ವೈದ್ಯಸಿಬ್ಬಂದಿಗಳ ಉತ್ತಮ ಕಾರ್ಯನಿರ್ವಹಣೆಗೆ ರೋಗಿಗಳು ಸಾಗರದ ಸರಕಾರಿ ಆಸ್ಪತ್ರೆಗೆ ಬರುತ್ತಾರೆ-ಶಾಸಕ ಗೋಪಾಲಕೃಷ್ಣ ಬೇಳೂರು
ವೈದ್ಯಸಿಬ್ಬಂದಿಗಳ ಉತ್ತಮ ಕಾರ್ಯನಿರ್ವಹಣೆಗೆ ರೋಗಿಗಳು ಸಾಗರದ ಸರಕಾರಿ ಆಸ್ಪತ್ರೆಗೆ ಬರುತ್ತಾರೆ-ಶಾಸಕ ಗೋಪಾಲಕೃಷ್ಣ ಬೇಳೂರು
ಸಾಗರ : ಉಪವಿಭಾಗೀಯ ಆಸ್ಪತ್ರೆಯಲ್ಲಿ ರೋಗಿಗಳಿಗೆ ಯಾವುದೇ ರೀತಿಯ ತೊಂದರೆ ಆಗಬಾರದು. ಹೊರ ಜಿಲ್ಲೆ, ತಾಲ್ಲೂಕುಗಳಿಂದಲೂ ರೋಗಿಗಳು ಬರುತ್ತಿರುವುದರಿಂದ ಒತ್ತಡ ಹೆಚ್ಚಿದ್ದು, ನಮ್ಮ ವೈದ್ಯಸಿಬ್ಬಂದಿಗಳ ಉತ್ತಮ ಕಾರ್ಯನಿರ್ವಹಣೆಗೆ ಹುಡುಕಿಕೊಂಡು ಬರುತ್ತಿದ್ದಾರೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.
ಇಲ್ಲಿನ ಉಪವಿಭಾಗೀಯ ಆಸ್ಪತ್ರೆಯಲ್ಲಿ ಬುಧವಾರ ಆರೋಗ್ಯ ರಕ್ಷಾ ಸಮಿತಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆಸ್ಪತ್ರೆಯನ್ನು ೨೫೦ ಹಾಸಿಗೆ ಮೇಲ್ದರ್ಜೆಗೆ ಏರಿಸಲು ಪ್ರಸ್ತಾವನೆ ಸಲ್ಲಿಸಿದ್ದು, ಹಣಕಾಸು ಇಲಾಖೆಯ ಅನುಮೋದನೆಗೆ ಹೋಗಿದೆ ಎಂದು ಹೇಳಿದರು.
ಆಕ್ಸಿಜನ್ ಸಹಿತ ಇರುವ ಅಂಬ್ಯುಲೆನ್ಸ್ ಅಪಘಾತಕ್ಕೀಡಾಗಿ ಮೂರು ತಿಂಗಳಿನಿಂದ ಮೂಲೆಯಲ್ಲಿ ನಿಂತಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿ ಪ್ರಸಾರವಾಗಿದೆ. ಸಂಬಂಧಪಟ್ಟ ಇಲಾಖೆಗೆ ಪತ್ರ ಬರೆದಿದ್ದರೂ ರಿಪೇರಿ ಕಾರ್ಯ ಮಾಡಿಲ್ಲ. ಈ ಹಿನ್ನೆಲೆಯಲ್ಲಿ ತುರ್ತು ಸಂದರ್ಭದಲ್ಲಿ ಆಕ್ಸಿಜನ್ ಹೊಂದಿರುವ ಅಂಬ್ಯುಲೆನ್ಸ್ ಖಾಸಗಿಯವರಿಂದ ಬಾಡಿಗೆಗೆ ಪಡೆದು ಆರೋಗ್ಯರಕ್ಷಾ ಸಮಿತಿಯಿಂದ ಹಣ ಭರಿಸಲು ಸೂಚನೆ ನೀಡಿದ ಅವರು, ಸದ್ಯ 100 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ನಮ್ಮದಾಗಿದ್ದು, ಪ್ರಸ್ತುತ 117 ಹಾಸಿಗೆ ಹಾಕಿ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದರು.
