ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಸ್ಕೃತಿ ಮತ್ತು ಸಾಹಿತ್ಯ ಪರಿಷತ್ತು, ಸಾಗರ ಘಟಕದ‌ಪ್ರಥಮ ಕಾರ್ಯಕಾರಣಿ ಸಭೆ ಯಶಸ್ವಿ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಸ್ಕೃತಿ ಮತ್ತು ಸಾಹಿತ್ಯ ಪರಿಷತ್ತು, ಸಾಗರ ಘಟಕದ‌ಪ್ರಥಮ ಕಾರ್ಯಕಾರಣಿ ಸಭೆ ಯಶಸ್ವಿ


ದಿನಾಂಕ: 06/08/2026 ರಂದು ಅಜಿತ್ ಸಭಾಭವನ, ಸೇವಾ ಸಾಗರ ಶಾಲೆ, ಸಾಗರ ತಾಲೂಕು, ಶಿವಮೊಗ್ಗ ಜಿಲ್ಲೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಸ್ಕೃತಿ ಮತ್ತು ಸಾಹಿತ್ಯ ಪರಿಷತ್ತು, ಸಾಗರ ಘಟಕದ ಪ್ರಥಮ ಕಾರ್ಯಕಾರಿ ಸಮಿತಿಯ ಸಭೆಯು ಯಶಸ್ವಿಯಾಗಿ ನಡೆಯಿತು.

ಸಭೆಯಲ್ಲಿ ಸಮಿತಿಯ ಮುಂದಿನ ಕಾರ್ಯವಿಧಾನ, ಸಂಘಟನೆಯ ಬೆಳವಣಿಗೆ, ವಿವಿಧ ಸಾಂಸ್ಕೃತಿಕ ಹಾಗೂ ಸಾಹಿತ್ಯ ಚಟುವಟಿಕೆಗಳ ಅನುಷ್ಠಾನ, ಸದಸ್ಯರ ಸಕ್ರಿಯ ಭಾಗವಹಿಸುವಿಕೆ ಹಾಗೂ ಮುಂದಿನ ಕಾರ್ಯಕ್ರಮಗಳ ರೂಪುರೇಷೆಗಳ ಕುರಿತು ಸವಿಸ್ತಾರವಾಗಿ ಚರ್ಚಿಸಲಾಯಿತು. ಸಭೆಗೆ ಆಗಮಿಸಿದ ಎಲ್ಲಾ ಪದಾಧಿಕಾರಿಗಳು ಹಾಗೂ ಸದಸ್ಯರು ಅಮೂಲ್ಯವಾದ ಸಲಹೆ–ಸೂಚನೆಗಳನ್ನು ನೀಡಿ ಸಮಿತಿಯ ಕಾರ್ಯಚಟುವಟಿಕೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಡೆಸುವ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.

ಈ ಸಭೆಗೆ ಸಮಿತಿಯ ಮಹಾಪೋಷಕರಾದ  ಸುರೇಶ್ ಎಂ. ಕೆ., ಮುಖ್ಯಾಧಿಕಾರಿಗಳು, ಪಟ್ಟಣ ಪಂಚಾಯತ್, ಕಾರ್ಗಲ್; ಗೌರವಾಧ್ಯಕ್ಷರಾದ  ಬಾಲಚಂದ್ರ, ವ್ಯವಸ್ಥಾಪಕರು, ನಗರಸಭೆ, ಸಾಗರ, ಅಧ್ಯಕ್ಷರಾದ ದಿನೇಶ್ ಸಂಪಳ್ಳಿ, ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಸತೀಶ್ ಎಂ. ನಾಯ್ಕ್, ಜಿಲ್ಲಾ ಉಪಾಧ್ಯಕ್ಷರಾದ ರವಿರಾಜ್ ಕಾರ್ಯದರ್ಶಿಗಳಾದ  ವೀರೇಂದ್ರ ಕುಮಾರ್ ಕೆ. ಎ., ಖಜಾಂಚಿಗಳಾದ ಚಂದ್ರಶೇಖರ್, ಉಪಾಧ್ಯಕ್ಷರಾದ ಶೇಖರ್ ಹಾಗೂ ಕುಮಾರಿ ಗೀತಾ ಎಸ್., ಸಂಘಟನಾ ಕಾರ್ಯದರ್ಶಿಗಳಾದ ಮೋಹನ್, ಕ್ರೀಡಾ ಕಾರ್ಯದರ್ಶಿಗಳಾದ ಶಿವಪ್ಪ ಕೆ. ಎನ್., ನಿರ್ದೇಶಕರಾದ ಬೂದ್ಯಪ್ಪ ಡಿ., ಅಣ್ಣಪ್ಪ ನಾಯ್ಕ್, ಶ್ರೀಮತಿ ಆಶಾ ಎನ್. ಸಿ., ಲೊಲಕುಮಾರ, ಶ್ರೀಮತಿ ಶಿಲ್ಪಾಬಾಯಿ ಹಾಗೂ ಜಗನ್ನಾಥ್ ಆರ್. ಆರ್. ಉಪಸ್ಥಿತರಿದ್ದು ಸಭೆಯ ಯಶಸ್ಸಿಗೆ ಸಹಕರಿಸಿದರು.

ಸಭೆಯು ಸೌಹಾರ್ದಯುತ ಹಾಗೂ ಉತ್ಸಾಹಭರಿತ ವಾತಾವರಣದಲ್ಲಿ ನಡೆಯಿತು. ಸಮಿತಿಯ ಮುಂದಿನ ಕಾರ್ಯಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಎಲ್ಲ ಪದಾಧಿಕಾರಿಗಳು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುವ ಸಂಕಲ್ಪವನ್ನು ವ್ಯಕ್ತಪಡಿಸಿದರು. ಅಂತಿಮವಾಗಿ  ಅಧ್ಯಕ್ಷರು ಸಮಿತಿಯ ಕುರಿತು ಅನೇಕ ವಿಷಯಗಳನ್ನು  ಚರ್ಚಿಸಿ ಮಾಹಿತಿ ಹಂಚಿಕೊಂಡು ಎಲ್ಲರಿಗೂ ಧನ್ಯವಾದಗಳನ್ನು ಅರ್ಪಿಸಿ ಸಭೆಯನ್ನು ಮುಕ್ತಾಯಗೊಳಿಸಿದರು.


ಸುದ್ದಿ ಮತ್ತು ಜಾಹೀರಾತು ನೀಡಲು-7204641701

ಮೀನಿನಹೆಜ್ಜೆ ನ್ಯೂಸ್, ಸಾಗರ

Comments

Popular posts from this blog

ಸಾಗರದಲ್ಲಿ SIR ಪ್ರಕ್ರಿಯೆಯಲ್ಲಿ ಅಕ್ರಮ. ಬಿ ವೈ ವಿಜಯೇಂದ್ರ ಆರೋಪ...

ರಜಪೂತ ಸಮಾಜ ಅಭಿವೃದ್ಧಿ ಮಂಡಳಿ ರಚಿಸುವ ಬಗ್ಗೆ ಸಾಗರ ಉಪವಿಭಾಗಾಧಿಕಾರಿಗಳ ಮೂಲಕ ಸರಕಾರಕ್ಕೆ ಸಾಗರ ತಾಲ್ಲೂಕು ರಜಪೂತ ಸಮಾಜದಿಂದ ಮನವಿ

ವಿವೇಕ ಸೂರ್ಯ ಎಂಬ ಅವಿವೇಕಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ-ಚಾರೋಡಿ ಕೊಂಕಣಿ ಆಚಾರ್ ಸಮಾಜ