ನೂತನ ಯುವ ಕಾಂಗ್ರೆಸ್ ಅಧ್ಯಕ್ಷರ ನೇಮಕ
ನೂತನ ಯುವ ಕಾಂಗ್ರೆಸ್ ಅಧ್ಯಕ್ಷರ ನೇಮಕ
ಸೊರಬ ತಾಲ್ಲೂಕಿನ ವಿಧಾನಸಭಾ ಕ್ಷೇತ್ರ ಹಾಗೂ ಸೊರಬ ಬ್ಲಾಕ್ ಗೆ ಯುವ ಕಾಂಗ್ರೆಸ್ ಅಧ್ಯಕ್ಷರನ್ನು ನೇಮಕ ಮಾಡಿ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷರಾದ ಹೆಚ್. ಎಸ್. ಮಂಜುನಾಥ್ ಗೌಡ ಅವರು ಆದೇಶ ಹೊರಡಿಸಿದ್ದಾರೆ.
ಸೊರಬ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಯಶೋಧರ ಸಿ. ಅಂದವಳ್ಳಿ ಹಾಗೂ ಸೊರಬ ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಪಾಂಡುರಂಗ ಕೊಡಕಣಿ ಅವರನ್ನು ನೇಮಕ ಮಾಡಲಾಗಿದೆ.
ನೂತನ ಅಧ್ಯಕ್ಷರಿಗೆ ಇಂದು ಸಚಿವ ಮಧು ಬಂಗಾರಪ್ಪ ಅವರು ನೇಮಕಾತಿ ಆದೇಶವನ್ನು ವಿತರಿಸಿದರು.
ಕಾಂಗ್ರೆಸ್ ಪಕ್ಷದ ಮಾರ್ಗದರ್ಶನದಲ್ಲಿ, ಹಿರಿಯ ಹಾಗೂ ಕಿರಿಯ ಸ್ಥಳೀಯ ಮುಖಂಡರ ಸಹಕಾರದೊಂದಿಗೆ ಯುವ ಕಾಂಗ್ರೆಸ್ ಸಂಘಟನೆಯನ್ನು ಮತ್ತಷ್ಟು ಬಲಿಷ್ಠಗೊಳಿಸುವಂತೆ ರಾಜ್ಯಾಧ್ಯಕ್ಷರು ನೂತನ ಅಧ್ಯಕ್ಷರಿಗೆ ಸೂಚಿಸಿದ್ದಾರೆ. ಮುಂಬರುವ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು, ರಾಹುಲ್ ಗಾಂಧಿ ಅವರ ಮಾರ್ಗದರ್ಶನದಂತೆ ಯುವ ಘಟಕವನ್ನು ತಳಮಟ್ಟದಿಂದ ಸಂಘಟಿಸಿ, ಪಕ್ಷದ ಸಂಘಟನೆಯನ್ನು ಮತ್ತಷ್ಟು ಸದೃಢಗೊಳಿಸುವಂತೆ ಅವರು ಕರೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಪ್ರಸನ್ನ ಕುಮಾರ್ ಅವರು, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಹರ್ಷಿತ್ ಗೌಡ ರವರು, ಸೇರಿದಂತೆ ಸೊರಬ ತಾಲ್ಲೂಕಿನ ಯುವ ಕಾಂಗ್ರೆಸ್ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿ ಮತ್ತು ಜಾಹೀರಾತು ನೀಡಲು-7204641701
ಮೀನಿನಹೆಜ್ಜೆ ನ್ಯೂಸ್, ಸಾಗರ


Comments
Post a Comment