ಕಸ್ತೂರಿ ರಂಗನ್ ವರದಿ ಮಲೆನಾಡು ರೈತರಿಗೆ ಮರಣ ಶಾಸನ-ಶಾಸಕ ಗೋಪಾಲಕೃಷ್ಣ ಬೇಳೂರು
ಕಸ್ತೂರಿ ರಂಗನ್ ವರದಿ ಮಲೆನಾಡು ರೈತರಿಗೆ ಮರಣ ಶಾಸನ-ಶಾಸಕ ಗೋಪಾಲಕೃಷ್ಣ ಬೇಳೂರು
ಮಲೆನಾಡು ಭಾಗದ ಜನರ ನೆತ್ತಿಯ ಮೇಲೆ ಕಸ್ತೂರಿ ರಂಗನ್ ತೂಗುಕತ್ತಿ-ಮಾಜಿ ಸಚಿವ ಹರತಾಳು ಹಾಲಪ್ಪ
ಪ್ರತಿಭಟನೆಯಲ್ಲಿ ಭಾಗವಹಿಸಿ ವಿರೋಧ ವ್ಯಕ್ತ ಪಡಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದ ಹೋರಾಟದ ಸಂಚಾಲಕ ಬಿ. ಎ. ಇಂಧೂಧರಗೌಡ ಬೆಸೂರು
ಸಾಗರ : ಕೇಂದ್ರ ಸರ್ಕಾರ ಹೊರಡಿಸಿರುವ ಕಸ್ತೂರಿ ರಂಗನ್ ವರದಿಯ ಏಳನೇ ಕರಡು ಅಧಿಸೂಚನೆ ವಿರೋಧಿಸಿ ಗುರುವಾರ ಪಶ್ಚಿಮಘಟ್ಟ ರೈತ ಸಹಕಾರಿ ವೇದಿಕೆ ವತಿಯಿಂದ ಆವಿನಹಳ್ಳಿಯಿಂದ ಸಾಗರದವರೆಗೆ 10 ಕಿ.ಮೀ. ಬೃಹತ್ ಪಾದಯಾತ್ರೆ ನಡೆಯಿತು.
ಆವಿನಹಳ್ಳಿ ವೃತ್ತದಲ್ಲಿ ಪ್ರತಿಭಟನಾ ಜಾಥಕ್ಕೆ ಸಿಗಂದೂರು ಕ್ಷೇತ್ರದ ಧರ್ಮದರ್ಶಿ ರಾಮಪ್ಪ ಸಿಗಂದೂರು ಸಹಕಾರಿ ಧ್ವಜ ತೋರಿಸುವ ಮೂಲಕ ಚಾಲನೆ ನೀಡಿದರು. ನಂತರ ವಿವಿಧ ಗ್ರಾಮಗಳಲ್ಲಿ ಸಂಚರಿಸಿದ ಮೆರವಣಿಗೆ ಸಾಗರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಾಗಿತು.
*ಪ್ರತಿಭಟನಾ ಸಭೆ*: ನಗರಸಭೆ ರಂಗಮAದಿರದಲ್ಲಿ ನಡೆದ ಪ್ರತಿಭಟನಾ ಸಭೆ ಉದ್ದೇಶಿಸಿ ಮಾತನಾಡಿದ ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಮಲೆನಾಡು ರೈತರಿಗೆ ಮರಣ ಶಾಸನವಾಗಲಿರುವ ಕಸ್ತೂರಿ ರಂಗನ್ ವರದಿ ಯಾವುದೇ ಕಾರಣಕ್ಕೂ ಜಾರಿಯಾಗಲು ಬಿಡಬಾರದು. ಮಲೆನಾಡು ಭಾಗದ ರೈತರು ಅರಣ್ಯ ಇಲಾಖೆಯ ಕಠಿಣ ಕಾನೂನು, ಕೊಳೆರೋಗ, ಎಲೆಚುಕ್ಕಿ ರೋಗ, ಕಾಡು ಪ್ರಾಣಿಗಳ ಹಾವಳಿ ಇನ್ನಿತರೆಗಳಿಂದ ಸತ್ತು ಬದುಕುತ್ತಿದ್ದಾರೆ. ಇದೀಗ ಕಸ್ತೂರಿ ರಂಗನ್ ವರದಿ ಜಾರಿಗೆ ಬಂದರೆ ಇನ್ನಷ್ಟು ಸಂಕಷ್ಟಕ್ಕೆ ಸಿಲುಕುತ್ತಾರೆ. ಸೆಟ್‌ಲೈಟ್ ಮೂಲಕ ಸರ್ವೇ ಮಾಡಿ ಪರಿಸರ ಸೂಕ್ಷö್ಮ ಪ್ರದೇಶ ಎಂದು ಗುರುತಿಸಿರುವುದೇ ಅವೈಜ್ಞಾನಿಕವಾಗಿದೆ. ಗ್ರಾಮಗಳಿಗೆ ಖುದ್ದು ಭೇಟಿ ನೀಡಿದ್ದರೆ ಮಲೆನಾಡು ಜನರ ಪರಿಸ್ಥಿತಿ ವಿಜ್ಞಾನಿಗಳಿಗೆ ತಿಳಿಯುತಿತ್ತು ಎಂದರು.
