ತಹಶೀಲ್ದಾರ್ ಅಕ್ರಮ ಬಯಲಿಗೆ ತರುತ್ತಿರುವುದು ಬಹುಶ್ಯಃ ಶಾಸಕರಿಗೆ ಇಷ್ಟವಿದ್ದಂತೆ ಕಾಣುತ್ತಿಲ್ಲ-ಡಾ. ರಾಜನಂದಿನಿ

ತಹಶೀಲ್ದಾರ್ ಅಕ್ರಮ ಬಯಲಿಗೆ ತರುತ್ತಿರುವುದು ಬಹುಶ್ಯಃ ಶಾಸಕರಿಗೆ ಇಷ್ಟವಿದ್ದಂತೆ ಕಾಣುತ್ತಿಲ್ಲ-ಡಾ. ರಾಜನಂದಿನಿ

ಸಾಗರ : ಶಾಸಕ ಗೋಪಾಲಕೃಷ್ಣ ಬೇಳೂರು ತ್ರೆöÊಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ತಹಶೀಲ್ದಾರ್ ಡಾ. ಪ್ರತಿಭಾ ಆರ್. ಅವರಿಗೆ ಅವಮಾನಿಸಿರುವುದನ್ನು ಖಂಡಿಸಿ, ಸೂಕ್ತ ಕ್ರಮಕ್ಕೆ ಒತ್ತಾಯಿಸಿ ಶನಿವಾರ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಉಪವಿಭಾಗಾಧಿಕಾರಿಗಳ ಕಚೇರಿ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಗಾಯತ್ರಿ ಮಲ್ಲೇಶ್ ಕೆಡಿಪಿ ತ್ರಿಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ತಹಶೀಲ್ದಾರ್ ಅವರನ್ನು ಅವಮಾನಿಸಿರುವುದು ಮಹಿಳೆಯರಿಗೆ ಮಾಡಿದ ಅವಮಾನವಾಗಿದೆ. ತಹಶೀಲ್ದಾರ್ ಡಾ. ಪ್ರತಿಭಾ ಅವರು ಸಾಗರಕ್ಕೆ ಬಂದಾಗಿನಿAದ ಅತ್ಯಂತ ಪ್ರಾಮಾಣಿಕವಾಗಿ, ನಿರ್ಭೀತಿಯಿಂದ ಕೆಲಸ ಮಾಡುತ್ತಿದ್ದಾರೆ. ಕಲ್ಲುಕ್ವಾರೆ ಸೇರಿದಂತೆ ಅನೇಕ ಅಕ್ರಮಗಳನ್ನು ಬಯಲಿಗೆ ತರಲು ಶ್ರಮಿಸುತ್ತಿದ್ದಾರೆ. ಅಕ್ರಮ ಬಯಲಿಗೆ ತರುತ್ತಿರುವುದು ಬಹುಶ್ಯಃ ಶಾಸಕರಿಗೆ ಇಷ್ಟವಿದ್ದಂತೆ ಕಾಣುತ್ತಿಲ್ಲ. ಆದ್ದರಿಂದ ಸಾರ್ವಜನಿಕವಾಗಿ ಅವರನ್ನು ಅವಮಾನಿಸಿದ್ದಾರೆ. ಮಹಿಳಾ ಅಧಿಕಾರಿಯನ್ನು ಅವಮಾನಿಸಿದ ಘಟನೆಯನ್ನು ಬಿಜೆಪಿ ಮಹಿಳಾ ಮೋರ್ಚಾ ಉಗ್ರವಾಗಿ ಖಂಡಿಸುತ್ತದೆ. ಕಾಂಗ್ರೇಸ್ ಪಕ್ಷ ಮಹಿಳಾ ದ್ವೇಷಿ ಎನ್ನುವುದುಪ ದೇಪದೇ ಸಾಬೀತಾಗುತ್ತಿದೆ. ಕೇಂದ್ರ ಸರ್ಕಾರ ಮಹಿಳಾ ಮೀಸಲಾತಿ ಜಾರಿಗೆ ತರಲು ಮುಂದಾದರೆ ಕಾಂಗ್ರೇಸ್ ಅದಕ್ಕೆ ಅಡ್ಡಗಾಲು ಹಾಕಿದೆ. ಸ್ಥಳೀಯವಾಗಿ ಸಹ ಮಹಿಳಾ ಅಧಿಕಾರಿಗಳು ನಿರ್ಭೀತಿಯಿಂದ ಕೆಲಸ ಮಾಡಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ ಎಂದು ತಿಳಿಸಿದರು.

