ಡಿಸೆಂಬರ್ ಒಳಗೆ ಜಿ.ಪಂ., ತಾ.ಪಂ.ಚುನಾವಣೆ ಬಳಿಕ ತಿಂಗಳ ಅಂತರದಲ್ಲಿ ಗ್ರಾ.ಪಂ.ಚುನಾವಣೆ
ಡಿಸೆಂಬರ್ ಒಳಗೆ ಜಿ.ಪಂ., ತಾ.ಪಂ.ಚುನಾವಣೆ ಬಳಿಕ ತಿಂಗಳ ಅಂತರದಲ್ಲಿ ಗ್ರಾ.ಪಂ.ಚುನಾವಣೆ
ಕಾಂಗ್ರೆಸ್ ಸಿಎಲ್‌ಪಿ ಸಭೆಯಲ್ಲಿ ಸಿ.ಎಂ.ಡಿಕೆ ಶಿವಕುಮಾರ್ ಹೇಳಿಕೆ
ನಗರ ಸ್ಥಳೀಯ ಸಂಸ್ಥೆಗಳಿಗೆ ಸಂಬಂಧಿಸಿದ ಅರ್ಜಿ ವಿಚಾರಣೆ ಸೆ.29ಕ್ಕೆ: ಇದೇ ವೇಳೆ, ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆಯುವ ಚುನಾವಣೆಗಳ ಬಗ್ಗೆ ವಿಚಾರಣೆ ನಡೆದಿದೆ.
ಬೆಂಗಳೂರು : ಇದೇ ಡಿಸೆಂಬರ್ ಒಳಗೆ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಹಾಗೂ ಗ್ರೇಟರ್ ಬೆಂಗಳೂರು ಪ್ರಾಧಿಕಾರ(ಜಿಬಿಎ)ಕ್ಕೆ ಚುನಾವಣೆ ನಡೆಸಲು ಉದ್ದೇಶಿಸಲಾಗಿದೆ. ಚುನಾವಣೆ ನಡೆದು ತಿಂಗಳ ಅಂತರದಲ್ಲಿ ಗ್ರಾಮ ಪಂಚಾಯತ್ ಘೋಷಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಹಲವು ವರ್ಷಗಳಿಂದ ಬಾಕಿ ಇರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಕಾಲ ಸನ್ನಿಹಿತವಾದಂತೆ ತೋರುತ್ತಿದೆ.
ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷ(ಸಿಎಲ್‌ಪಿ)ದ ಸಭೆಯಲ್ಲಿ ಪಕ್ಷದ ಶಾಸಕರು ಮತ್ತು ಮೇಲ್ಮನೆ ಸದಸ್ಯರಿಗೆ ಮಾಹಿತಿ ನೀಡಿದ ಮುಖ್ಯಮಂತ್ರಿ ಡಿಕೆಶಿ. ಈಗಿನಿಂದಲೇ ಪಕ್ಷ ಸಂಘಟನೆಗೆ ಸಿದ್ದರಾಗಬೇಕು ಎಂದು ಟಾಸ್ಕ್ ನೀಡಿದರು.ಡಿಸೆಂಬರ್ ಅಂತ್ಯದೊಳಗೆ ಜಿ.ಪಂ., ತಾ.ಪಂ.ಹಾಗೂ ಜಿಬಿಎ ಚುನಾವಣೆ ನಡೆಸುವ ಗುರಿ ಇದೆ.ಅದಕ್ಕೆ ಸನ್ನದ್ದರಾಗಬೇಕು. ಇದಾಗಿ ತಿಂಗಳ ಬಳಿಕ ಗ್ರಾ.ಪಂ. ಚುನಾವಣೆಯನ್ನೂ ನಡೆಸಲಾಗುವುದು.
ಶತಾಯಗತಾಯ ನಾವು ಅತಿಹೆಚ್ಚು ಸ್ಥಾನಗಳನ್ನು ಗೆಲ್ಲಲೇಬೇಕು. ಅದಕ್ಕಾಗಿ ತಳಮಟ್ಟದಲ್ಲಿ ಪಕ್ಷ ಸಂಘಟನೆ ಮಾಡಬೇಕು.ಭಾರತ್ ಜೋಡೋ ಸಂಘಗಳನ್ನು ಹೆಚ್ಚು ನೋಂದಣಿ ಮಾಡಿಸಬೇಕು ಎಂದು ಸಿಎಂ ಸೂಚನೆ ನೀಡಿದ್ದಾರೆ.