ಈಗಾಗಲೆ ರಾಜ್ಯ ಸರ್ಕಾರ ಕಸ್ತೂರಿ ರಂಗನ್ ವರದಿ ತಿರಸ್ಕರಿಸುವ ಅಗತ್ಯ ಸಿದ್ದತೆ ಮಾಡಿಕೊಂಡಿದೆ. ಸದ್ಯದಲ್ಲಿ ವಿಶೇಷ ಅಧಿವೇಶನ ಕರೆದು ಕಸ್ತೂರಿ ರಂಗನ್ ವರದಿ ವಿರುದ್ದ ನಿರ್ಣಯ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ವರದಿ ವಜಾಗೊಳಿಸುವ ತನಕ ನಮ್ಮ ಹೋರಾಟ ನಿಲ್ಲುವುದಿಲ್ಲ. ಕಸ್ತೂರಿ ರಂಗನ್ ವರದಿ ಕಾಂಗ್ರೇಸ್ ಪಾಪದ ಕೂಸು ಎಂದು ಹೊಸನಗರದಲ್ಲಿ ರಾಜಕೀಯ ಮುಖಂಡರೊಬ್ಬರು ಹೇಳಿದ್ದಾರೆ. ಇಂತಹ ಹೇಳಿಕೆಗಳು ಹೋರಾಟಕ್ಕೆ ಅಡ್ಡಿಯುಂಟು ಮಾಡುತ್ತದೆ. ಈಗಾಗಲೆ ಬೇಸೂರು ಅಣು ವಿದ್ಯುತ್ ಸ್ಥಾವರ ವಿರುದ್ದದ ನಮ್ಮ ಹೋರಾಟ ಯಶಸ್ವಿಯಾಗಿದೆ.
ಶೀಘ್ರದಲ್ಲಿಯೆ ರದ್ದುಗೊಳಿಸಿದ ವರದಿಯನ್ನು ಬಿಡುಗಡೆ ಮಾಡುತ್ತೇವೆ. ಮಲೆನಾಡು ಜನರ ಬದುಕಿಗೆ ಮರಣ ಶಾಸನವಾಗುವ ಯಾವುದೇ ಪ್ರಸ್ತಾಪ ಕೇಂದ್ರ ಕೈಗೊಳ್ಳಬಾರದು ಎಂದರು.
ಮಾಜಿ ಸಚಿವ ಹರತಾಳು ಹಾಲಪ್ಪ ಮಾತನಾಡಿ, ಕಳೆದ 16 ವರ್ಷಗಳಿಂದ ಮಲೆನಾಡು ಭಾಗದ ಜನರ ನೆತ್ತಿಯ ಮೇಲೆ ಕಸ್ತೂರಿ ರಂಗನ್ ತೂಗುಕತ್ತಿ ಇದೆ. ಮಲೆನಾಡಿನಲ್ಲಿ ಅರಣ್ಯ ಉಳಿಸಿದ್ದು ಸರ್ಕಾರ ಅಥವಾ ಅರಣ್ಯ ಇಲಾಖೆಯಲ್ಲ. ಜನರು ಸ್ವಯಂಪ್ರೇರಣೆಯಿAದ ಅರಣ್ಯ ಉಳಿಸಿದ್ದಾರೆ. ಬೇರೆಬೇರೆ ಯೋಜನೆಗಳಿಂದ ಮಲೆನಾಢು ಭಾಗದ ರೈತರ ಸಂಕಷ್ಟದಲ್ಲಿದ್ದಾರೆ. ಇಂತಹ ಹೊತ್ತಿನಲ್ಲಿ ಕಸ್ತೂರಿ ರಂಗನ್ 7ನೇ ಅಧಿಸೂಚನೆ ಇನ್ನಷ್ಟು ಆತಂಕ ಸೃಷ್ಟಿಸುತ್ತಿದೆ. ಮುಖ್ಯಮಂತ್ರಿಗಳು ಇದಕ್ಕಾಗಿ ವಿಶೇಷ ಅಧಿವೇಶನ ಕರೆಯುತ್ತಿರುವುದನ್ನು ನಾವು ಸ್ವಾಗತಿಸುತ್ತೇವೆ ಎಂದು ಹೇಳಿದರು.
ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮAಜುನಾಥ ಗೌಡ ಮಾತನಾಡಿ, ಕಸ್ತೂರಿ ರಂಗನ್ ವರದಿ ವಿರೋಧಿಸಿ ಜನರ ಚಳುವಳಿ ಪ್ರಾರಂಭವಾಗಿದೆ. ನಮ್ಮ ಕಾಡನ್ನು ಸರ್ಕಾರ ಅಕೇಶಿಯಾ, ನೀಲಗಿರಿ ಇನ್ನಿತರೆ ಏಕಜಾತಿ ಸಸ್ಯಗಳನ್ನು ಬೆಳೆಸಿ ಹಾಳು ಮಾಡಿದೆಯೆ ವಿನಃ ನಾವು ಅದನ್ನು ರಕ್ಷಣೆ ಮಾಡಿಕೊಂಡು ಬಂದವರು. ನಮ್ಮ ಸಂಸ್ಕೃತಿಗೆ ಧಕ್ಕೆ ತರುವ ಇಂತಹ ವರದಿಗಳು ಯಾವುದೇ ಕಾರಣಕ್ಕೂ ಅನುಷ್ಟಾನಕ್ಕೆ ಬರಲು ಬಿಡಬಾರದು. ಈ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಬೃಹತ್ ಹೋರಾಟ ರೂಪಿಸಿ, ಅಲ್ಲಿಗೆ ಮುಖ್ಯಮಂತ್ರಿಗಳನ್ನು ಕರೆಸಿ ಮನವಿ ಸಲ್ಲಿಸಲಾಗುತ್ತದೆ ಎಂದು ಹೇಳಿದರು.
ಶಿಮುಲ್ ಅಧ್ಯಕ್ಷ ವಿದ್ಯಾಧರ ಎಚ್.ಎಸ್., ವೇದಿಕೆ ಸಂಚಾಲಕ ಬಿ.ಆರ್.ಜಯಂತ್ ಮಾತನಾಡಿದರು. ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಬಿ.ಎ.ಇಂದೂಧರ ಬೇಸೂರು, ಚೇತನರಾಜ್ಕ ಣ್ಣೂರು, ಕಲಸೆ ಚಂದ್ರಪ್ಪ, ದೇವೇಂದ್ರಪ್ಪ, ಸೋಮಶೇಖರ ಲ್ಯಾವಿಗೆರೆ, ಸಿಗಂದೂರು ರವಿಕುಮಾರ್, ದಿನೇಶ್ ಬರದವಳ್ಳಿ, ವ.ಶಂ.ರಾಮಚAದ್ರ ಭಟ್, ಅಮೃತೇಶ್, ರವಿ ಲಿಂಗನಮಕ್ಕಿ, ಪ್ರಸನ್ನ ಕೆರೆಕೈ, ಮಲ್ಲಿಕಾರ್ಜುನ ಹಕ್ರೆ, ಕಿರಣ್ದೊ ಡ್ಮನೆ, ಗಿರೀಶ್ ಕೋವಿ, ಅನ್ವರ್ ಭಾಷಾ, ಆನಂದ ಭೀಮನೇರಿ, ಮಹಾಬಲ ಕೌತಿ, ಇನ್ನಿತರರು ಹಾಜರಿದ್ದರು.
ಸುದ್ದಿ ಮತ್ತು ಜಾಹೀರಾತು ನೀಡಲು-7204641701
Meeninahejje News, ಸಾಗರ






Comments
Post a Comment