ಬಿಜೆಪಿ ಮಹಿಳಾ ಪ್ರಮುಖರಾದ ಡಾ ರಾಜನಂದಿನಿ ಕಾಗೋಡು ಮಾತನಾಡಿ, ತಹಶೀಲ್ದಾರ್ ಡಾ. ಪ್ರತಿಭಾ ಅತಿಹೆಚ್ಚು ಓದಿದ್ದು ಸಾಹಿತ್ಯ, ಸಾಮಾಜಿಕ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಅವರು ಕರ್ತವ್ಯ ನಿರ್ವಹಿಸಿದ ಕಡೆ ಉತ್ತಮ ಅಧಿಕಾರಿ ಎಂದು ಹೆಸರು ಪಡೆದಿದ್ದಾರೆ. ತಾಲ್ಲೂಕಿನಲ್ಲಿ ಅಕ್ರಮ ತಡೆಯಲು ತಮ್ಮದೇ ರೀತಿಯಲ್ಲಿ ಅವರು ಕಾರ್ಯಾಚರಣೆ ಮಾಡುತ್ತಿದ್ದಾರೆ. ದಾಳಿ ವೇಳೆ ಸರ್ಕಾರಿ ದಾಖಲೆಗೆ ವಿಡಿಯೋ ಚಿತ್ರೀಕರಣ ಮಾಡುವುದು ಸಹಜ. ಜೊತೆಗೆ ಮಾಧ್ಯಮದವರು ಇಂತಹ ಸಂದರ್ಭದಲ್ಲಿ ಘಟನೆಯನ್ನು ಪ್ರಚುರ ಪಡಿಸುತ್ತಾರೆ. ಶಾಸಕರು ಉತ್ತಮ ಕೆಲಸ ಮಾಡುತ್ತಿರುವ ಅಧಿಕಾರಿಗೆ ಪ್ರೋತ್ಸಾಹ ನೀಡುವ ಬದಲು ಅವರ ಕರ್ತವ್ಯಕ್ಕೆ ಅಡ್ಡಿಪಡಿಸುವ ರೀತಿಯಲ್ಲಿಅವಮಾನಿಸಿದ್ದು ಖಂಡನೀಯ. ತಕ್ಷಣ ಶಾಸಕರು ಕ್ಷಮೆಯಾಚನೆ ಮಾಡಬೇಕು. ಯಾವುದೇ ಕಾರಣಕ್ಕೂ ಪ್ರತಿಭಾ ಅವರನ್ನು ವರ್ಗಾವಣೆ ಮಾಡಬಾರದು. ಅವರು ನಿರ್ಭೀತಿಯಿಂದ ಕೆಲಸ ಮಾಡಲು ಸರ್ಕಾರ ಅವಕಾಶ ಮಾಡಿಕೊಡಬೇಕು ಎಂದುಒ ತ್ತಾಯಿಸಿದರು. ಬಿಜೆಪಿ ನಗರ ಮಂಡಳ ಅಧ್ಯಕ್ಷ ಕೆ.ಆರ್.ಗಣೇಶ್ ಪ್ರಸಾದ್ ಮಾತನಾಡಿದರು.

ಪ್ರತಿಭಟನೆಯಲ್ಲಿ ಗಾಯತ್ರಿ ಮಲ್ಲೇಶಪ್ಪ, ಸುಮಾ ರವಿ, ಮೈತ್ರಿ ಪಾಟೀಲ್, ಪ್ರೇಮಕಿ ರಣ್ ಸಿಂಗ್, ಭಾವನಾ ಸಂತೋಷ್, ದೇವೇಂದ್ರಪ್ಪ, ಶ್ವೇತಾ ಸಂತೋಷ್, ವಿನೋದ್ ರಾಜ್ ., ಸಂತೋಷ್, ಕವಿತಾ, ಕೃಷ್ಣ ಶೇಟ್, ವಿ.ಮಹೇಶ್, ಲಿಂಗರಾಜ್, ಬಿ.ಟಿ.ರವೀಂದ್ರ, ಪರಶುರಾಮ್ ಇನ್ನಿತರರು ಹಾಜರಿದ್ದರು. 

ಸುದ್ದಿ ಮತ್ತು ಜಾಹೀರಾತು ನೀಡಲುಸಂಪರ್ಕಿಸಿ-7204641701

ಮೀನಿನಹೆಜ್ಜೆ ನ್ಯೂಸ್,  ಸಾಗರ

Comments

Popular posts from this blog

ಸಾಗರದಲ್ಲಿ SIR ಪ್ರಕ್ರಿಯೆಯಲ್ಲಿ ಅಕ್ರಮ. ಬಿ ವೈ ವಿಜಯೇಂದ್ರ ಆರೋಪ...

ರಜಪೂತ ಸಮಾಜ ಅಭಿವೃದ್ಧಿ ಮಂಡಳಿ ರಚಿಸುವ ಬಗ್ಗೆ ಸಾಗರ ಉಪವಿಭಾಗಾಧಿಕಾರಿಗಳ ಮೂಲಕ ಸರಕಾರಕ್ಕೆ ಸಾಗರ ತಾಲ್ಲೂಕು ರಜಪೂತ ಸಮಾಜದಿಂದ ಮನವಿ

ವಿವೇಕ ಸೂರ್ಯ ಎಂಬ ಅವಿವೇಕಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ-ಚಾರೋಡಿ ಕೊಂಕಣಿ ಆಚಾರ್ ಸಮಾಜ