ಗೋಪಾಲಕೃಷ್ಣ ಬೇಳೂರುಗೆ ಮಂತ್ರಿ ಸ್ಥಾನ ಕೈತಪ್ಪಿದ್ದಕ್ಕೆ ಬೇಸರ: ಸಾಗರ NSUI ಅಧ್ಯಕ್ಷ ಚಿನ್ಮಯ ರಾಜೀನಾಮೆ
ಗೋಪಾಲಕೃಷ್ಣ ಬೇಳೂರುಗೆ ಮಂತ್ರಿ ಸ್ಥಾನ ಕೈತಪ್ಪಿದ್ದಕ್ಕೆ ಬೇಸರ: ಸಾಗರ NSUI ಅಧ್ಯಕ್ಷ ಚಿನ್ಮಯ ರಾಜೀನಾಮೆ
ಸಾಗರ: ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಗೋಪಾಲಕೃಷ್ಣ ಬೆಳೂರು ಅವರಿಗೆ ಸಚಿವ ಸಂಪುಟದಲ್ಲಿ ಮಂತ್ರಿ ಸ್ಥಾನ ಸಿಗದಿರುವುದಕ್ಕೆ ತೀವ್ರ ಬೇಸರ ವ್ಯಕ್ತಪಡಿಸಿ, ಎನ್‌ಎಸ್‌ಯುಐ (NSUI) ಸಾಗರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಶ್ರೀ ಸಿ.ಎಂ. ಚಿನ್ಮಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಪ್ರಕಟಿಸಿದ್ದಾರೆ.
ದೀರ್ಘ ಕಾಲದಿಂದ ಶಾಸಕ ಗೋಪಾಲಕೃಷ್ಣ ಬೆಳೂರು ಅವರೊಂದಿಗೆ ರಾಜಕೀಯವಾಗಿ ಗುರುತಿಸಿಕೊಂಡಿರುವ ಚಿನ್ಮಯ ಅವರು, ತಮ್ಮ ರಾಜಕೀಯ ಗುರುಗಳ ಮಾರ್ಗದರ್ಶನದಲ್ಲಿ ಸಾಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇದರೊಂದಿಗೆ, ಅವರು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಪ್ರಧಾನ ಕಾರ್ಯದರ್ಶಿಯಾಗಿಯೂ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದರು.
ತಮ್ಮ ನಾಯಕರಿಗೆ ಮಂತ್ರಿ ಸ್ಥಾನ ಸಿಗದೆ ಇರುವುದರಿಂದ ತೀವ್ರ ಮನನೊಂದು ಈ ನಿರ್ಧಾರಕ್ಕೆ ಬಂದಿರುವುದಾಗಿ ಚಿನ್ಮಯ ತಿಳಿಸಿದ್ದಾರೆ. ಈ ಬೆಳವಣಿಗೆಯ ಬೆನ್ನಲ್ಲೇ, ಪಕ್ಷದ ಹಲವು ಪ್ರಮುಖ ಕಾರ್ಯಕರ್ತರು ಮತ್ತು ಪದಾಧಿಕಾರಿಗಳು ಸಹ ಚಿನ್ಮಯ ಅವರ ನಿರ್ಧಾರವನ್ನು ಬೆಂಬಲಿಸಿದ್ದು, ತಾವೂ ಕೂಡ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಚಿನ್ಮಯ ಅವರ ಈ ದಿಢೀರ್ ರಾಜೀನಾಮೆ ಪ್ರಕಟಣೆಯು ಸಾಗರ ಕ್ಷೇತ್ರದ ಕಾಂಗ್ರೆಸ್ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ.
ಸುದ್ದಿ ಮತ್ತು ಜಾಹೀರಾತು ನೀಡಲು-7206461701
ಮೀನಿನಹೆಜ್ಜೆ ನ್ಯೂಸ್, ಸಾಗರ



Comments
Post a Comment