ವಿದ್ಯುತ್ ವ್ಯತ್ಯಯ
ವಿದ್ಯುತ್ ವ್ಯತ್ಯಯ
ಸಾಗರ : ದಿನಾಂಕ: 07.09.2026 ರ ಸೋಮವಾರದಂದು 110/33/11 ಕೆವಿ ಸಾಗರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ 07.09.2026ರಂದು ಸಾಗರದ ಕೆಲ ಭಾಗಗಳಲ್ಲಿ ವಿದ್ಯುತ್ವ್ಯ ವ್ಯ ತ್ಯಯ ಉಂಟಾಗಲಿದೆ.
ಪಟ್ಟಣ ವ್ಯಾಪ್ತಿಯ ಎಫ್-1 ಸಾಗರ ಟೌನ್, ಎಫ್-7 ಮಂಗಳಬೀಸು ಇಂಡಸ್ಟ್ರಿಯಲ್ ಏರಿಯಾ, ಎಫ್-8 ಮಾರಿಕಾಂಬ, ಎಫ್-12 CMC Water Supply, ಎಫ್-13 ರಾಮನಗರ ಇಂಡಸ್ಟ್ರಿಯಲ್ ಏರಿಯಾ, ಎಫ್-15: ಆರ್.ಎಂ.ಸಿ. ಎಫ್-17 ಎಸ್.ಎನ್.ನಗರ, ಮತ್ತು ಗ್ರಾಮೀಣ ವ್ಯಾಪ್ತಿಯ ಎಫ್-2 ಮಾಲ್ವೆ, ಎಫ್-3 ಹೆಗ್ಗೋಡು, ಎಫ್-4 ಆವಿನಹಳ್ಳಿ, ಎಫ್-5 ವರದಹಳ್ಳಿ, ಎಫ್-6 ಬೊಮ್ಮತ್ತಿ, ಎಫ್-9 ಮಾಸೂರು, ಎಫ್-14 ಹಿರೇನೆಲ್ಲೂರು ಹಾಗೂ ಎಫ್-16 ಲಿಂಗದಹಳ್ಳಿ ಮಾರ್ಗದದಿಂದ ವಿದ್ಯುತ್ ಸಂಪರ್ಕ ಪಡೆದಿರುವ ಸಾಗರ ಪಟ್ಟಣ, ಅವಿನಹಳ್ಳಿ, ಹೆಗ್ಗೋಡು, ಭೀಮನಕೋಣೆ: ಯಡಜಿಗಳಮನೆ, ಕಲ್ಕನೆ, ಮಾಲ್ವೆ, ಭೀಮನೇರಿ, ಕೆಳದಿ, ಮಾಸೂರು. ಹಿರೇನೆಲ್ಲೂರು, ಪಡವಗೋಡು, ನಾಡಕಲಸಿ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಒಳಪಡುವ ಎಲ್ಲಾ ಗ್ರಾಮಗಳಿಗೆ ಬೆಳಗ್ಗೆ: 10:00 ಘಂಟೆಯಿಂದ ಸಂಜೆ: 06:00 ಘಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ-7204641701
ಮೀನಿನಹೆಜ್ಜೆ ನ್ಯೂಸ್ ಸಾಗರ


Comments
Post a Comment