ಗೋಪಾಲಕೃಷ್ಣ ಬೇಳೂರುಗೆ ಮಂತ್ರಿ ಸ್ಥಾನ ಕೈತಪ್ಪಿದ್ದಕ್ಕೆ ಬೇಸರ : ಸಾಗರ ತಾಲ್ಲೂಕು ಪಂಚ ಗ್ಯಾರಂಟಿ ಯೋಜನೆಗಳ ಸಮಿತಿ‌ ಸದಸ್ಯ ನಾಗರಾಜ ಕಲ್ಮನೆ ರಾಜೀನಾಮೆ ನೀಡುವ ಹೇಳಿಕೆ

ಗೋಪಾಲಕೃಷ್ಣ ಬೇಳೂರುಗೆ ಮಂತ್ರಿ ಸ್ಥಾನ ಕೈತಪ್ಪಿದ್ದಕ್ಕೆ ಬೇಸರ : ಸಾಗರ ತಾಲ್ಲೂಕು ಪಂಚ ಗ್ಯಾರಂಟಿ ಯೋಜನೆಗಳ ಸಮಿತಿ‌ ಸದಸ್ಯ ನಾಗರಾಜ ಕಲ್ಮನೆ ರಾಜೀನಾಮೆ ನೀಡುವ ಹೇಳಿಕೆ

ಸಾಗರ: ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಗೋಪಾಲಕೃಷ್ಣ ಬೆಳೂರು ಅವರಿಗೆ ಸಚಿವ ಸಂಪುಟದಲ್ಲಿ ಮಂತ್ರಿ ಸ್ಥಾನ ಸಿಗದಿರುವುದಕ್ಕೆ ತೀವ್ರ ಬೇಸರ ವ್ಯಕ್ತಪಡಿಸಿ, ಸಾಗರ ವಿಧಾನಸಭಾ ಕ್ಷೇತ್ರದ ಸಾಗರ ತಾಲ್ಲೂಕು ಕ್ಷೇತ್ರದ ಗ್ಯಾರಂಟಿ ಯೋಜನೆಗಳ ಸಮಿತಿ ಸದಸ್ಯ ನಾಗರಾಜ ಕಲ್ಮನೆ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಮೂರನೇಕಣ್ಣು ನ್ಯೂಸ್, ಸಾಗರಕ್ಕೆ ಹೇಳಿಕೆ ನೀಡಿದ್ದಾರೆ.


ದೀರ್ಘ ಕಾಲದಿಂದ ಶಾಸಕ ಗೋಪಾಲಕೃಷ್ಣ ಬೆಳೂರು ಅವರೊಂದಿಗೆ ರಾಜಕೀಯವಾಗಿ ಗುರುತಿಸಿಕೊಂಡಿರುವ ನಾಗರಾಜ ಕಲ್ಮನೆ ಅವರು, ತಮ್ಮ ರಾಜಕೀಯ ಗುರುಗಳಾದ ಕಾಗೋಡು ತಿಮ್ಮಪ್ಪನವರ ಮಾರ್ಗದರ್ಶನದಲ್ಲಿ ಸಾಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅವರು ಬಡ ಬಗ್ಗರ ಬಗ್ಗೆ ಅತೀ ಕಾಳಜಿ ವಹಿಸಿದ್ದರು. ಅಂತಹ ವ್ಯಕ್ತಿಗೆ ಹೈಕಮಾಂಡ್ ಸರಿಯಾಗಿ ನಡೆಸಿಕೊ‌ಂಡಿಲ್ಲ ಎಂದು ಅವರು ತಮ್ಮ ಬೇಸರವನ್ನು ವ್ಯಕ್ತಪಡಿಸಿದ್ದಾರೆ.

ತಮ್ಮ ನಾಯಕರಿಗೆ ಮಂತ್ರಿ ಸ್ಥಾನ ಸಿಗದೆ ಇರುವುದರಿಂದ ತೀವ್ರ ಮನನೊಂದು ರಾಜೀನಾಮೆ ನಿರ್ಧಾರಕ್ಕೆ ಬಂದಿರುವುದಾಗಿ  ತಿಳಿಸಿದ್ದಾರೆ. ಈ ಬೆಳವಣಿಗೆಯ ಬೆನ್ನಲ್ಲೇ, ಪಕ್ಷದ ಹಲವು ಪ್ರಮುಖ ಕಾರ್ಯಕರ್ತರು ಮತ್ತು ಪದಾಧಿಕಾರಿಗಳು ಸಹ ಇದೇ ಹಾದಿ ತುಳಿಯಲಿದ್ದಾರೆಂದು,  ತಾವೂ ಕೂಡ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ನಾಗರಾಜ ಕಲ್ಮನೆ ಅವರ ಈ ದಿಢೀರ್ ರಾಜೀನಾಮೆ ಹೇಳಿಕೆ ಸಾಗರ ಕ್ಷೇತ್ರದ ಕಾಂಗ್ರೆಸ್ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ.

ಸುದ್ದಿ ಮತ್ತು ಜಾಹೀರಾತು ನೀಡಲು-7204641701

ಮೀನಿನಹೆಜ್ಜೆ ನ್ಯೂಸ್, ಸಾಗರ

Comments

Popular posts from this blog

ಸಾಗರದಲ್ಲಿ SIR ಪ್ರಕ್ರಿಯೆಯಲ್ಲಿ ಅಕ್ರಮ. ಬಿ ವೈ ವಿಜಯೇಂದ್ರ ಆರೋಪ...

ರಜಪೂತ ಸಮಾಜ ಅಭಿವೃದ್ಧಿ ಮಂಡಳಿ ರಚಿಸುವ ಬಗ್ಗೆ ಸಾಗರ ಉಪವಿಭಾಗಾಧಿಕಾರಿಗಳ ಮೂಲಕ ಸರಕಾರಕ್ಕೆ ಸಾಗರ ತಾಲ್ಲೂಕು ರಜಪೂತ ಸಮಾಜದಿಂದ ಮನವಿ

ವಿವೇಕ ಸೂರ್ಯ ಎಂಬ ಅವಿವೇಕಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ-ಚಾರೋಡಿ ಕೊಂಕಣಿ ಆಚಾರ್ ಸಮಾಜ