ನಾಳೆ ಸಾಗರದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಗ್ರಹಣ ಹಾಗೂ ಸನ್ಮಾನ ಸಮಾರಂಭ
ನಾಳೆ ಸಾಗರದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಗ್ರಹಣ ಹಾಗೂ ಸನ್ಮಾನ ಸಮಾರಂಭ
ಸಾಗರ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ (ರಿ.) ಸಾಗರ ಶಾಖೆಯ ನೂತನ ಪದಾಧಿಕಾ ರಿಗಳ ಪದಗ್ರಹಣ ಮತ್ತು ನಿವೃತ್ತ ಶಿಕ್ಷಕರಿಗೆ ಅಭಿನಂದನೆ ಹಾಗೂ ಸಾಧಕ ಶಿಕ್ಷಕರಿಗೆ ಸನ್ಮಾನ ಸಮಾರಂಭವು ನಾಳೆ (ಆಗಸ್ಟ್ 29, ಶನಿವಾರ) ಮಧ್ಯಾಹ್ನ 12:45ಕ್ಕೆ ನಗರದ ಬ್ರಾ.ಸಂ.ಸಭಾಭವನ ದಲ್ಲಿ ಜರುಗಲಿದೆ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಾಗರ ಶಾಖೆಯ ಅಧ್ಯಕ್ಷರಾದ ಮಾಲತೇಶಪ್ಪ ತಿಳಿಸಿದ್ದಾರೆ.
ನಂತರದಲ್ಲಿ ಮಾತನಾಡಿದ ಅವರು ಶಿಕ್ಷಕರ ಸಂಘಟನೆಯನ್ನು ಬಲಪಡಿಸುವ ಹಾಗೂ ಶಿಕ್ಷಕರ ಸೇವೆಯನ್ನು ಗೌರವಿಸುವ ಉದ್ದೇಶದಿಂದ ಈ ಬೃಹತ್ ಸಮಾರಂಭವನ್ನು ಆಯೋಜಿಸಲಾಗಿದೆ ಎಂದರು.
ಕಾರ್ಯಕ್ರಮವನ್ನು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕೆ ನಿಗಮದ ಅಧ್ಯಕ್ಷರಾದ ಗೋಪಾಲಕೃಷ್ಣ ಬೇಳೂರು ಅವರು ಉದ್ಘಾಟಿಸಲಿ ದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಾಗರ ಶಾಖೆಯ ಅಧ್ಯಕ್ಷರಾದ ಮಾಲತೇಶಪ್ಪ ವಹಿಸಲಿದ್ದು, ಸಾಗರ ಶಾಲಾ ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸದಾನಂದ ಸ್ವಾಮಿ ಸಿ.ಅವರು ವಿಶೇಷ ಆಹ್ವಾನಿತರಾಗಿ ಉಪಸ್ಥಿತರಿರಲಿದ್ದಾರೆ.
ಈ ಸಮಾರಂಭದಲ್ಲಿ ಸಂಘದ ನೂತನ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ನಿರ್ದೇಶಕರು ಅಧಿಕಾರ ಸ್ವೀಕರಿಸಲಿದ್ದಾರೆ. ಇದೇ ಸಂದರ್ಭದಲ್ಲಿ 2026ರ ಏಪ್ರಿಲ್‌ನಿಂದ ಜುಲೈವರೆಗೆ ಸೇವಾ ನಿವೃತ್ತಿ ಹೊಂದಿದ ಶಿಕ್ಷಕರನ್ನು ಗೌರವಿಸಿ ಅಭಿನಂದಿಸಲಾಗುವುದು. ಜೊತೆಗೆ ರಾಜ್ಯ ಹಾಗೂ ರಾಷ್ಟ್ರಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಶಿಷ್ಟ ಸಾಧನೆಗೈದ ಶಿಕ್ಷಕ-ಪ್ರತಿಭೆಗಳಿಗೆ ಸನ್ಮಾನ ನೆರವೇರಲಿದ್ದು, ಮಧ್ಯಾಹ್ನ 1:00 ಗಂಟೆಗೆ ಭೋಜನ ವ್ಯವಸ್ಥೆ ಇರಲಿದೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.
ಸುದ್ದಿ ಮತ್ತು ಜಾಹೀರಾತು ನೀಡಲು-7204641701
ಮೀನಿನಹೆಜ್ಜೆ ನ್ಯೂಸ್, ಸಾಗರ



Comments
Post a Comment