ಶಿಕ್ಷಕರ ನೇಕಮಾತಿ ಕುರಿತು ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ
ಶಿಕ್ಷಕರ ನೇಕಮಾತಿ ಕುರಿತು ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ 6 ರಿಂದ 8ನೇ ತರಗತಿಯ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (ಜಿಪಿಎಸ್‌ಟಿಆರ್) ನೇಮಕಾತಿಗೆ ಸಂಬಂಧಿಸಿದಂತೆ ಕಲಬುರಗಿ ಹೈಕೋರ್ಟ್‌ಪೀಠವು ಮಹತ್ವದ ತೀರ್ಪು ನೀಡಿದೆ. ಕಲ್ಯಾಣ ಕರ್ನಾಟಕ (ಎಚ್‌ಕೆ) ಮತ್ತು ಉಳಿದ ಕರ್ನಾಟಕ (ನಾನ್ ಎಚ್‌ಕೆ) ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯಲ್ಲಿನ ಗೊಂದಲಗಳಿಗೆ ಕಾರಣವಾಗಿದ್ದ ಹಳೆಯ ತಾತ್ಕಾಲಿಕ ಹಾಗೂ ಅಂತಿಮ ಆಯ್ಕೆ ಪಟ್ಟಿಗಳನ್ನು ನ್ಯಾಯಾಲಯ ರದ್ದುಗೊಳಿಸಿದೆ.
ಅಲ್ಲದೆ, ನಿಯಮಾನುಸಾರ ಎಲ್ಲಅರ್ಹ ಅಭ್ಯರ್ಥಿಗಳನ್ನು ಪರಿಗಣಿಸಿ, ಮೂರು ತಿಂಗಳೊಳಗೆ ಹೊಸದಾಗಿ ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸುವಂತೆ ನ್ಯಾಯಮೂರ್ತಿ ಆರ್. ದೇವದಾಸ್ ನೇತೃತ್ವದ ಪೀಠವು ಶಾಲಾ ಶಿಕ್ಷಣ ಇಲಾಖೆಗೆ ನಿರ್ದೇಶನ ನೀಡಿದೆ.
ರಾಜ್ಯ ಸರಕಾರ 15,000 ಜಿಪಿಎಸ್‌ಟಿಆರ್ ಶಿಕ್ಷಕರ ನೇಮಕಾತಿಗೆ 2021 - 22ನೇ ಸಾಲಿನಲ್ಲಿಅಧಿಸೂಚನೆ ಹೊರಡಿಸಿತ್ತು. ಆದರೆ, ಸಂವಿಧಾನದ 371ಜೆ ವಿಧಿಯ ಅನ್ವಯ ಕಲ್ಯಾಣ ಕರ್ನಾಟಕ (ಎಚ್‌ಕೆ-ಸ್ಥಳೀಯ) ಮತ್ತು ಉಳಿದ ಕರ್ನಾಟಕ (ನಾನ್ ಎಚ್‌ಕೆ- ಸ್ಥಳೀಯೇತರ) ವೃಂದದ ಹುದ್ದೆಗಳ ಹಂಚಿಕೆ ಮತ್ತು ಮೀಸಲು ನಿಗದಿಯಲ್ಲಿ ಗೊಂದಲ ಉಂಟಾಗಿತ್ತು. 2023 ಫೆ.1 ರಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಡಿಪಿಎಆರ್) ಹೊರಡಿಸಿದ್ದ ಸುತ್ತೋಲೆಯು ಈ ಗೊಂದಲವನ್ನು ಮತ್ತಷ್ಟು ಹೆಚ್ಚಿಸಿತ್ತು. ಈ ನಿಯಮಗಳ ಅನ್ವಯ ಬಿಡುಗಡೆಯಾಗಿದ್ದ ಆಯ್ಕೆ ಪಟ್ಟಿಯನ್ನು ಪ್ರಶ್ನಿಸಿ ಅಭ್ಯರ್ಥಿಗಳು ನ್ಯಾಯಾಲಯದ ಮೊರೆ ಹೋಗಿದ್ದರು.
ಸುದ್ದಿ ಮತ್ತು ಜಾಹಿರಾತು ನೀಡಲು - 7204641701
ಮೀನಿನಹೆಜ್ಜೆ ನ್ಯೂಸ್, ಸಾಗರ


Comments
Post a Comment