ಆಸ್ಪತ್ರೆಯಲ್ಲಿ ದಿನದ 24 ಗಂಟೆ ನೀರು ಮತ್ತು ವಿದ್ಯುತ್ ಇರಬೇಕು. ವಿದ್ಯುತ್ ಸಮಸ್ಯೆ ಇದ್ದರೆ ಪರ್ಯಾಯವಾಗಿ ಜನರೇಟರ್ ಅಳವಡಿಸಬೇಕು. ಜನರೇಟರ್ ಹಾಳಾಗದಂತೆ ಗಮನ ಹರಿಸಿ. ಪ್ರತಿದಿನ ಒಂದು ಸಾವಿರಕ್ಕೂ ಹೆಚ್ಚು ಹೊರರೋಗಿಗಳು ತಪಾಸಣೆಗೆ ಒಳಪಡುತ್ತಿದ್ದಾರೆ. ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಹೊಸ ಬೋರ್‌ವೆಲ್ ಗೆಯಲು ತಿಳಿಸಲಾಗಿದೆ.
ವೈದ್ಯರ ಬಗ್ಗೆ ಎಲ್ಲಿಯೂ ದೂರುಗಳಿಲ್ಲ. ಆಸ್ಪತ್ರೆ ಅಭಿವೃದ್ದಿಗೆ ಸಂಬAಧಿಸಿದAತೆ ಆರೋಗ್ಯ ಸಚಿವರಾದ ಖಾದರ್ ಬಳಿ ಚರ್ಚೆ ನಡೆಸಲಾಗುತ್ತದೆ. ಅನುದಾನ ಹೆಚ್ಚು ನೀಡಲು ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುತ್ತದೆ ಎಂದು ಹೇಳಿದರು.
ಡೇಕೇರ್ ತೆರೆಯಿರಿ : ಆರೋಗ್ಯ ರಕ್ಷಾ ಸಮಿತಿ ಸದಸ್ಯ ಜಯರಾಂ ಮಾತನಾಡಿ, ಆಸ್ಪತ್ರೆ ಹೆಚ್ಚಿನ ರೋಗಿಗಳು ಬರುತ್ತಿರುವುದರಿಂದ ವೈದ್ಯರ ಮೇಲೆ ಒತ್ತಡ ಹೆಚ್ಚುತ್ತಿದೆ. ಬೆಡ್ ಕೊರತೆಯಿಂದ ಸಣ್ಣಪುಟ್ಟ ಕಾಯಿಲೆ ಇದ್ದವರನ್ನು ಶಿವಮೊಗ್ಗಕ್ಕೆ ಕಳಿಸುವ ಸ್ಥಿತಿ ಇದ್ದು, ಉಪವಿಭಾಗೀಯ ಆಸ್ಪತ್ರೆಯಲ್ಲಿ ಡೇಕೇರ್ ಮಾಡುವುದರಿಂದ ಹೆಚ್ಚಿನ ಅನುಕೂಲವಾಗುತ್ತದೆ ಎಂದು ಸಲಹೆ ನೀಡಿದರು.
ಉಪವಿಭಾಗಾಧಿಕಾರಿ ವೀರೇಶಕುಮಾರ್, ತಹಶೀಲ್ದಾರ್ ಡಾ. ಪ್ರತಿಭಾ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ನಟರಾಜ್, ಪೌರಾಯುಕ್ತ ಎಚ್.ಕೆ.ನಾಗಪ್ಪ, ಡಾ. ಸುರೇಶ್, ಡಾ. ವಿಕ್ರಮ್, ಡಾ. ಶಾಂತಲಾ, ಡಾ. ಬಿ.ಜಿ.ಸಂಗಮ್, ಪ್ರಮುಖರಾದ ಮಧುಮಾಲತಿ, ದಿನಕರ, ರಮೇಶ್ ಚಂದ್ರಗುತ್ತಿ ಇನ್ನಿತರರು ಹಾಜರಿದ್ದರು.
ಸುದ್ದಿ ಮತ್ತು ಜಾಹೀರಾತು ನೀಡಲು-7204641701
ಮೀನಿನ ಹೆಜ್ಜೆ ನ್ಯೂಸ್, ಸಾಗರ


Comments
Post a Comment