ಅಪಘಾತ : ಪ್ರಯಾಣಿಕರು ಪಾರು - ಆಸ್ಪತ್ರೆಗೆ ದಾಖಲು
ಅಪಘಾತ : ಪ್ರಯಾಣಿಕರು ಪಾರು - ಆಸ್ಪತ್ರೆಗೆ ದಾಖಲು
ಸಾಗರ : ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 206ರ ಕಾಸ್ಪಾಡಿ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಕೆರೆಯ ತಡೆಗೋಡೆಗೆ ಢಿಕ್ಕಿ ಹೊಡೆದ ಘಟನೆ ಶನಿವಾರ ನಡೆದಿದೆ.
ಸಾಗರದಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದ ಖಾಸಗಿ ಬಸ್‌ನಲ್ಲಿ ಅನಂದಪುರ ಕರ್ನಾಟಕ ಪಬ್ಲಿಕ್ ಶಾಲೆಯ ಪದವಿಪೂರ್ವ ವಿಭಾಗದ ವಿದ್ಯಾರ್ಥಿಗಳು ಸೇರಿ 48 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಸಾಗರದಲ್ಲಿ ನಡೆದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಭಾಗವಹಿಸಿ ವಿದ್ಯಾರ್ಥಿಗಳು ಆನಂದಪುರಕ್ಕೆ ವಾಪಾಸಾಗುತ್ತಿದ್ದರು.
ಕಾಸ್ಪಾಡಿ ಕೆರೆ ಸಮೀಪ ಬರುತ್ತಿದ್ದಂತೆಯೆ ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿಯ ಕೆರೆಯ ತಡೆಗೋಡೆಗೆ ಡಿಕ್ಕಿಯಾಗಿದ್ದು ಬಸ್‌ನಲ್ಲಿದ್ದ 10 ವಿದ್ಯಾರ್ಥಿಗಳು, ಓರ್ವ ಶಿಕ್ಷಕರಿಗೆ ಸಣ್ಣಪುಟ್ಟ ಗಾಯವಾಗಿದೆ. ಗಾಯಾಳುಗಳನ್ನು ತಕ್ಷಣ ಆನಂದಪುರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆ ಅಗತ್ಯ ಇದ್ದವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸಲಾಗಿದೆ.
ಸುದ್ದಿ ಮತ್ತು ಜಾಹೀರಾತು ನೀಡಲು - 7204641701
ಮೀನಿನಹೆಜ್ಜೆ ನ್ಯೂಸ್, ಸಾಗರ



Comments
Post a Comment