ಕರ್ನಾಟಕ ರಾಜ್ಯಾದ್ಯಂತ ತಂಬಾಕು-ನಿಕೋಟಿನ್ ಉತ್ಪನ್ನಗಳ ಮಾರಾಟಕ್ಕೆ ಒಂದು ವರ್ಷ ನಿಷೇಧ

ಕರ್ನಾಟಕ ರಾಜ್ಯಾದ್ಯಂತ ತಂಬಾಕು-ನಿಕೋಟಿನ್ ಉತ್ಪನ್ನಗಳ ಮಾರಾಟಕ್ಕೆ ಒಂದು ವರ್ಷ ನಿಷೇಧ

ಬೆಂಗಳೂರು ; ರಾಜ್ಯದಲ್ಲಿ ತಂಬಾಕು ಮತ್ತು ನಿಕೋಟಿನ್ ಹೊಂದಿರುವ ಉತ್ಪನ್ನಗಳ ವಿರುದ್ಧ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಕಠಿಣ ಕ್ರಮಕ್ಕೆ ಮುಂದಾಗಿದೆ. ಗುಟ್ಕಾ, ಪಾನ್ ಮಸಾಲಾ ಹಾಗೂ ತಂಬಾಕು-ನಿಕೋಟಿನ್ ಹೊಂದಿ ರುವ ಇತರ ನಿಷೇಧಿತ ಉತ್ಪನ್ನಗಳ ತಯಾರಿಕೆ, ಸಂಗ್ರಹಣೆ, ಸಾಗಣೆ, ವಿತರಣೆ ಮತ್ತು ಮಾರಾಟದ ವಿರುದ್ಧ ರಾಜ್ಯಾದ್ಯಂತ ವಿಶೇಷ ತಪಾಸಣೆ ಹಾಗೂ ಜಾರಿ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಇಲಾಖೆ ತಿಳಿಸಿದೆ.

ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಕಾಯ್ದೆ-2006 ಹಾಗೂ ಸಂಬಂಧಿತ ನಿಯಮಗಳಡಿ ಅಧಿಕಾರಿಗಳು ನಿಷೇಧಿತ ಉತ್ಪನ್ನಗಳ ವಿರುದ್ಧ ಕ್ರಮ ಕೈಗೊಳ್ಳಲಿದ್ದಾರೆ. ರಾಜ್ಯದಲ್ಲಿ ತಂಬಾಕು ಮತ್ತು ನಿಕೋಟಿನ್ ಹೊಂದಿರುವ ಉತ್ಪನ್ನಗಳ ಮಾರಾಟ ಹಾಗೂ ವಿತರಣೆಯನ್ನು ನಿಷೇಧಿಸುವ ಅಧಿಸೂಚನೆ ಯನ್ನು ಆ.10ರಂದು ಹೊರಡಿಸಲಾಗಿದ್ದು, ಅಧಿಸೂಚ ನೆ ಜಾರಿಯಾದ ದಿನದಿಂದ ಒಂದು ವರ್ಷದ ಅವಧಿಗೆ ರಾಜ್ಯಾದ್ಯಂತ ನಿಷೇಧ ಜಾರಿಯಲ್ಲಿರಲಿದೆ.

ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ನಿಷೇಧಿತ ಉತ್ಪನ್ನಗಳ ಮಾರಾಟ ಕಂಡುಬಂದಲ್ಲಿ ಕಾನೂನುಬದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ಎಚ್ಚರಿಸಿದೆ.

ಸುದ್ದಿ ಮತ್ತು ಜಾಹೀರಾತು ನೀಡಲು-7204641701

ಮೀನಿನಹೆಜ್ಜೆ ನ್ಯೂಸ್, ಸಾಗರ

Comments

Popular posts from this blog

ಸಾಗರದಲ್ಲಿ SIR ಪ್ರಕ್ರಿಯೆಯಲ್ಲಿ ಅಕ್ರಮ. ಬಿ ವೈ ವಿಜಯೇಂದ್ರ ಆರೋಪ...

ರಜಪೂತ ಸಮಾಜ ಅಭಿವೃದ್ಧಿ ಮಂಡಳಿ ರಚಿಸುವ ಬಗ್ಗೆ ಸಾಗರ ಉಪವಿಭಾಗಾಧಿಕಾರಿಗಳ ಮೂಲಕ ಸರಕಾರಕ್ಕೆ ಸಾಗರ ತಾಲ್ಲೂಕು ರಜಪೂತ ಸಮಾಜದಿಂದ ಮನವಿ

ವಿವೇಕ ಸೂರ್ಯ ಎಂಬ ಅವಿವೇಕಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ-ಚಾರೋಡಿ ಕೊಂಕಣಿ ಆಚಾರ್ ಸಮಾಜ