ಸೋಮಪ್ಪ ಎಚ್. ಅವರಿಗೆ ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

ಸೋಮಪ್ಪ ಎಚ್. ಅವರಿಗೆ ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ


ಸಾಗರ : ಶಿವಮೊಗ್ಗದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ತಾಲ್ಲೂಕಿನ ಗೌತಮಪುರದ ಬನಶಂಕರಿ ಬಡಾವಣೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಸೋಮಪ್ಪ ಎಚ್. ಅವರಿಗೆ ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಯಿತು

ಸೋಮಪ್ಪ ಎಚ್. ಅವರು ಈ ಹಿಂದೆ ಸರ್ಕಾರಿ ನೌಕರರ ಸಂಘದ ನಿರ್ದೇಶಕರಾಗಿ, ಶಿಕ್ಷಕರ ಸಂಘದ ಪದಾಧಿಕಾರಿಯಾಗಿ, ಹಾಲಿ ಶಿಕ್ಷಕರ ಸಂಘದ ನಿರ್ದೇಶಕರಾಗಿ ಕೆಲಸ ಮಾಡುವ ಜೊತೆಗೆ ತಮ್ಮ ಶಾಲೆಯಲ್ಲಿ ಉತ್ತಮ ಬೋಧನಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವುದು, ಉತ್ತಮ ಫಲಿತಾಂಶ ಇನ್ನಿತರೆ ಆಧರಿಸಿ ಅವರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಸೋಮಪ್ಪ ಎಚ್. ಅವರಿಗೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಾಲತೇಶಪ್ಪ ಮತ್ತು ಪದಾಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ. 

ಸುದ್ದಿ ಮತ್ತು ಜಾಹಿರಾತು ನೀಡಲು-7204641701

ಮೀನಿನಹೆಜ್ಜೆ ನ್ಯೂಸ್, ಸಾಗರ

Comments

Popular posts from this blog

ಸಾಗರದಲ್ಲಿ SIR ಪ್ರಕ್ರಿಯೆಯಲ್ಲಿ ಅಕ್ರಮ. ಬಿ ವೈ ವಿಜಯೇಂದ್ರ ಆರೋಪ...

ರಜಪೂತ ಸಮಾಜ ಅಭಿವೃದ್ಧಿ ಮಂಡಳಿ ರಚಿಸುವ ಬಗ್ಗೆ ಸಾಗರ ಉಪವಿಭಾಗಾಧಿಕಾರಿಗಳ ಮೂಲಕ ಸರಕಾರಕ್ಕೆ ಸಾಗರ ತಾಲ್ಲೂಕು ರಜಪೂತ ಸಮಾಜದಿಂದ ಮನವಿ

ವಿವೇಕ ಸೂರ್ಯ ಎಂಬ ಅವಿವೇಕಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ-ಚಾರೋಡಿ ಕೊಂಕಣಿ ಆಚಾರ್ ಸಮಾಜ