ ವೈ ವಿಜಯೇಂದ್ರ ಆರೋಪ...

ರಜಪೂತ ಸಮಾಜ ಅಭಿವೃದ್ಧಿ ಮಂಡಳಿ ರಚಿಸುವ ಬಗ್ಗೆ ಸಾಗರ ಉಪವಿಭಾಗಾಧಿಕಾರಿಗಳ ಮೂಲಕ ಸರಕಾರಕ್ಕೆ ಸಾಗರ ತಾಲ್ಲೂಕು ರಜಪೂತ ಸಮಾಜದಿಂದ ಮನವಿ

ವಿವೇಕ ಸೂರ್ಯ ಎಂಬ ಅವಿವೇಕಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ-ಚಾರೋಡಿ ಕೊಂಕಣಿ ಆಚಾರ್ ಸಮಾಜ