ವಾರ್ಡ್ ವಿಂಗಡಣೆ, ಮೀಸಲಾತಿ ನಿಗದಿ ಪೂರ್ಣ ಹೈಕೋರ್ಟ್‌ಗೆ ಮಾಹಿತಿ ನೀಡಿದ್ದ ರಾಜ್ಯ
ಸರ್ಕಾರ: ಈಗಾಗಲೇ ಅವಧಿ ಮುಗಿದಿರುವ ರಾಜ್ಯದ 5,864 ಗ್ರಾಮ ಪಂಚಾಯಿತಿಗಳ ವಾರ್ಡ್ ವಿಂಗಡಣೆ ಮತ್ತು ಮೀಸಲಾತಿ ನಿಗದಿ ಪ್ರಕ್ರಿಯೆ ಪೂರ್ಣಗೊಂಡಿರುವುದಾಗಿ ರಾಜ್ಯ ಸರ್ಕಾರ ಕೆಲ ದಿನಗಳ ಹಿಂದೆಯಷ್ಟೆ ಹೈಕೋರ್ಟ್‌ಗೆ ಮಾಹಿತಿ ನೀಡಿ, ಚುನಾವಣೆ ಸಂಬಂಧದ ಮುಂದಿನ ಪ್ರಕ್ರಿಯೆ ಆರಂಭಿಸುವುದು ರಾಜ್ಯ ಚುನಾವಣಾ ಆಯೋಗಕ್ಕೆ ಬಿಟ್ಟ ವಿಚಾರ ಎಂದು ತಿಳಿಸಿತ್ತು.
ಗ್ರಾಮ ಪಂಚಾಯತ್‌ಗಳ ವಾರ್ಡ್ ವಿಂಗಡಣೆ ಚುನಾವಣಾ ಆಯೋಗಕ್ಕೆ ಬಿಟ್ಟ ವಿಚಾರ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿತ್ತು. ಹಾಗೂ ಮೀಸಲಾತಿ ಪ್ರಕ್ರಿಯೆ ಮುಗಿದಿರುವ ಕುರಿತು ಎಲ್ಲ ಜಿಲ್ಲಾಧಿಕಾರಿಗಳು ರಾಜ್ಯ ಚುನಾವಣಾ ಆಯೋಗ(ಎಸ್ ಇಸಿ)ದ ಗಮನಕ್ಕೆ ತಂದಿದ್ದಾರೆ. ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಸುವ ಸಂಬಂಧ ಮುಂದಿನ ಪ್ರಕ್ರಿಯೆ ಆರಂಭಿಸುವುದು. ಅವಧಿ ಮುಗಿದಿರುವ ರಾಜ್ಯದ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಸಲು ವಾರ್ಡ್‌ಗಳ ಸಂಖ್ಯೆ ಮತ್ತು ಸದಸ್ಯ ಸ್ಥಾನಗಳಿಗೆ ಮೀಸಲಾತಿ ನಿಗದಿಪಡಿಸಲು ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಅನು ಶಿವರಾಮನ್ ಹಾಗೂ ಟಿ.ಪಿ.ವಿವೇಕಾನಂದ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿದ ವೇಳೆ ರಾಜ್ಯ ಸರ್ಕಾರದ ಪರ ಹಾಜರಿದ್ದ ಹೆಚ್ಚುವರಿ ಅಡ್ವಕೇಟ್ ಜನರಲ್ (ಎಎಜಿ) ಪ್ರತಿಮಾ ಹೊನ್ನಾಪುರ ಅವರು, ಗ್ರಾಮ ಪಂಚಾಯಿತಿಗಳಿಗೆ ವಾರ್ಡ್ ಮರು ವಿಂಗಡಣೆ ಮತ್ತು ಮೀಸಲಾತಿ ನಿಗದಿ ಪಡಿಸಲಾಗಿದೆ.ಮುಂದಿನ ಕ್ರಮಕೈಗೊಳ್ಳುವುದು ರಾಜ್ಯ ಚುನಾವಣಾ ಆಯೋಗಕ್ಕೆ ಬಿಟ್ಟ ವಿಚಾರ.ಎಲ್ಲ ಪ್ರಕ್ರಿಯೆ ಮುಗಿದಿದೆ.ಈ ಸಂಬಂಧ 2026ರ ಸೆಪ್ಟೆಂಬರ್ 8ರಂದು ಪ್ರಮಾಣಪತ್ರವನ್ನೂ ಸಲ್ಲಿಸಲಾಗಿದೆ ಎಂದು ತಿಳಿಸಿದ್ದರು.
ಆಗ ನ್ಯಾಯಪೀಠ, ಅರ್ಜಿಯಲ್ಲಿನ ಕೋರಿಕೆಯಂತೆ ಅಗತ್ಯವಿದ್ದ ಕೆಲಸವನ್ನು ರಾಜ್ಯ ಸರ್ಕಾರ ಮಾಡಿರುವುದರಿಂದ ಅರ್ಜಿ ಅಸಿಂಧುವಾಗಿದೆ.ಈಗ ಮುಂದಿನ ಅಗತ್ಯ ಕ್ರಮಕೈಗೊಳ್ಳುವುದು ರಾಜ್ಯ ಚುನಾವಣಾ ಆಯೋಗದ ಕೆಲಸ ಎಂದಿತಲ್ಲದೆ, ಎಎಜಿ ಹೇಳಿಕೆಯನ್ನು ದಾಖಲಿಸಿಕೊಂಡು ಆಯೋಗದ ಕೋರಿಕೆಯ ಮೇರೆಗೆ ವಿಚಾರಣೆಯನ್ನು ಸೆಪ್ಟೆಂಬರ್ 17ಕ್ಕೆ ಮುಂದೂಡಿತು.
