ಲೋಕಾಯುಕ್ತರ ನಗರಸಭೆಗೆ ದಿಢೀರ್ ಭೇಟಿ ನೀಡಿ ಕಡತಗಳ ಪರಿಶೀಲನೆ

ಲೋಕಾಯುಕ್ತರ ನಗರಸಭೆಗೆ ದಿಢೀರ್ ಭೇಟಿ ನೀಡಿ ಕಡತಗಳ ಪರಿಶೀಲನೆ


ಸಾಗರ : ಪಟ್ಟಣದ ಜಂಬಗಾರು ಬಡಾವಣೆಯ ಸರ್ವೇ ನಂ. 63ರ 4 ಎಕರೆ ಭೂಮಿ ಅನಧಿಕೃತವಾಗಿ ಖಾತೆಯಾಗಿರುವ ಹಿನ್ನೆಲೆಯಲ್ಲಿ ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವರದಿ ಹಿನ್ನೆಲೆಯಲ್ಲಿ ಸೋಮವಾರ ಲೋಕಾಯುಕ್ತರು ನಗರಸಭೆಗೆ ದಿಢೀರ್ ಭೇಟಿ ನೀಡಿ ಕಡತಗಳನ್ನು ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಲೋಕಾಯುಕ್ತ ಡಿ.ವೈ.ಎಸ್.ಪಿ. ಚಂದ್ರಶೇಖರ್, ನಗರಸಭೆ ವ್ಯಾಪ್ತಿಯ ಜಂಬಗಾರು ಬಡಾವಣೆಯ ಸರ್ವೇ ನಂ. 63ರಲ್ಲಿ ಅಶ್ವತ್ಥನಾರಾಯಣ ಎಂಬ ಮೂಲವ್ಯಕ್ತಿಯ ಹೆಸರಿನಲ್ಲಿದ್ದ ೪ ಎಕರೆ ಭೂಮಿಯನ್ನು ಶರಾವತಿ ಜನಾಭಿವೃದ್ದಿ ಸಂಸ್ಥೆ ಹೆಸರಿಗೆ ರಿಜಿಸ್ಟರ್ ಆಗಿತ್ತು. ಭೂಮಿ ಖಾಲಿ ಇರುವುದನ್ನು ಗಮನಿಸಿದ ಅನಿಲಕುಮಾರ್ರ್  ಎಂಬಾತ ತಮ್ಮ ಹೆಸರಿಗೆ ಅಶ್ವತ್ಥನಾರಾಯಣ ಜಿಪಿಎ ಮಾಡಿಕೊಟ್ಟಿದ್ದಾರೆಂದು ನಗರಸಭೆಗೆ ನಕಲಿ ದಾಖಲೆ ನೀಡಿ ನಿವೇಶನವನ್ನು ಮಾರಾಟ ಮಾಡಿದ್ದಾರೆ ಎಂದು ಹೇಳಿದರು.

ನಿವೇಶನ ಅಕ್ರಮ ನಡೆದಿರುವ ಮಾಹಿತಿಯನ್ನು ಗಮನಿಸಿ ಲೋಕಾಯುಕ್ತ ಸುಮೋಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದೆ. ಇದೀಗ ಅಗತ್ಯ ಮಾಹಿತಿ ಕಲೆ ಹಾಕಲು ಸೋಮವಾರ ನಗರಸಭೆಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಇನ್ಸ್'ಪೆಕ್ಟರ್ ರುದ್ರೇಶ್, ವೀರಬಸಪ್ಪ, ಸಿಬ್ಬಂದಿಗಳಾದ ಟೀಕಪ್ಪ,ಮಂಝುನಾಥ್, ಸುರೇಂದ್ರ, ಆದರ್ಶ, ಚಂದ್ರಿಬಾಯಿ, ಅಂಜಲಿ, ಚೇತನ್, ಆನಂದ್ ಹಾಜರಿದ್ದರು.


ಸುದ್ದಿ ಮತ್ತು ಜಾಹೀರಾತು ನೀಡಲು-7204641701

ಮೀನಿನಹೆಜ್ಜೆ ನ್ಯೂಸ್, ಸಾಗರ

Comments

Popular posts from this blog

ಸಾಗರದಲ್ಲಿ SIR ಪ್ರಕ್ರಿಯೆಯಲ್ಲಿ ಅಕ್ರಮ. ಬಿ ವೈ ವಿಜಯೇಂದ್ರ ಆರೋಪ...

ರಜಪೂತ ಸಮಾಜ ಅಭಿವೃದ್ಧಿ ಮಂಡಳಿ ರಚಿಸುವ ಬಗ್ಗೆ ಸಾಗರ ಉಪವಿಭಾಗಾಧಿಕಾರಿಗಳ ಮೂಲಕ ಸರಕಾರಕ್ಕೆ ಸಾಗರ ತಾಲ್ಲೂಕು ರಜಪೂತ ಸಮಾಜದಿಂದ ಮನವಿ

ವಿವೇಕ ಸೂರ್ಯ ಎಂಬ ಅವಿವೇಕಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ-ಚಾರೋಡಿ ಕೊಂಕಣಿ ಆಚಾರ್ ಸಮಾಜ