ಸಾಗರದ ಮಾಲ್ವೆ ಬಳಿ ಭೀಕರ ರಸ್ತೆ ಅಪಘಾತ: ಶಿಕ್ಷಕರ ಸಂಘದ ಅಧ್ಯಕ್ಷ ಮಾಲತೇಶಪ್ಪ ಪ್ರಾಣಾಪಾಯದಿಂದ ಪಾರು

ಅಪಘಾತ: ಶಿಕ್ಷಕರ ಸಂಘದ ಅಧ್ಯಕ್ಷ ಮಾಲತೇಶಪ್ಪ ಪ್ರಾಣಾಪಾಯದಿಂದ ಪಾರು


ಸಾಗರ : ಜಿಲ್ಲೆಯ ಸಾಗರ ತಾಲ್ಲೂಕಿನ ಮಾಲ್ವೆ ಗ್ರಾಮದ ಬಳಿ ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ, ಶಿಕ್ಷಕರ ಸಂಘದ ಅಧ್ಯಕ್ಷ ಮಾಲತೇಶಪ್ಪ  ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸಾಗರ ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಾಲತೇಶಪ್ಪ ಶಾಲೆಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಮಾಲ್ವೆ ಬಳಿ ಇವರ ಕಾರು ಹಾಗೂ ಎದುರಿನಿಂದ ಬಂದ ಕಾರಿನ ನಡುವೆ ಪ್ರಬಲ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಎರಡೂ ಕಾರುಗಳ ಮುಂಭಾಗ ನಜ್ಜುಗುಜ್ಜಾಗಿದೆ.

ಅಪಘಾತದ ತೀವ್ರತೆಗೆ  ಭಾರಿ ಅನಾಹುತ ತಪ್ಪಿದೆ. ಮಾಲತೇಶಪ್ಪ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮತ್ತೊಂದು ಕಾರಿನಲ್ಲಿದ್ದ ಸವಾರರಿಗೂ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಸ್ಥಳಕ್ಕೆ ಪೊಲೀಸರು ಭೇಟಿ,

ಅಪಘಾತವನ್ನು ಕಂಡಂತ ಸ್ಥಳೀಯರು 112ಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಈ ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದರು ಎಂಬುದಾಗಿ ಹೇಳಲಾಗುತ್ತಿದೆ.

ಸಾಗರದ ಮಾಲ್ವೆ ಬಳಿ ಭೀಕರ ರಸ್ತೆ ಅಪಘಾತ: ಶಿಕ್ಷಕರ ಸಂಘದ ಅಧ್ಯಕ್ಷ ಮಾಲತೇಶಪ್ಪ ಪ್ರಾಣಾಪಾಯದಿಂದ ಪಾರು

ಸುದ್ದಿ  ಮತ್ತು ಜಾಹೀರಾತು ನೀಡಲು-7204641701 

ಮೀನಿನ ಹೆಜ್ಜೆ ನ್ಯೂಸ್, ಸಾಗರ

Comments

Popular posts from this blog

ಸಾಗರದಲ್ಲಿ SIR ಪ್ರಕ್ರಿಯೆಯಲ್ಲಿ ಅಕ್ರಮ. ಬಿ ವೈ ವಿಜಯೇಂದ್ರ ಆರೋಪ...

ರಜಪೂತ ಸಮಾಜ ಅಭಿವೃದ್ಧಿ ಮಂಡಳಿ ರಚಿಸುವ ಬಗ್ಗೆ ಸಾಗರ ಉಪವಿಭಾಗಾಧಿಕಾರಿಗಳ ಮೂಲಕ ಸರಕಾರಕ್ಕೆ ಸಾಗರ ತಾಲ್ಲೂಕು ರಜಪೂತ ಸಮಾಜದಿಂದ ಮನವಿ

ವಿವೇಕ ಸೂರ್ಯ ಎಂಬ ಅವಿವೇಕಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ-ಚಾರೋಡಿ ಕೊಂಕಣಿ ಆಚಾರ್ ಸಮಾಜ