ನಗರ ಸ್ಥಳೀಯ ಸಂಸ್ಥೆಗಳಿಗೆ ಸಂಬಂಧಿಸಿದ ಅರ್ಜಿ ವಿಚಾರಣೆ ಸೆ.29ಕ್ಕೆ: ಇದೇ ವೇಳೆ, ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆಯುವ ಚುನಾವಣೆಗಳ ಬಗ್ಗೆ ವಿಚಾರಣೆ ನಡೆದಿದೆ.
ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಗೆ ಸಂಬಂಧಿಸಿದ ಪ್ರಕ್ರಿಯೆಗಳನ್ನು ಒಂದು ತಿಂಗಳೊಳಗೆ ಪೂರ್ಣಗೊಳಿಸುವುದಾಗಿ ರಾಜ್ಯ ಸರಕಾರ 2023ರ ದಶಂಬರ್‌ನಲ್ಲಿ ಹೈಕೋರ್ಟ್‌ಗೆ ಮಾಹಿತಿ ನೀಡಿತ್ತು. ಆದರೆ ಆ ಬಳಿಕ ವರ್ಷ ಮೂರಾಗುತ್ತಾ ಬಂದರೂ ಇನ್ನೂ ಚುನಾವಣೆ ನಡೆದಿಲ್ಲ.ಹೈಕೋರ್ಟ್ ಸೂಚನೆ ನೀಡಿದ್ದರೂ ಸರಕಾರ ಚುನಾವಣೆ ನಡೆಸಲು ಮುಂದಾಗದೇ ಇರುವುದಕ್ಕೆ ರಾಜ್ಯ ಚುನಾವಣಾ ಆಯೋಗ ಈ ಹಿಂದೆ ಸರಕಾರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿತ್ತು.ಈ ಅರ್ಜಿಯ ವಿಚಾರಣೆ ವೇಳೆ, 2023ರ ಮೇ ತಿಂಗಳ ಬಳಿಕ ಚುನಾವಣೆ ನಡೆಸುವುದಾಗಿ ಸರಕಾರದ ಪರ ಆಗಿನ ಎಷ್ಟೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು ಹೈಕೋರ್ಟ್‌ಗೆ ತಿಳಿಸಿದ್ದರು.
ಅವಧಿ ಮುಕ್ತಾಯಗೊಂಡರೂ ನಿಗದಿತ ವಿಳಂಬ ದೋರಣೆಗೆ ಸರಕಾರಕ್ಕೆ 5 ಲಕ್ಷ ರೂ.ದಂಡ: ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಸದಸ್ಯರ ಆಡಳಿತದ ಅವಧಿಯೊಳಗೆ ಚುನಾವಣೆ ನಡೆಸದೆ ವಿಳಂಬ ಧೋರಣೆ ಅನುಸರಿಸಲಾಗುತ್ತಿದೆ ಎಂದು ರಾಜ್ಯ ಸರಕಾರಕ್ಕೆ ಹೈಕೋರ್ಟ್ 5ಲಕ್ಷ ರೂ.ದಂಡವನ್ನೂ ವಿಧಿಸಿತ್ತು.
ಬೆಂಗಳೂರು ಪ್ರಾಧಿಕಾರ ನಿರ್ದೇಶನದ ಪ್ರಕಾರ ಇಂದು ಕರಡು ಮಾರ್ಗಸೂಚಿಗಳನ್ನು ಹೊರಡಿಸಲಾಗುತ್ತಿದೆ. ಆದ್ದರಿಂದ, 10 ದಿನಗಳ ಬಳಿಕ ಕಾಲಾವಕಾಶ ನೀಡಿದರೆ ಈ ಸಂಬಂಧ ದಾಖಲೆಯನ್ನು ಹಾಜರುಪಡಿಸಲಾಗುವುದು ಎಂದು ಎಎಜಿ ನ್ಯಾಯಪೀಠಕ್ಕೆ ಮನವಿ ಮಾಡಿದರು. ಇದನ್ನು ಪುರಸ್ಕರಿಸಿದ ನ್ಯಾಯಪೀಠ, ನಗರ ಸ್ಥಳೀಯ ಸಂಸ್ಥೆಗಳಿಗೆ ಸಂಬಂಧಿಸಿದ ಅರ್ಜಿಗಳ ವಿಚಾರಣೆಯನ್ನು ಸೆಪ್ಟೆಂಬರ್ 29ಕ್ಕೆ ಮುಂದೂಡಿದೆ.
ಹಿನ್ನೋಟ ಸುದ್ದಿ
ಸುದ್ದಿ ಮತ್ತು ಜಾಹಿರಾತು ನೀಡಲು - 7204641701
ಮೀನಿನಹೆಜ್ಜೆ ನ್ಯೂಸ್, ಸಾಗರ


Comments
Post a Comment