ಮಧುಬಂಗಾರಪ್ಪಗೆ ಸಚಿವ ಸ್ಥಾನ ; ಶಿವಮೊಗ್ಗ ಜಿಲ್ಲಾ ಆರ್ಯ ಈಡಿಗ ಸಂಘ ಹರ್ಷ

ಮಧುಬಂಗಾರಪ್ಪಗೆ ಸಚಿವ ಸ್ಥಾನ ; ಶಿವಮೊಗ್ಗ ಜಿಲ್ಲಾ ಆರ್ಯ ಈಡಿಗ ಸಂಘ ಹರ್ಷ


ಶಿವಮೊಗ್ಗ: ರಾಜ್ಯ ಸಚಿವ ಸಂಪುಟಕ್ಕೆ ಮಧುಬಂಗಾರಪ್ಪ ಅವರನ್ನು ಸೇರಿಸಿಕೊಂಡಿರುವುದಕ್ಕೆ ಶಿವಮೊಗ್ಗ ಜಿಲ್ಲಾ ಆರ್ಯ ಈಡಿಗ ಸಂಘ ಹರ್ಷ ವ್ಯಕ್ತಪಡಿಸಿದೆ.

ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಸಂಘದ ಅಧ್ಯಕ್ಷ ಆರ್.ಶ್ರೀಧರ್‌ ಹುಲ್ತಿಕೊಪ್ಪ ಅವರು, ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಈಡಿಗ ಸಮುದಾಯಕ್ಕೆ ಹೆಚ್ಚಿನ ಪ್ರಾತಿನಿಧ್ಯ ನೀಡಬೇಕೆಂಬ ಮನವಿ ಮಾಡಲಾಗಿತ್ತು. ಈಗ ಸಮುದಾಯದ ಪ್ರಶ್ನಾತೀತ ನಾಯಕರಾಗಿದ್ದ ಮಾಜಿ ಮುಖ್ಯಮಂತ್ರಿ ಎಸ್.‌ ಬಂಗಾರಪ್ಪ ಅವರ ಪುತ್ರರೂ ನಮ್ಮ ಸಮುದಾಯದ ಹೆಮ್ಮೆಯ ಮಧುಬಂಗಾರಪ್ಪ ಅವರಿಗೆ ಸಂಪುಟಕ್ಕೆ ಸೇರಿಸಲಾಗಿದೆ. ಸಂಖ್ಯೆಯ ದೃಷ್ಟಿಯಿಂದ ಸಮುದಾಯಕ್ಕೆ ಇನ್ನೂ ಹೆಚ್ಚಿನ ಆದ್ಯತೆ ನೀಡಬೇಕೆಂಬ ಬಯಕೆ ಜನರದ್ದಾಗಿತ್ತು ಆದರೆ ಈಗ ಕೊಟ್ಟಿರುವ ಅವಕಾಶಕ್ಕಾಗಿ ಪಕ್ಷಕ್ಕೆ ಧನ್ಯವಾದ ಸಲ್ಲಿಸುವುದಾಗಿ ಅವರು ತಿಳಿಸಿದ್ದಾರೆ.


ಈಡಿಗ ಸಮುದಾಯದ ಹೆಮ್ಮೆಯ ಯುವನಾಯಕ ಮಧುಬಂಗಾರಪ್ಪರಿಗೆ ಸಚಿವರನ್ನು ಮಾಡಿರುವುದಕ್ಕೆ ಕಾಂಗ್ರೆಸ್‌ ಪಕ್ಷದ ನಾಯಕರಿಗೆ ಈಡಿಗರ ಸಂಘ ಧನ್ಯವಾದ ಹೇಳುತ್ತದೆ. ಮಧು ಬಂಗಾರಪ್ಪ ಅವರಿಗೆ ಉತ್ತಮ ಖಾತೆಯನ್ನು ನೀಡುವ ಮೂಲಕ ಸಮುದಾಯಕ್ಕೆ ಹೆಚ್ಚಿನ ಶಕ್ತಿ ನೀಡಬೇಕೆಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಲ್ಲಿ ಮನವಿ ಮಾಡುವುದಾಗಿ ಶ್ರೀಧರ್‌ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸುದ್ದಿ ಮತ್ತು ಜಾಹೀರಾತು ನೀಡಲು-7204641701

ಮೀನಿನಹೆಜ್ಜೆ ನ್ಯೂಸ್, ಸಾಗರ

Comments

Popular posts from this blog

ಸಾಗರದಲ್ಲಿ SIR ಪ್ರಕ್ರಿಯೆಯಲ್ಲಿ ಅಕ್ರಮ. ಬಿ ವೈ ವಿಜಯೇಂದ್ರ ಆರೋಪ...

ರಜಪೂತ ಸಮಾಜ ಅಭಿವೃದ್ಧಿ ಮಂಡಳಿ ರಚಿಸುವ ಬಗ್ಗೆ ಸಾಗರ ಉಪವಿಭಾಗಾಧಿಕಾರಿಗಳ ಮೂಲಕ ಸರಕಾರಕ್ಕೆ ಸಾಗರ ತಾಲ್ಲೂಕು ರಜಪೂತ ಸಮಾಜದಿಂದ ಮನವಿ

ವಿವೇಕ ಸೂರ್ಯ ಎಂಬ ಅವಿವೇಕಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ-ಚಾರೋಡಿ ಕೊಂಕಣಿ ಆಚಾರ್ ಸಮಾಜ