ಇ-ಕೆವೈಸಿಗೆ ಗಡುವು ವಿಸ್ತರಣೆ
ಇ-ಕೆವೈಸಿಗೆ ಗಡುವು ವಿಸ್ತರಣೆ
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ ತೊಂದರೆಯಾಗಿರುವ ಹಿನ್ನೆಲೆಯಲ್ಲಿ ಇ-ಕೆವೈಸಿ ಪೂರ್ಣಗೊಳಿಸಲು ನೀಡಲಾಗಿದ್ದ ಗಡುವನ್ನು ಅ.20ರವರೆಗೆ ವಿಸ್ತರಿಸಲಾಗಿದೆ ಎಂದು ಸಚಿವ ರಿಜ್ವಾನ್ ಅರ್ಷದ್ ತಿಳಿಸಿದ್ದಾರೆ.
ಸರ್ವರ್ ಸಮಸ್ಯೆಯಿಂದಾಗಿ ಇ-ಕೆವೈಸಿ ಮಾಡಲು ಸಾಧ್ಯವಾಗದಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಯಾವುದೇ ಅರ್ಹ ಫಲಾನುಭವಿಗೆ ತೊಂದರೆಯಾಗದಂತೆ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಸುದ್ದಿ ಮತ್ತು ಜಾಹಿರಾತು ನೀಡಲು - 7204641701
ಮೀನಿನಹೆಜ್ಜೆ ನ್ಯೂಸ್, ಸಾಗರ

Comments
Post a Comment